AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mojtaba Khamenei: ಇರಾನ್​​ನ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಖಮೇನಿ ಮಗ ಮೊಜ್ತಬಾ ನೇಮಕ

ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಮೊಜ್ತಬಾ ಖಮೇನಿ ನೇಮಕಗೊಂಡಿದ್ದಾರೆ. ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಈ ಮಹತ್ವದ ಹುದ್ದೆಯನ್ನು ವಹಿಸಿಕೊಂಡಿದ್ದಾರೆ. ಧಾರ್ಮಿಕ ಶಿಕ್ಷಣ ಪಡೆದ ಮೊಜ್ತಬಾ, ಕ್ರಾಂತಿಕಾರಿ ಗಾರ್ಡ್‌ನಲ್ಲಿ ಸೇವೆ ಸಲ್ಲಿಸಿದ್ದರು ಮತ್ತು ತಂದೆಯ ವಿಶ್ವಾಸಾರ್ಹ ಸಲಹೆಗಾರರಾಗಿದ್ದರು. ಈ ನೇಮಕವು ಇರಾನ್‌ನ ರಾಜಕೀಯ ಭವಿಷ್ಯ ಮತ್ತು ಪ್ರಾದೇಶಿಕ ಸ್ಥಿರತೆಯ ಮೇಲೆ ಹೇಗೆ ಪರಿಣಾಮ ಬೀರಲಿದೆ ಎಂಬುದು ಕುತೂಹಲಕಾರಿಯಾಗಿದೆ.

Mojtaba Khamenei: ಇರಾನ್​​ನ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಖಮೇನಿ ಮಗ ಮೊಜ್ತಬಾ ನೇಮಕ
ಮೊಜ್ತಬಾImage Credit source: Mathrubhumi English
ನಯನಾ ರಾಜೀವ್
|

Updated on: Mar 04, 2026 | 7:18 AM

Share

ಟೆಹ್ರಾನ್, ಮಾರ್ಚ್​ 04: ಇರಾನ್(Iran)​​ನ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಖಮೇನಿ ಪುತ್ರ ಮೊಜ್ತಬಾ ನೇಮಕಗೊಂಡಿದ್ದಾರೆ. ಇರಾನ್​​ನ ಸರ್ವೋಚ್ಚ ನಾಯಕರಾಗಿದ್ದ ಅಲಿ ಖಮೇನಿ ಇಸ್ರೇಲ್, ಅಮೆರಿಕ ನಡೆಸಿದ್ದ ವೈಮಾನಿಕ ದಾಳಿಯಲ್ಲಿ ಮೃತಪಟ್ಟಿದ್ದರು. ಈಗ ಅವರ ಪುತ್ರ ಮೊಜ್ತಬಾ ಖಮೇನಿ ಅವರನ್ನು ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಫೆಬ್ರವರಿ 28ರಂದು ಟೆಹ್ರಾನ್​​ನಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಅಲಿ ಖಮೇನಿ ಅವರ ಕಚೇರಿಯನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು.

ಆ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿದ್ದರು. ಈ ಘಟನೆಯ ನಂತರ ಇರಾನ್ ಏಳು ದಿನಗಳ ಸಾರ್ವಜನಿಕ ರಜೆಯೊಂದಿಗೆ 40 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ದೇಶಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಪ್ರಮುಖ ನಗರಗಳು ಮತ್ತು ಸರ್ಕಾರಿ ಕಟ್ಟಡಗಳ ಹೊರಗೆ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

ಮೊಜ್ತಬಾ ಖಮೇನಿ ಯಾರು? ಮೊಜ್ತಬಾ ಖಮೇನಿ 1969ರಲ್ಲಿ ಮಶಾದ್ ನಗರದಲ್ಲಿ ಜನಿಸಿದರು, ಧಾರ್ಮಿಕ ಶಿಕ್ಷಣವನ್ನು ಪಡೆದರು. ಇರಾನ್-ಇರಾಕ್ ಯುದ್ಧದ ಅಂತಿಮ ಹಂತಗಳಲ್ಲಿ ಅವರು ಕ್ರಾಂತಿಕಾರಿ ಗಾರ್ಡ್​​ನಲ್ಲಿಯೂ ಸೇವೆ ಸಲ್ಲಿಸಿದ್ದರು. ಅವರನ್ನು ಬಹಳ ಹಿಂದಿನಿಂದಲೂ ತಂದೆ ತೆಗೆದುಕೊಳ್ಳುವ ನಿರ್ಧಾರಗಳ ಹಿಂದೆ ಇವರು ನಿಂತಿದ್ದರು, ಅವರಿಗೆ ತುಂಬಾ ಹತ್ತಿರವಾಗಿದ್ದರು ಎನ್ನಲಾಗಿದೆ. ಅವರು ಎಂದೂ ಸರ್ಕಾರಿ ಹುದ್ದೆಗಳನ್ನು ಹೊಂದಿಲ್ಲವಾದರೂ ಅವರು ತಮ್ಮ ತಂದೆಗೆ ವಿಶ್ವಾಸಾರ್ಹ ಸಲಹೆಗಾರರಾಗಿದ್ದರು. ಅವರು ಮಿಲಿಟರಿ ಮತ್ತು ಅರೆಸೈನಿಕ ಪಡೆಗಳೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದರು.

ಇರಾನ್‌ನ ಶಿಯಾ ದೇವಪ್ರಭುತ್ವ ವ್ಯವಸ್ಥೆಯಲ್ಲಿ ಸುಪ್ರೀಂ ಲೀಡರ್ ಅತ್ಯಂತ ಶಕ್ತಿಶಾಲಿ ಸ್ಥಾನವಾಗಿದೆ. ಈ ಹುದ್ದೆಯನ್ನು ಹೊಂದಿರುವ ವ್ಯಕ್ತಿ ಸಶಸ್ತ್ರ ಪಡೆಗಳ ಕಮಾಂಡರ್-ಇನ್-ಚೀಫ್ ಆಗಿರುತ್ತಾರೆ ಮತ್ತು ದೇಶದ ಪ್ರಮುಖ ರಾಜಕೀಯ, ಮಿಲಿಟರಿ ಮತ್ತು ಕಾರ್ಯತಂತ್ರದ ನಿರ್ಧಾರಗಳ ಮೇಲೆ ಅಂತಿಮ ನಿರ್ಧಾರವನ್ನು ಹೊಂದಿರುತ್ತಾರೆ.

ಇರಾನ್ ಪ್ರಸ್ತುತ ಮಿಲಿಟರಿ ಮತ್ತು ರಾಜಕೀಯ ಉದ್ವಿಗ್ನತೆಯ ಅವಧಿಯನ್ನು ಎದುರಿಸುತ್ತಿದೆ. ಮೊಜ್ತಾಬಾ ಅವರನ್ನು ಸುಪ್ರೀಂ ಲೀಡರ್ ಆಗಿ ಬಡ್ತಿ ನೀಡಿರುವುದು ದೇಶವು ತನ್ನ ಪ್ರಸ್ತುತ ನೀತಿಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡುವುದಿಲ್ಲ ಎಂದು ಸೂಚಿಸುತ್ತದೆ. ಆದಾಗ್ಯೂ, ಅಧಿಕೃತ ಘೋಷಣೆ ಮತ್ತು ಆಂತರಿಕ ಪ್ರತಿಕ್ರಿಯೆಗಳ ನಂತರವೇ ಈ ನಾಯಕತ್ವ ಬದಲಾವಣೆಯು ಇರಾನಿನ ರಾಜಕೀಯ ಮತ್ತು ಪ್ರಾದೇಶಿಕ ಚಲನಶೀಲತೆಯ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂಬುದು ಇನ್ನಷ್ಟೆ ಸ್ಪಷ್ಟವಾಗಬೇಕಿದೆ.

ಮತ್ತಷ್ಟು ಓದಿ: ಇರಾನ್​ ಜೊತೆಗಿನ ಸಂಘರ್ಷದಲ್ಲಿ ಇಸ್ರೇಲ್ ಜೊತೆ ನಿಂತಿದ್ದಕ್ಕೆ ಪ್ರಧಾನಿ ಮೋದಿಗೆ ನೆತನ್ಯಾಹು ಧನ್ಯವಾದ

2009ರಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಅವರ ಹೆಸರು ಕೇಳಿಬಂದಿತ್ತು, ಪ್ರತಿಭಟನೆಗಳನ್ನು ಕಠಿಣವಾಗಿ ಹತ್ತಿಕ್ಕುವಲ್ಲಿ ಅವರ ಪಾತ್ರವಿದೆ. ಈಗ ಅವರನ್ನು ಸರ್ವೋಚ್ಚ ನಾಯಕನನ್ನಾಗಿ ನೇಮಿಸಿರುವುದು ದೇಶದಲ್ಲಿ ಹೊಸ ರಾಜಕೀಯ ಚರ್ಚೆಯನ್ನು ಹುಟ್ಟುಹಾಕಿದೆ. 1979ರ ಕ್ರಾಂತಿಯ ಸಮಯದಲ್ಲಿ ವಂಶಾವಳಿಯ ಆಧಾರದ ಮೇಲೆ ಅಧಿಕಾರ ವರ್ಗಾವಣೆಗೆ ವಿರೋಧವಿತ್ತು. ಆದ್ದರಿಂದ ಕೆಲವರು ಅವರ ಆಯ್ಕೆಯನ್ನು ಪ್ರಶ್ನಿಸುತ್ತಿದ್ದಾರೆ.

ಪ್ರಸ್ತುತ ಮಿಲಿಟರಿ ಬೆಂಬಲದಿಂದಾಗಿ ಮೊಜ್ತಬಾ ಖಮೇನಿ ಅವರನ್ನು ಬಲಿಷ್ಠ ನಾಯಕ ಎಂದು ಪರಿಗಣಿಸಲಾಗಿದೆ. ಮುಂಬರುವ ದಿನಗಳು ಅವರ ನಾಯಕತ್ವ ದೇಶವನ್ನು ಯಾವ ದಿಕ್ಕಿನಲ್ಲಿ ಕೊಂಡೊಯ್ಯುತ್ತದೆ ಎಂಬುದನ್ನು ನೋಡಬೇಕಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?