AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಮುಖ ಸುಟ್ಟು ಹೋಗಿದೆ, ಪ್ಲಾಸ್ಟಿಕ್ ಸರ್ಜರಿ ಬಳಿಕವಷ್ಟೇ ಮಾತನಾಡಲು ಸಾಧ್ಯ

ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಫೆಬ್ರವರಿ 28ರ ಅಮೆರಿಕ-ಇಸ್ರೇಲಿ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದಾರೆ. ಮುಖ ಸುಟ್ಟು, ಮಾತನಾಡಲು ಅಸಾಧ್ಯವಾಗಿದ್ದು, ಪ್ಲಾಸ್ಟಿಕ್ ಸರ್ಜರಿ ಬೇಕಾಗಿದೆ. ಒಂದು ಕಾಲು ಕಳೆದುಕೊಂಡು, ಕೈಬರಹದ ಚೀಟಿಗಳ ಮೂಲಕ ನಿಗೂಢವಾಗಿ ಆಡಳಿತ ನಡೆಸುತ್ತಿದ್ದಾರೆ. ಭದ್ರತಾ ಕಾರಣಗಳಿಂದಾಗಿ ಪ್ರಮುಖ ನಿರ್ಧಾರಗಳನ್ನು ಮಿಲಿಟರಿಗೆ ಬಿಡಲಾಗಿದ್ದು, ಇರಾನ್ ನಾಯಕತ್ವದಲ್ಲಿ ಬಿರುಕು ಮೂಡಿದೆ. ಇಸ್ರೇಲ್‌ನಿಂದ ಜೀವಭಯವೂ ಇದೆ.

ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಮುಖ ಸುಟ್ಟು ಹೋಗಿದೆ, ಪ್ಲಾಸ್ಟಿಕ್ ಸರ್ಜರಿ ಬಳಿಕವಷ್ಟೇ ಮಾತನಾಡಲು ಸಾಧ್ಯ
ಮೊಜ್ತಬಾ Image Credit source: The Media Line
ನಯನಾ ರಾಜೀವ್
|

Updated on: Apr 24, 2026 | 7:49 AM

Share

ಟೆಹ್ರಾನ್, ಏಪ್ರಿಲ್ 24:ಇರಾನ್‌(Iran)ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಜೀವಂತವಾಗಿದ್ದಾರೆ. ಆದರೆ, ಅವರು ಅಧಿಕಾರ ನಡೆಸುತ್ತಿರುವ ರೀತಿ ಮತ್ತು ಅವರ ಪ್ರಸ್ತುತ ಆರೋಗ್ಯ ಸ್ಥಿತಿ ಅಕ್ಷರಶಃ ಬೆಚ್ಚಿಬೀಳಿಸುವಂತಿದೆ. ಫೆಬ್ರವರಿ 28ರ ಅಮೆರಿಕ-ಇಸ್ರೇಲಿ ವೈಮಾನಿಕ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರು, ಈಗ ಮಾತಿಲ್ಲದೆ ‘ನಿಗೂಢ ನಾಯಕ’ನಾಗಿ ಉಳಿದಿದ್ದಾರೆ.

ದಿ ನ್ಯೂಯಾರ್ಕ್​ ಟೈಮ್ಸ್​ ವರದಿ ಪ್ರಕಾರ, ಮೊಜ್ತಬಾ ಖಮೇನಿ ಸದ್ಯ ವೈದ್ಯಕೀಯ ಸಿಬ್ಬಂದಿಯ ಕಣ್ಗಾವಲಿನಲ್ಲಿದ್ದಾರೆ. ಅವರ ಮುಖ ಮತ್ತು ತುಟಿಗಳ ಮೇಲೆ ತೀವ್ರವಾದ ಸುಟ್ಟಗಾಯಗಳಾಗಿದ್ದು, ಅವರಿಗೆ ಮಾತನಾಡಲು ಸಾಧ್ಯವಾಗುತ್ತಿಲ್ಲ. ಸಹಜ ಸ್ಥಿತಿಗೆ ಮರಳಲು ಅವರಿಗೆ ಪ್ಲಾಸ್ಟಿಕ್ ಸರ್ಜರಿಯ ಅಗತ್ಯವಿದೆ. ಅವರ ಒಂದು ಕಾಲಿಗೆ ಈಗಾಗಲೇ ಮೂರು ಶಸ್ತ್ರಚಿಕಿತ್ಸೆಗಳಾಗಿದ್ದು, ಅವರು ಈಗ ಕೃತಕ ಅಂಗದ (Prosthetic leg) ಜೋಡಣೆಗಾಗಿ ಕಾಯುತ್ತಿದ್ದಾರೆ.

ಒಂದು ಕೈ ಕೂಡ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಚೇತರಿಸಿಕೊಳ್ಳುತ್ತಿದೆ. ಅತ್ಯಂತ ಆಶ್ಚರ್ಯಕರ ಸಂಗತಿಯೆಂದರೆ, ಇಂದಿನ ಡಿಜಿಟಲ್ ಯುಗದಲ್ಲಿ ಮೊಜ್ತಬಾ ಖಮೇನಿ ಅವರು ದೇಶದ ಆಡಳಿತ ನಡೆಸುತ್ತಿರುವುದು ‘ಕೈಬರಹದ ಚೀಟಿಗಳ’ ಮೂಲಕ. ಐಆರ್‌ಜಿಸಿ (IRGC) ಕಮಾಂಡರ್‌ಗಳು ಅಥವಾ ಸಚಿವರು ಅವರನ್ನು ನೇರವಾಗಿ ಭೇಟಿ ಮಾಡುತ್ತಿಲ್ಲ.

ವಿಶ್ವಾಸಾರ್ಹ ಕೊರಿಯರ್‌ಗಳ ಮೂಲಕ ಮೊಹರು ಮಾಡಿದ ಕೈಬರಹದ ಸಂದೇಶಗಳು ರಸ್ತೆಯ ಮೂಲಕ ರವಾನೆಯಾಗುತ್ತವೆ. ಮೊಜ್ತಬಾ ಅವರ ಪ್ರತಿಕ್ರಿಯೆಗಳು ಕೂಡ ಅದೇ ಮಾದರಿಯಲ್ಲಿ ಮರಳಿ ಬರುತ್ತವೆ. ಅವರ ದೈಹಿಕ ಅಸಮರ್ಥತೆ ಮತ್ತು ಸುರಕ್ಷತೆಯ ಕಾರಣದಿಂದಾಗಿ ದೇಶದ ಪ್ರಮುಖ ನಿರ್ಧಾರಗಳನ್ನು ಪ್ರಸ್ತುತ ಮಿಲಿಟರಿ ನಾಯಕರಿಗೆವಹಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಪ್ಲಾಸ್ಟಿಕ್ ಸರ್ಜರಿ ಮತ್ತು ಕೃತಕ ಅಂಗಗಳ ಜೋಡಣೆಯ ನಂತರ ಮೊಜ್ತಬಾ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಾರೆಯೇ? ಅಥವಾ ತೆರೆಯ ಮರೆಯಲ್ಲೇ ಮಿಲಿಟರಿ ಆಡಳಿತ ಮುಂದುವರೆಯುತ್ತದೆಯೇ ಎಂಬುದು ಈಗಿನ ದೊಡ್ಡ ಪ್ರಶ್ನೆ. ಇಸ್ರೇಲ್ ಅವರನ್ನು ಪತ್ತೆಹಚ್ಚಿ ಕೊಲ್ಲಬಹುದು ಎಂಬ ಭಯದಿಂದ ಹಿರಿಯ ಸರ್ಕಾರಿ ಅಧಿಕಾರಿಗಳು ಅವರನ್ನು ಭೇಟಿ ಮಾಡುತ್ತಿಲ್ಲ.

ಮತ್ತಷ್ಟು ಓದಿ: ಸತ್ತಿರಬಹುದು ಅಥವಾ ಕೆಟ್ಟ ಸ್ಥಿತಿಯಲ್ಲಿರಬಹುದು; ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ

ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಮತ್ತು ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ದೇಶದ ಬಗ್ಗೆ ಸಾಕಷ್ಟು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಸಿಎನ್‌ಎನ್ ವರದಿಗಳ ಪ್ರಕಾರ, ಮೊಜ್ತಬಾ ಖಮೇನಿಯು ಸಕ್ರಿಯ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಿಂದ ದೂರವಿರುವುದು ಇರಾನ್ ನಾಯಕತ್ವದೊಳಗೆ ಬಿರುಕು ಮೂಡಿಸಿದೆ. ಇರಾನ್ ನಾಯಕತ್ವದ ವಿವಿಧ ಹಂತಗಳಲ್ಲಿ ಅಮೆರಿಕದೊಂದಿಗೆ ಯಾವ ರೀತಿ ಸಂಧಾನ ಮಾಡಿಕೊಳ್ಳಬೇಕು ಎಂಬ ಬಗ್ಗೆ ಒಮ್ಮತ ಮೂಡುತ್ತಿಲ್ಲ. ಸಂಧಾನಕಾರರಿಗೆ ಎಷ್ಟು ಅಧಿಕಾರ ನೀಡಬೇಕು ಎಂಬ ಬಗ್ಗೆಯೂ ಗೊಂದಲಗಳಿವೆ. ಫೆಬ್ರವರಿ 28 ರಂದು ನಡೆದ ಅಮೆರಿಕ-ಇರಾನ್ ದಾಳಿಯಲ್ಲಿ ಮೊಜ್ತಬಾ ಅವರ ಪಾದಕ್ಕೆ ಗಂಭೀರ ಗಾಯವಾಗಿದ್ದು, ಮುಖ ಮತ್ತು ಕಣ್ಣಿಗೆ ಪೆಟ್ಟಾಗಿದೆ ಎಂದು ಈ ಹಿಂದೆ ವರದಿಯಾಗಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ