AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಶೇ.82ರಷ್ಟು ಅತ್ಯಾಚಾರಗಳು ತಂದೆ, ಅಜ್ಜ, ಅಣ್ಣಂದಿರಿಂದಲೇ ನಡೆಯುತ್ತಿವೆ; ಶಾಕಿಂಗ್ ವಿಷಯ ಬಿಚ್ಚಿಟ್ಟ ಮಾಜಿ ಸಂಸದೆ

ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದೆ, ಅಲ್ಲಿ ಮಹಿಳೆಯರಿಗೆ ಸ್ವಾತಂತ್ರ್ಯವಿಲ್ಲ, ಮುಸ್ಲಿಮರನ್ನು ಹೊರತುಪಡಿಸಿ ಬೇರೆ ಧರ್ಮದವರು ಅಲ್ಲಿ ಬದುಕಲು ಸಾಧ್ಯವೇ ಇಲ್ಲದಂತಹ ಪರಿಸ್ಥಿತಿಯಿದೆ, ಅಲ್ಲಿ ಸೇನಾ ಮುಖ್ಯಸ್ಥನ ಮುಂದೆ ಪ್ರಧಾನಿ ಹುದ್ದೆಯೂ ನಾಮ್​ಕಾವಸ್ಥೆ ಎಂಬುದೆಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ, ಪಾಕಿಸ್ತಾನದಲ್ಲಿ ವರ್ಷದಿಂದ ವರ್ಷಕ್ಕೆ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕೂಡ ಹೆಚ್ಚುತ್ತಿದೆ. ಈ ಬಗ್ಗೆ ಆಘಾತಕಾರಿ ವಿಷಯವನ್ನು ಪಾಕಿಸ್ತಾನದ ಮಾಜಿ ಸಂಸದೆ ಬಿಚ್ಚಿಟ್ಟಿದ್ದಾರೆ.

ಪಾಕಿಸ್ತಾನದ ಶೇ.82ರಷ್ಟು ಅತ್ಯಾಚಾರಗಳು ತಂದೆ, ಅಜ್ಜ, ಅಣ್ಣಂದಿರಿಂದಲೇ ನಡೆಯುತ್ತಿವೆ; ಶಾಕಿಂಗ್ ವಿಷಯ ಬಿಚ್ಚಿಟ್ಟ ಮಾಜಿ ಸಂಸದೆ
Former Pakistani Lawmaker Shandana Gulzar Khan
ಸುಷ್ಮಾ ಚಕ್ರೆ
|

Updated on: May 16, 2025 | 9:58 PM

Share

ಇಸ್ಲಮಾಬಾದ್, ಮೇ 16: ಪಾಕಿಸ್ತಾನದಲ್ಲಿ (Pakistan) ಮೊದಲಿನಿಂದಲೂ ಮಹಿಳಾ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಗಿದೆ. ಅಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಕೂಡ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆಯೇ ವಿನಃ ಕಡಿಮೆಯಾಗುತ್ತಿಲ್ಲ. ಇದೀಗ ಪಾಕಿಸ್ತಾನದ ಮಾಜಿ ಸಂಸದೆ ಶಾಂತನಾ ಗುಲ್ಜಾರ್ ಖಾನ್ ಟಿವಿ ಲೈವ್ ಸಂದರ್ಶನದಲ್ಲಿ ಪಾಕಿಸ್ತಾನದ ಮತ್ತೊಂದು ಕರಾಳ ಮುಖವನ್ನು ಬಿಚ್ಚಿಟ್ಟಿದ್​ದಾರೆ. ಪಾಕಿಸ್ತಾನದ ಶೇ. 82ರಷ್ಟು ಅತ್ಯಾಚಾರಕ್ಕೊಳಗಾದ ಮಹಿಳೆಯರು ತಮ್ಮ ತಂದೆ ಮತ್ತು ಸಹೋದರರಿಂದಲೇ ಲೈಂಗಿಕ ಕಿರುಕುಳಕ್ಕೊಳಗಾದವರು ಎಂಬ ಆಘಾತಕಾರಿ ಮಾಹಿತಿಯನ್ನು ಅವರು ಹಂಚಿಕೊಂಡಿದ್ದಾರೆ.

ಪಾಕಿಸ್ತಾನದಲ್ಲಿ ಶೇ. 82ರಷ್ಟು ಲೈಂಗಿಕ ದೌರ್ಜನ್ಯಗಳು ಅತ್ಯಾಚಾರಕ್ಕೊಳಗಾದ ಮಹಿಳೆಯ ತಂದೆ ಅಥವಾ ಸಹೋದರರಿಂದಲೇ ನಡೆಯುತ್ತವೆ ಎಂದು ಪಾಕಿಸ್ತಾನದ ಮಾಜಿ ಮಹಿಳಾ ಸಂಸದೆ ಹೇಳಿದ್ದಾರೆ. ಇದು ಪಾಕಿಸ್ತಾನ ದೇಶದಲ್ಲಿ ಮಹಿಳೆಯರಿಗೆ ಸುರಕ್ಷತೆಯ ವ್ಯಾಪ್ತಿಯನ್ನು ಎತ್ತಿ ತೋರಿಸುತ್ತದೆ. ಮಹಿಳೆಯರ ಮೇಲೆ ಹೆಚ್ಚಾಗಿ ದೌರ್ಜನ್ಯ ಎಸಗುವ ಕುಟುಂಬದ ಸದಸ್ಯರಲ್ಲಿ ತಂದೆ, ಸಹೋದರರು, ಅಜ್ಜ ಮತ್ತು ಚಿಕ್ಕಪ್ಪಂದಿರು ಕೂಡ ಸೇರಿದ್ದಾರೆ ಎಂದು ಅವರು ಹೇಳಿದ್ದಾರೆ. ಪಾಕಿಸ್ತಾನದ ಮಹಿಳೆಯರ ಮೇಲೆ ಅವರದೇ ರಕ್ತಸಂಬಂಧ ಹೊಂದಿರುವ ಅಪ್ಪ, ಅಣ್ಣ, ಅಜ್ಜ, ಚಿಕ್ಕಪ್ಪಂದಿರು ಅತ್ಯಾಚಾರ ನಡೆಸುವ ಮೂಲಕ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ ಎಂಬುದನ್ನು ರಾಷ್ಟ್ರೀಯ ಸುದ್ದಿವಾಹಿನಿಯ ಲೈವ್ ಕಾರ್ಯಕ್ರಮದಲ್ಲಿ ಅಲ್ಲಿನ ಮಾಜಿ ಸಂಸದೆಯೇ ಬಯಲು ಮಾಡಿದ್ದಾರೆ.

ಇದನ್ನೂ ಓದಿ
Image
ಆಪರೇಷನ್ ಸಿಂಧೂರ್ ಕುರಿತು ಭಾರತೀಯ ಸೇನೆಯಿಂದ ಸುದ್ದಿಗೋಷ್ಠಿ
Image
ಹಿಂದೂ ಮಹಿಳೆಯರ ಕುಂಕುಮ ಅಳಿಸಿದವರಿಗೆ ತಕ್ಕ ಶಾಸ್ತಿಯಾಗಿದೆ ಎಂದ ಸೇನೆ
Image
ಪಾಕ್​ನಲ್ಲಿ ಭಾರತದ ದಾಳಿ ಆರಂಭದಿಂದ ಇಲ್ಲಿಯವರೆಗೆ ಏನೇನಾಯ್ತು?
Image
ಪಾಕಿಸ್ತಾನದ ಈ 9 ಸ್ಥಳಗಳ ಮೇಲೆ ಭಾರತದಿಂದ ದಾಳಿ, ಮನೆ ಬಿಟ್ಟು ಓಡಿದ ಜನರು

ಇದನ್ನೂ ಓದಿ: 2019ರ ಪೊಲ್ಲಾಚಿ ಅತ್ಯಾಚಾರ ಪ್ರಕರಣ; 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಅವರ ಪ್ರಕಾರ, ಈ ರೀತಿಯ ಹಿಂಸೆಗೆ ಒಳಗಾದ ಹುಡುಗಿಯರು ಮತ್ತು ಮಹಿಳೆಯರು ಪೊಲೀಸರಿಗೆ ದೂರು ನೀಡಲು ಸಹ ಹಿಂಜರಿಯುತ್ತಾರೆ. ಪಾಕಿಸ್ತಾನಿ ಸಮಾಜದಲ್ಲಿ ಯಾರೂ ಈ ವಿಷಯದ ಬಗ್ಗೆ ಮಾತನಾಡಲು ಏಕೆ ಸಿದ್ಧರಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ ಮತ್ತು ಆಧುನಿಕ ಸಮಾಜದಲ್ಲೂ ಕಾಡುತ್ತಿರುವ ಈ ವಿಷಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು