ಮೊಜಾಂಬಿಕ್ ಸಮುದ್ರದಲ್ಲಿ ದೋಣಿ ಮುಳುಗಿ 90 ಜನ ಜಲಸಮಾಧಿ

|

Updated on: Apr 08, 2024 | 9:06 AM

ದಕ್ಷಿಣ ಆಫ್ರಿಕಾದ ದ್ವೀಪ ರಾಷ್ಟ್ರ ಮೊಜಾಂಬಿಕ್ ಕರಾವಳಿ ತೀರದ ಬಳಿ ದುರಂತ ಸಂಭವಿಸಿದ್ದು, 130 ಮಂದಿ ಪ್ರಯಾಣಿಸುತ್ತಿದ್ದ ಮೀನುಗಾರಿಕಾ ದೋಣಿ ಮುಳುಗಿ 90 ಮಂದಿ ಜಲ ಸಮಾಧಿಯಾಗಿರುವ ಮಾಹಿತಿ ಲಭ್ಯವಾಗಿದೆ. ಮೊಜಾಂಬಿಕ್ ದ್ವೀಪದಿಂದ ನಂಪುಲಾ ದ್ವೀಪಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ. ದೋಣಿಯಲ್ಲಿ ನಿಗದಿಗಿಂತ ಹೆಚ್ಚು ಜನರನ್ನು ತುಂಬಿದ್ದೇ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಮೊಜಾಂಬಿಕ್ ಸಮುದ್ರದಲ್ಲಿ ದೋಣಿ ಮುಳುಗಿ 90 ಜನ ಜಲಸಮಾಧಿ
Image Credit source: News24
Follow us on

ದಕ್ಷಿಣ ಆಫ್ರಿಕಾದ ದ್ವೀಪ ರಾಷ್ಟ್ರ ಮೊಜಾಂಬಿಕ್ ಕರಾವಳಿ ತೀರದ ಬಳಿ ದುರಂತ ಸಂಭವಿಸಿದ್ದು, 130 ಮಂದಿ ಪ್ರಯಾಣಿಸುತ್ತಿದ್ದ ಮೀನುಗಾರಿಕಾ ದೋಣಿ ಮುಳುಗಿ 90 ಮಂದಿ ಜಲ ಸಮಾಧಿಯಾಗಿರುವ ಮಾಹಿತಿ ಲಭ್ಯವಾಗಿದೆ. ಮೊಜಾಂಬಿಕ್ ದ್ವೀಪದಿಂದ ನಂಪುಲಾ ದ್ವೀಪಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ. ದೋಣಿಯಲ್ಲಿ ನಿಗದಿಗಿಂತ ಹೆಚ್ಚು ಜನರನ್ನು ತುಂಬಿದ್ದೇ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಈ ದೋಣಿ ದೋಣಿ ಪ್ರಯಾಣಿಕರ ಸಾಗಣೆಗೆ ಯೋಗ್ಯವಾಗಿಲ್ಲ, ಸತ್ತವರಲ್ಲಿ ಅನೇಕ ಮಕ್ಕಳೂ ಸೇರಿದ್ದಾರೆ. ನಾಪತ್ತೆಯಾದವರಿಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸಮುದ್ರದ ಪರಿಸ್ಥಿತಿಯು ಈ ಕಾರ್ಯಕ್ಕೆ ತೊಂದರೆಯನ್ನುಂಟುಮಾಡುತ್ತಿದೆ. ಮೊಜಾಂಬಿಕ್​ನಲ್ಲಿ ಕಾಲರಾ ಪ್ರಕರಣಗಳು ಕೂಡ ಹೆಚ್ಚಿದೆ. ಅಕ್ಟೋಬರ್ 2023 ರಿಂದ ಸುಮಾರು 15,000 ಪ್ರಕರಣಗಳನ್ನು ವರದಿ ಮಾಡಿದೆ, 32 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಇದರಿಂದಾಗಿ ಜನರು ಮೊಜಾಂಬಿಕ್​ನಿಂದ ವಲಸೆ ಹೋಗುತ್ತಿದ್ದಾರೆ, ಇದಲ್ಲದೇ ನೆರೆಯ ಕಾಬೋ ಡೆಲ್ಗಾಡೊದಲ್ಲಿ ಜಿಹಾದಿ ದಾಳಿಯಿಂದ ತಪ್ಪಿಸಿಕೊಳ್ಳಲು ಪಲಾಯನ ಮಾಡುವವರ ಸಂಖ್ಯೆಯೂ ಹೆಚ್ಚಿದೆ.

ಮತ್ತಷ್ಟು ಓದಿ: ಉತ್ತರ ಪ್ರದೇಶ: ಗಂಗಾ ನದಿಯಲ್ಲಿ ದೋಣಿ ಮುಳುಗಿ 3 ಮಂದಿ ಸಾವು

ಬದುಕುಳಿದ 5 ಜನರಲ್ಲಿ 2 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ದೋಣಿ ಮೊಜಾಂಬಿಕ್ ದ್ವೀಪದ ಕಡೆಗೆ ಹೋಗುತ್ತಿತ್ತು. ಈ ದ್ವೀಪವನ್ನು ವಾಸ್ಕೋ ಡ ಗಾಮಾ ಕಂಡುಹಿಡಿದಿದ್ದ ಎಂದು ಹೇಳಲಾಗಿದೆ. ಮೊಜಾಂಬಿಕ್​ನಲ್ಲಿ ಹಲವು ಬಾರಿ ವಿನಾಶಕಾರಿ ಚಂಡಮಾರುತಗಳು ಎದುರಾಗುತ್ತವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ