AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ಭಾರತದ ಮೋಸ್ಟ್​ ವಾಂಟೆಡ್ ಉಗ್ರನ ನಿಗೂಢ ಹತ್ಯೆ

ಭಯೋತ್ಪಾದಕರ ಸುರಕ್ಷಿತ ಸ್ವರ್ಗವಾಗಿರುವ ಪಾಕಿಸ್ತಾನವು ಇತ್ತೀಚಿನ ದಿನಗಳಲ್ಲಿ ಉದ್ವಿಗ್ನ ಸ್ಥಿತಿಯಲ್ಲಿದೆ. ಏಕೆಂದರೆ ತನ್ನ ದೇಶದಲ್ಲಿ ನೆಲೆಸಿರುವ ಭಯೋತ್ಪಾದಕರು ಒಬ್ಬೊಬ್ಬರಾಗಿ ನಿಗೂಢವಾಗಿ ಸಾಯುತ್ತಿದ್ದಾರೆ. ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶೇಖ್ ಜಮೀಲ್ ಉರ್ ರೆಹಮಾನ್ ನಿಗೂಢವಾಗಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

ಪಾಕಿಸ್ತಾನದಲ್ಲಿ ಭಾರತದ ಮೋಸ್ಟ್​ ವಾಂಟೆಡ್ ಉಗ್ರನ ನಿಗೂಢ ಹತ್ಯೆ
ಉಗ್ರ-ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on:Mar 03, 2024 | 10:00 AM

Share

ಭಾರತದ ಮೋಸ್ಟ್​ ವೆಂಟೆಡ್​ ಉಗ್ರ ಶೇಖ್ ಜಮೀಲ್-ಉರ್-ರೆಹಮಾನ್ ಪಾಕಿಸ್ತಾನದಲ್ಲಿ ನಿಗೂಢವಾಗಿ ಕೊಲೆಯಾಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಕಮಾಂಡರ್ ಖೈಬರ್ ಪಖ್ತುಂಖ್ವಾದ ಅಬೋಟಾಬಾದ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಯುನೈಟೆಡ್ ಜಿಹಾದ್ ಕೌನ್ಸಿಲ್ (UJC) ನ ಸ್ವಯಂ-ಘೋಷಿತ ಪ್ರಧಾನ ಕಾರ್ಯದರ್ಶಿ ರೆಹಮಾನ್ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಗೆ ಸೇರಿದವನು.

ಶೇಖ್ ಜಮೀಲ್-ಉರ್-ರೆಹಮಾನ್ ಯಾರು? ಶೇಖ್ ಜಮೀಲ್-ಉರ್-ರೆಹಮಾನ್ ಮೂಲತಃ ಪುಲ್ವಾಮಾದವನು, ಆದರೆ ಕಾಶ್ಮೀರದಲ್ಲಿ ಅನೇಕ ಭಯೋತ್ಪಾದಕ ದಾಳಿಗಳನ್ನು ಸಂಘಟಿಸಿದ ನಂತರ ಪಾಕಿಸ್ತಾನಕ್ಕೆ ಸ್ಥಳಾಂತರಗೊಂಡಿದ್ದ. ಅಕ್ಟೋಬರ್ 2022 ರಲ್ಲಿ ಭಾರತ ಸರ್ಕಾರದಿಂದ ಭಯೋತ್ಪಾದಕ ಎಂದು ಗೊತ್ತುಪಡಿಸಿದ ರೆಹಮಾನ್ ಪಾಕಿಸ್ತಾನದ ಗುಪ್ತಚರ ಸಂಸ್ಥೆ ISI ಯೊಂದಿಗೆ ನಿಕಟ ಸಂಬಂಧ ಹೊಂದಿದ್ದ ಎನ್ನಲಾಗಿದೆ.

ಪಾಕಿಸ್ತಾನದಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರಗಾಮಿ ಹತ್ಯೆ ಇದೇ ರೀತಿಯ ಘಟನೆಯಲ್ಲಿ, ಡಿಸೆಂಬರ್ 17, 2023 ರಂದು ಖೈಬರ್ ಪಖ್ತುಂಖ್ವಾದಲ್ಲಿ ಲಷ್ಕರ್-ಎ-ತೈಬಾದೊಂದಿಗೆ ಸಂಬಂಧ ಹೊಂದಿರುವ ಭಯೋತ್ಪಾದಕ ಹಬೀಬುಲ್ಲಾ ಮೇಲೆ ಅಪರಿಚಿತ ಬಂದೂಕುಧಾರಿಗಳಿಂದ ಗುಂಡಿನ ದಾಳಿ ನಡೆದಿತ್ತು. ಅಕ್ಟೋಬರ್ 2022 ರಲ್ಲಿ, ಭಾರತವು ಶೇಖ್ ಜಮೀಲ್ ಉರ್ ರೆಹಮಾನ್​ನನ್ನು ಭಯೋತ್ಪಾದಕ ಎಂದು ಘೋಷಿಸಿತು. ಭಯೋತ್ಪಾದಕರ ಉದ್ದೇಶ ಅಪಾಯಕಾರಿಯಾಗಿತ್ತು.

ಮತ್ತಷ್ಟು ಓದಿ: ಅನಂತ್​​ನಾಗ್​, ಬಾರಾಮುಲ್ಲಾದಲ್ಲಿ ಮುಂದುವರಿದ ಎನ್​ಕೌಂಟರ್; ಒಬ್ಬ ಉಗ್ರನ ಹತ್ಯೆ

ಕಾಶ್ಮೀರದಲ್ಲಿ ನಡೆದ ಹಲವು ದಾಳಿಗಳಿಗೆ ಭಯೋತ್ಪಾದಕ ಶೇಖ್ ಜಮೀಲ್ ಉರ್ ರೆಹಮಾನ್ ಕಾರಣನಾಗಿದ್ದ, ಹಲವು ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ. ಭಯೋತ್ಪಾದಕ ಶೇಖ್ ಜಮೀಲ್ ಉರ್ ರೆಹಮಾನ್ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಜೊತೆ ನಿಕಟ ಸಂಪರ್ಕ ಹೊಂದಿದ್ದ ಎಂದು ಹೇಳಲಾಗಿದೆ. 2018 ರಲ್ಲಿ, ಭಯೋತ್ಪಾದಕ ಶೇಖ್ ಜಮೀಲ್ ಉರ್ ರೆಹಮಾನ್ ಕಾಶ್ಮೀರಿ ಹುಡುಗರಿಗೆ ಶಸ್ತ್ರಾಸ್ತ್ರಗಳನ್ನು ತೆಗೆದುಕೊಳ್ಳುವಂತೆ ಮತ್ತು ಜಿಹಾದ್ಗಾಗಿ ತರಬೇತಿಯನ್ನು ತೆಗೆದುಕೊಳ್ಳುವಂತೆ ಮನವಿ ಮಾಡಿದ್ದರು.

ಲಷ್ಕರ್-ಎ-ತೊಯ್ಬಾದ ಉಗ್ರಗಾಮಿ ಅಜಂ ಚೀಮಾ ಫೆಬ್ರವರಿಯಲ್ಲಿಯೇ ಸಾವನ್ನಪ್ಪಿದ್ದಾನೆ. ಚೀಮಾ ಹೃದಯಾಘಾತದಿಂದ ಫೈಸಲಾಬಾದ್‌ನಲ್ಲಿ ಸಾವನ್ನಪ್ಪಿದ್ದಾನೆ. 2006ರ ರೈಲು ಬಾಂಬ್ ಸ್ಫೋಟ ಮತ್ತು 26/11 ದಾಳಿಯ ಸಂಚಿನಲ್ಲಿ ಈತ ಭಾಗಿಯಾಗಿದ್ದ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಲಷ್ಕರ್ ಕಮಾಂಡರ್ ಅದ್ನಾನ್ ಅಹ್ಮದ್ ಅಲಿಯಾಸ್ ಅಬು ಹಂಝಾಲಾ ಅವರನ್ನು ಕರಾಚಿಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಅದಕ್ಕೂ ಮುನ್ನ ನವೆಂಬರ್‌ನಲ್ಲಿ ಲಷ್ಕರ್ ಕಮಾಂಡರ್ ಅಕ್ರಮ್ ಗಾಜಿ ಗುಂಡು ಹಾರಿಸಿದ್ದರು. ಇದಲ್ಲದೆ, ಖ್ವಾಜಾ ಶಾಹಿದ್ 2018 ರಲ್ಲಿ ಕೊಲ್ಲಲ್ಪಟ್ಟಿದ್ದ. ಕಾಶ್ಮೀರ ಭಯೋತ್ಪಾದಕ ದಾಳಿಗೆ ಕಾಣನಾಗಿದ್ದ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:00 am, Sun, 3 March 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ