ಶೇಖ್ ಹಸೀನಾಗೆ ದೆಹಲಿಯಲ್ಲಿ ಆಶ್ರಯ ನೀಡಿರುವುದರಿಂದಲೇ ಭಾರತ-ಬಾಂಗ್ಲಾದೇಶದ ಸಂಬಂಧ ಮತ್ತಷ್ಟು ಹದಗೆಟ್ಟಿದೆ; ಮೊಹಮ್ಮದ್ ಯೂನಸ್
ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ನ್ಯೂಯಾರ್ಕ್‌ನಲ್ಲಿ ವಿವಾದವನ್ನು ಹುಟ್ಟುಹಾಕಿದ್ದಾರೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ (UNGA) ಸಂದರ್ಭದಲ್ಲಿ ನ್ಯೂಯಾರ್ಕ್‌ನಲ್ಲಿ ಮಾತನಾಡಿದ ಯೂನಸ್, ಭಾರತ ಮತ್ತು ಬಾಂಗ್ಲಾದೇಶದ ನಡುವೆ ಸಮಸ್ಯೆಯಿದೆ, ಎರಡೂ ದೇಶಗಳ ನಡುವಿನ ಸಂಬಂಧ ಉತ್ತಮವಾಗಿಲ್ಲ ಎಂದು ಘೋಷಿಸಿದ್ದಾರೆ. ಶೇಖ್ ಹಸೀನಾ ಅವರಿಗೆ ಆಶ್ರಯ ನೀಡಿದ ನಂತರ ಭಾರತ ಮತ್ತು ಬಾಂಗ್ಲಾ ನಡುವಿನ ಬಿಕ್ಕಟ್ಟು ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.

ಢಾಕಾ, ಸೆಪ್ಟೆಂಬರ್ 25: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ನವದೆಹಲಿಯಲ್ಲಿ ಆಶ್ರಯ ನೀಡಿದಾಗಿನಿಂದ ಭಾರತ ಮತ್ತು ಬಾಂಗ್ಲಾದೇಶದ ನಡುವೆ ಉದ್ವಿಗ್ನತೆ ಉಂಟಾಗಿದೆ ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ (Muhammad Yunus) ಹೇಳಿದ್ದಾರೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ (ಯುಎನ್‌ಜಿಎ) 80ನೇ ಅಧಿವೇಶನಕ್ಕಾಗಿ ನ್ಯೂಯಾರ್ಕ್‌ಗೆ ತೆರಳಿರುವ ಮೊಹಮ್ಮದ್ ಯೂನಸ್, ಶೇಖ್ ಹಸೀನಾ ಪದಚ್ಯುತಿಗೆ ಕಾರಣವಾದ ವಿದ್ಯಾರ್ಥಿಗಳ ಪ್ರತಿಭಟನೆಗಳು ಭಾರತಕ್ಕೆ ಇಷ್ಟವಾಗಲಿಲ್ಲ ಎಂದು ಹೇಳಿದರು.
ವಿದ್ಯಾರ್ಥಿಗಳ ಪ್ರತಿಭಟನೆಯನ್ನು “ಇಸ್ಲಾಮಿಕ್ ಚಳುವಳಿ” ಎಂದು ಹಣೆಪಟ್ಟಿ ಕಟ್ಟಿದ ನಕಲಿ ಸುದ್ದಿಯನ್ನು ಬಾಂಗ್ಲಾದೇಶದ ನಾಯಕ ಮೊಹಮ್ಮದ್ ಯೂನಸ್ ಟೀಕಿಸಿದರು. ಹಾಗೇ, ಮೊಹಮ್ಮದ್ ಯೂನಸ್ ಅವರು ಸಾರ್ಕ್ ರಾಷ್ಟ್ರಗಳನ್ನು “ತಮ್ಮ ಆಪ್ತ ಕುಟುಂಬದ ಸದಸ್ಯರು” ಎಂದು ಕರೆದರು. ಸುಮಾರು 1 ದಶಕದಿಂದ ನಿಷ್ಕ್ರಿಯವಾಗಿರುವ ದಕ್ಷಿಣ ಏಷ್ಯಾದ ದೇಶಗಳ ಗುಂಪಿನ ಪುನರುಜ್ಜೀವನಕ್ಕೆ ಅವರು ಕರೆ ನೀಡಿದರು.
“North-Eastern States in India don’t have access to Indian Ocean” – Muhammad Yunus.
This guy is not even making an effort to hide his sinister motives. Connectivity is just a facade to brew trouble in India’s North East.
— Monica Verma (@TrulyMonica) September 25, 2025
ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಪೊಲೀಸರ ಜೊತೆ ಶೇಖ್ ಹಸೀನಾ ಬೆಂಬಲಿಗರ ಘರ್ಷಣೆ; 4 ಸಾವು, 14 ಜನರ ಬಂಧನ
ಆಗಸ್ಟ್ 5, 2024ರಂದು ವಿದ್ಯಾರ್ಥಿ ಪ್ರತಿಭಟನಾಕಾರರು ಬಾಂಗ್ಲಾದೇಶದಲ್ಲಿ ಅವರ 15 ವರ್ಷಗಳ ಆಡಳಿತವನ್ನು ಉರುಳಿಸಿದಾಗ ಶೇಖ್ ಹಸೀನಾ ಭಾರತಕ್ಕೆ ಪಲಾಯನ ಮಾಡಿದರು. ಅವರು ಅಲ್ಲಿಂದ ತಪ್ಪಿಸಿಕೊಂಡ ನಂತರ, ಮುಂದಿನ ವರ್ಷ ಚುನಾವಣೆಗೆ ಕರೆ ನೀಡಿರುವ ಮೊಹಮ್ಮದ್ ಯೂನಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರವನ್ನು ರಚಿಸಲಾಯಿತು.
Islamofascist Muhammad Yunus continues spewing venomous comments against India. pic.twitter.com/jsQdHdSiUN
— Salah Uddin Shoaib Choudhury (@salah_shoaib) September 25, 2025
ಈ ವರ್ಷದ ಏಪ್ರಿಲ್‌ನಲ್ಲಿ, ಬ್ಯಾಂಕಾಕ್‌ನಲ್ಲಿ ನಡೆದ ಬಿಮ್‌ಸ್ಟೆಕ್ ಶೃಂಗಸಭೆಯ ಸಂದರ್ಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮೊಹಮ್ಮದ್ ಯೂನಸ್ ಅವರನ್ನು ಭೇಟಿಯಾದರು. ಪ್ರಜಾಪ್ರಭುತ್ವ, ಸ್ಥಿರ, ಶಾಂತಿಯುತ, ಪ್ರಗತಿಪರ ಮತ್ತು ಅಂತರ್ಗತ ಬಾಂಗ್ಲಾದೇಶಕ್ಕೆ ಭಾರತದ ಬೆಂಬಲವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದರು.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




