ಇಸ್ರೇಲ್ ಹಮಾಸ್ ಸಂಘರ್ಷ ವಿಚಾರ: ಮುಸ್ಲಿಂ ಬಾಲಕನನ್ನು 26 ಬಾರಿ ಇರಿದು ಕೊಂದ ಅಮೆರಿಕದ ವ್ಯಕ್ತಿ

ಇಸ್ರೇಲ್ ಹಾಗೂ ಹಮಾಸ್​ ನಡುವಿನ ಸಂಘರ್ಷವನ್ನು ಗಂಭೀರವಾಗಿ ತೆಗೆದುಕೊಂಡಿರುವ ಅಮೆರಿಕದ ವ್ಯಕ್ತಿಯೊಬ್ಬರು ಮುಸ್ಲಿಂ ಬಾಲಕನನ್ನು 26 ಬಾರಿ ತಿವಿದು ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. 26 ಬಾರಿ ಇರಿತಕ್ಕೊಳಗಾದ ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ, ಆತನ ತಾಯಿ ಮೇಲೂ ಕೂಡ ಹಲ್ಲೆ ನಡೆಸಲಾಗಿದೆ, ಬದುಕುಳಿಯುವ ನಿರೀಕ್ಷೆಯಿದೆ ಎಂದು ವಿಲ್ ಕೌಂಟಿ ಶೆರಿಫ್ ಕಚೇರಿಯ ಹೇಳಿಕೆ ತಿಳಿಸಿದೆ.

ಇಸ್ರೇಲ್ ಹಮಾಸ್ ಸಂಘರ್ಷ ವಿಚಾರ: ಮುಸ್ಲಿಂ ಬಾಲಕನನ್ನು 26 ಬಾರಿ ಇರಿದು ಕೊಂದ ಅಮೆರಿಕದ ವ್ಯಕ್ತಿ
ಬಾಲಕ
Image Credit source: NDTV

Updated on: Oct 16, 2023 | 8:24 AM

ಇಸ್ರೇಲ್(Israel) ಹಾಗೂ ಹಮಾಸ್(Hamas)​ ನಡುವಿನ ಸಂಘರ್ಷವನ್ನು ಗಂಭೀರವಾಗಿ ತೆಗೆದುಕೊಂಡಿರುವ ಅಮೆರಿಕದ ವ್ಯಕ್ತಿಯೊಬ್ಬರು ಮುಸ್ಲಿಂ ಬಾಲಕನನ್ನು 26 ಬಾರಿ ತಿವಿದು ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. 26 ಬಾರಿ ಇರಿತಕ್ಕೊಳಗಾದ ಬಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ, ಆತನ ತಾಯಿ ಮೇಲೂ ಕೂಡ ಹಲ್ಲೆ ನಡೆಸಲಾಗಿದೆ, ಬದುಕುಳಿಯುವ ನಿರೀಕ್ಷೆಯಿದೆ ಎಂದು ವಿಲ್ ಕೌಂಟಿ ಶೆರಿಫ್ ಕಚೇರಿಯ ಹೇಳಿಕೆ ತಿಳಿಸಿದೆ.

ಅವರ ಮನೆಯಲ್ಲೇ ದಾಳಿ ನಡೆದಿದ್ದು, ಎದೆ, ತಲೆ ಸೇರಿದಂತೆ ಹಲವು ಕಡೆ ಚಾಕುವಿನಿಂದ ಇರಿಯಲಾಗಿತ್ತು. ಶವ ಪರೀಕ್ಷೆಯ ಸಮಯದಲ್ಲಿ ಬಾಲಕನ ಹೊಟ್ಟೆಯಿಂದ 7 ಇಂಚಿನ ಬ್ಲೇಡ್ ಮಾದರಿಯ ಚಾಕುವನ್ನು ಹೊರ ತೆಗೆಯಲಾಗಿದೆ.

ಪೊಲೀಸರು ಆಗಮಿಸಿದಾಗ ಮಹಿಳೆಯ ಹಣೆಗೆ ಗಂಭೀರವಾಗಿ ಗಾಯವಾಗಿತ್ತು, ಪ್ರಕರಣ ದಾಖಲಿಸುವ ಮೊದಲು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಇಸ್ರೇಲ್​ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಕೂಡ ಬೆಂಬಲ ಸೂಚಿಸಿದ್ದಾರೆ. ಗಾಜಾದ ಪರಿಸ್ಥಿತಿ ತೀರಾ ಹದಗೆಟ್ಟಿದೆ, ಹಮಾಸ್​ನ ಇಸ್ರೇಲ್​ ಮೇಲಿನ ದಾಳಿಯ ಪ್ರತಿಯಾಗಿ ಇಸ್ರೇಲ್(Israel)ಗಾಜಾ ಮೇಲೆ ದಾಳಿ ನಡೆಸುತ್ತಿದೆ. ಗಾಜಾದಲ್ಲಿರುವ ಜನರಿಗೆ ದಕ್ಷಿಣ ಭಾಗಕ್ಕೆ ತೆರಳುವಂತೆ 3 ಗಂಟೆಗಳ ಗಡುವು ನೀಡಿತ್ತು. ಗಡುವು ಮುಕ್ತಾಯವಾಗುತ್ತಿದ್ದಂತೆ 1 ಮಿಲಿಯನ್ ಮಂದಿ ಗಾಜಾದಿಂದ ಪಲಾಯನ ಮಾಡಿದ್ದಾರೆ.

ಮತ್ತಷ್ಟು ಓದಿ: ಹಮಾಸ್ ಕಮಾಂಡರ್​ ಹತ್ಯೆ, ಮೂರು ಮಾರ್ಗದಿಂದ ಗಾಜಾ ಮೇಲೆ ದಾಳಿ ನಡೆಸಲು ಇಸ್ರೇಲ್ ಸಿದ್ಧತೆ

ತಾವು ವಾಯು, ಸಮುದ್ರ, ಭೂಮಿ ಮೂಲಕ ದಾಳಿ ನಡೆಸುವುದಾಗಿ ಇಸ್ರೇಲ್ ಎಚ್ಚರಿಕೆಯನ್ನು ನೀಡಿತ್ತು. ಈ ಕಾರಿಡಾರ್​ನಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಯಾವುದೇ ಕಾರ್ಯಾಚರಣೆ ನಡೆಸುವುದಿಲ್ಲ ಎಂದು ಇಸ್ರೇಲ್ ರಕ್ಷಣಾ ಪಡೆ ಹೇಳಿತ್ತು.

ಗಾಜಾ ನಗರ ಹಾಗೂ ಉತ್ತರ ಗಾಜಾದ ಜನರಿಗೆ ದಕ್ಷಿಣ ಭಾಗಕ್ಕೆ ತೆರಳಲು ಮುಂಚೆಯೇ ಎಚ್ಚರಿಕೆ ನೀಡಲಾಗಿದೆ ಎಂದು ಸೇನೆ ಹೇಳಿದೆ. ಗಾಜಾದಲ್ಲಿ 2.3 ಮಿಲಿಯನ್ ನಾಗರಿಕರು ಆಹಾರ, ನೀರು, ಭದ್ರತೆ ವಿಚಾರದಲ್ಲಿ ಹೋರಾಟವನ್ನು ಎದುರಿಸುತ್ತಿದ್ದಾರೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us