AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾರಿಸ್ ವಿಮಾನ ನಿಲ್ದಾಣದಲ್ಲಿ ಸಾಮೂಹಿಕ ನಮಾಜ್: ವಿವಾದಕ್ಕೆ ಕಾರಣವಾದ ಜೋರ್ಡಾನ್ ಪ್ರಯಾಣಿಕರ ನಡೆ

ಫ್ರಾನ್ಸ್​ನ ಅತಿದೊಡ್ಡ ವಿಮಾನ ನಿಲ್ದಾಣದ ಟರ್ಮಿನಲ್ 2ಬಿಯಲ್ಲಿ ನಮಾಜ್ ಮಾಡಲಾಗಿತ್ತು. ಸುಮಾರು 30 ಮಂದಿ ಪ್ರಯಾಣಿಕರು ನಮಾಜ್​ನಲ್ಲಿ ಭಾಗವಹಿಸಿದ್ದರು. ಸುಮಾರು 10 ನಿಮಿಷಗಳ ಕಾಲ ನಮಾಜ್ ಮಾಡಲಾಗಿತ್ತು ಎಂದು ‘ಎಎಫ್​ಪಿ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಪ್ಯಾರಿಸ್ ವಿಮಾನ ನಿಲ್ದಾಣದಲ್ಲಿ ಸಾಮೂಹಿಕ ನಮಾಜ್: ವಿವಾದಕ್ಕೆ ಕಾರಣವಾದ ಜೋರ್ಡಾನ್ ಪ್ರಯಾಣಿಕರ ನಡೆ
ಪ್ಯಾರಿಸ್ ವಿಮಾನ ನಿಲ್ದಾಣದಲ್ಲಿ ಸಾಮೂಹಿಕ ನಮಾಜ್
TV9 Web
| Edited By: |

Updated on: Nov 06, 2023 | 6:42 PM

Share

ಪ್ಯಾರಿಸ್, ನವೆಂಬರ್ 6: ಪ್ಯಾರಿಸ್ ವಿಮಾನ ನಿಲ್ದಾಣದಲ್ಲಿ (Paris Airport) ಮುಸ್ಲಿಂ ಪ್ರಯಾಣಿಕರು (Muslim travellers) ಸಾಮೂಹಿಕವಾಗಿ ನಮಾಜ್ ಮಾಡುತ್ತಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವಿವಾದಕ್ಕೆ ಗುರಿಯಾಗಿದೆ. ಚಿತ್ರವು ವಿವಾದಕ್ಕೀಡಾಗುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿರುವ ಪ್ಯಾರಿಸ್ ವಿಮಾನ ನಿಲ್ದಾಣ ಆಡಳಿತವು, ಈ ರೀತಿಯ ವಿದ್ಯಮಾನವು ವಿಷಾದನೀಯ ಎಂದು ಹೇಳಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಆಗಿರುವ ಚಿತ್ರದಲ್ಲಿ, ಪ್ಯಾರಿಸ್​​ನ ಚಾರ್ಲ್ಸ್ ಡಿ ಗೌಲ್ ವಿಮಾನ ನಿಲ್ದಾಣದ ನಿರ್ಗಮನ ಹಾಲ್​ನಲ್ಲಿ ಹತ್ತಾರು ಮಂದಿ ಸಾಮೂಹಿಕವಾಗಿ ನಮಾಜ್ ಮಾಡುವ ಚಿತ್ರವಿದೆ. ಅವರೆಲ್ಲ ಜೋರ್ಡಾನ್​ಗೆ ತೆರಳುವ ವಿಮಾನಕ್ಕೆ ಕಾಯುತ್ತಿದ್ದವರು ಎನ್ನಲಾಗಿದೆ. ಹಮಾಸ್ ಮತ್ತು ಇಸ್ರೇಲ್​​​ ನಡುವಣ ಸಂಘರ್ಷದ ಸಂದರ್ಭದಲ್ಲೇ ವಿಮಾ ನಿಲ್ದಾಣದಲ್ಲಿನ ನಮಾಜ್ ಚಿತ್ರ ವೈರಲ್ ಆಗಿರುವುದು ಫ್ರಾನ್ಸ್​​ನಲ್ಲಿ ಉದ್ವಿಗ್ನತೆಗೆ ಕಾರಣವಾಗಿದೆ.

ಈ ಮಧ್ಯೆ, ಫ್ರಾನ್ಸ್​​​ನ ಸಾರಿಗೆ ಸಚಿವ ಕ್ಲೆಮೆಂಟ್ ಬ್ಯೂನ್ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿದ್ದು, ವಿಮಾನ ನಿಲ್ದಾಣದ ಅಧಿಕಾರಿಗಳು ನಿಯಮಗಳ ಪಾಲನೆಗೆ ಸಂಪೂರ್ಣವಾಗಿ ಬದ್ಧರಾಗಿದ್ದಾರೆ ಮತ್ತು ಆ ನಿಟ್ಟಿನಲ್ಲಿ ದೃಢ ಹೆಜ್ಜೆ ಇಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ಫ್ರಾನ್ಸ್​ನ ಅತಿದೊಡ್ಡ ವಿಮಾನ ನಿಲ್ದಾಣದ ಟರ್ಮಿನಲ್ 2ಬಿಯಲ್ಲಿ ನಮಾಜ್ ಮಾಡಲಾಗಿತ್ತು. ಸುಮಾರು 30 ಮಂದಿ ಪ್ರಯಾಣಿಕರು ನಮಾಜ್​ನಲ್ಲಿ ಭಾಗವಹಿಸಿದ್ದರು. ಸುಮಾರು 10 ನಿಮಿಷಗಳ ಕಾಲ ನಮಾಜ್ ಮಾಡಲಾಗಿತ್ತು ಎಂದು ‘ಎಎಫ್​ಪಿ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: ದಯನೀಯ ಸ್ಥಿತಿಯಲ್ಲಿ ಆಫ್ಘನ್ ನಿರಾಶ್ರಿತರು: ಪಾಕಿಸ್ತಾನ ತೊರೆಯುತ್ತಿರುವವರಿಗೆ ಕುಡಿಯಲು ನೀರು, ಆಹಾರಕ್ಕೆ ತತ್ವಾರ

ಸಾಮಾನ್ಯವಾಗಿ ಎಲ್ಲಾ ಧರ್ಮಗಳ ಜನರು ಖಾಸಗಿಯಾಗಿ ಪ್ರಾರ್ಥನೆ ಸಲ್ಲಿಸಲು ವಿಮಾನ ನಿಲ್ದಾಣಗಳಲ್ಲಿ ವಿಶೇಷ ಕೊಠಡಿಗಳನ್ನು ಮೀಸಲಿಟ್ಟಿರಲಾಗುತ್ತದೆ. ಆದರೆ ಫ್ರಾನ್ಸ್ ಸರ್ಕಾರವು ಶಾಲೆಗಳು, ವಿಮಾನ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ನಂಬಿಕೆಯ ಪ್ರದರ್ಶನಕ್ಕೆ ಮಿತಿ ಹೇರಿದೆ.

‘ಇದು ವಿಷಾದನೀಯ’ ಎಂದು ಪ್ಯಾರಿಸ್ ವಿಮಾನ ನಿಲ್ದಾಣದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಸ್ಟಿನ್ ಡಿ ರೊಮಾನೆಟ್ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಉಲ್ಲೇಖಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್