AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಹಿಂದೂ ನಂಬಿಕೆಯೇ ನನ್ನನ್ನು ಇಲ್ಲಿಯವರೆಗೆ ಕರೆತಂದಿದೆ: ವಿವೇಕ್ ರಾಮಸ್ವಾಮಿ

ನಾನು ಹಿಂದೂ, ನಾನು ಹದಿಹರೆಯದವನಾಗಿದ್ದಾಗ ನನ್ನ ನಂಬಿಕೆಯನ್ನು ತ್ಯಜಿಸಿದೆ, ಆದರೆ ನಾನು ದೃಢತೆ ಮತ್ತು ಶಕ್ತಿಯಿಂದ ಅದಕ್ಕೆ ಮರಳಿದೆ ಎಂದು ಹೇಳಿದರು. ಹಿಂದೂಗಳು ತಮ್ಮ ಮಕ್ಕಳಿಗೆ ಧಾರ್ಮಿಕ ಜ್ಞಾನವನ್ನು ನೀಡಬೇಕು. ಹಿಂದೂ ಧರ್ಮದ ಮೂಲ ತತ್ವಗಳನ್ನು ವಿವರಿಸಿದ ವಿವೇಕ್ ರಾಮಸ್ವಾಮಿ, ನಿಜವಾದ ದೇವರು ಒಬ್ಬನೇ ಎಂದು ಹೇಳಿದ್ದಾರೆ.

ನನ್ನ ಹಿಂದೂ ನಂಬಿಕೆಯೇ ನನ್ನನ್ನು ಇಲ್ಲಿಯವರೆಗೆ ಕರೆತಂದಿದೆ: ವಿವೇಕ್ ರಾಮಸ್ವಾಮಿ
ವಿವೇಕ್ ರಾಮಸ್ವಾಮಿ
ರಶ್ಮಿ ಕಲ್ಲಕಟ್ಟ
|

Updated on: Jan 09, 2024 | 8:36 PM

Share

ವಾಷಿಂಗ್ಟನ್ ಜನವರಿ 09: ನವೆಂಬರ್ 5 ರಂದು ಅಮೆರಿಕ ಅಧ್ಯಕ್ಷೀಯ ಚುನಾವಣೆ (US Presidential Election) ನಡೆಯಲಿದೆ. ಏತನ್ಮಧ್ಯೆ, ವಿರೋಧ ಪಕ್ಷವಾದ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿಯ ಆಯ್ಕೆಯು ಬಿರುಸಿನಿಂದ ನಡೆಯುತ್ತಿದೆ. ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ನಾಮನಿರ್ದೇಶನಕ್ಕೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳಲ್ಲಿ ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ (Vivek Ramaswamy) ಒಬ್ಬರು. 38 ವರ್ಷದ ವಿವೇಕ್ ರಾಮಸ್ವಾಮಿ ಅಮೆರಿಕದ ನೈಋತ್ಯ ಒಹಾಯೊದವರು.

ಭಾರತದ ಕೇರಳ ಮೂಲದವರಾದ ವಿವೇಕ್ ರಾಮಸ್ವಾಮಿ ಅವರ ಪೋಷಕರು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನೆಲೆಸಿದ್ದಾರೆ. ಕೇರಳದ ಪಾಲಕ್ಕಾಡ್ ಮೂಲದ ವಿವೇಕ್ ರಾಮಸ್ವಾಮಿ ಅವರಿಗೆ ತಮಿಳು ಗೊತ್ತು ಎಂದು ಹೇಳಿದ್ದರು. ಉದ್ಯಮಿ ವಿವೇಕ್ ರಾಮಸ್ವಾಮಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಆಗ ಮಾತನಾಡಿದ ಅವರು, ಹಿಂದೂ ಧರ್ಮದ ನಂಬಿಕೆಯೇ ಅವರನ್ನು ಅಮೆರಿಕದ ಅಧ್ಯಕ್ಷರಾಗಲು ಈ ಪಯಣಕ್ಕೆ ತಂದಿದೆ ಎಂದಿದ್ದಾರೆ.

ಮುಂದುವರಿದು ಮಾತನಾಡಿದ ಅವರು, “ನಾನು ಹಿಂದೂ, ನಾನು ಹದಿಹರೆಯದವನಾಗಿದ್ದಾಗ ನನ್ನ ನಂಬಿಕೆಯನ್ನು ತ್ಯಜಿಸಿದೆ, ಆದರೆ ನಾನು ದೃಢತೆ ಮತ್ತು ಶಕ್ತಿಯಿಂದ ಅದಕ್ಕೆ ಮರಳಿದೆ” ಎಂದು ಹೇಳಿದರು. ಹಿಂದೂಗಳು ತಮ್ಮ ಮಕ್ಕಳಿಗೆ ಧಾರ್ಮಿಕ ಜ್ಞಾನವನ್ನು ನೀಡಬೇಕು. ಹಿಂದೂ ಧರ್ಮದ ಮೂಲ ತತ್ವಗಳನ್ನು ವಿವರಿಸಿದ ವಿವೇಕ್ ರಾಮಸ್ವಾಮಿ, ನಿಜವಾದ ದೇವರು ಒಬ್ಬನೇ ಎಂದು ಹೇಳಿದರು.

ವಿವೇಕ್ ರಾಮಸ್ವಾಮಿ ಹಿಂದೂ ಧರ್ಮದ ಪರವಾಗಿ ಮಾತನಾಡುತ್ತಿರುವುದು ಇದೇ ಮೊದಲಲ್ಲ. ಕಳೆದ ಡಿಸೆಂಬರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಿವೇಕ್ ರಾಮಸ್ವಾಮಿ, ನಾನು ಹಿಂದೂ ಮತ್ತು ತನ್ನ ಗುರುತನ್ನು ಅಡಗಿಸುವುದಿಲ್ಲ . ಅಮೆರಿಕದ ಮೂಲಕ ಕ್ರಿಶ್ಚಿಯನ್ ಧರ್ಮವನ್ನು ಹರಡಲು ಅವರು ಅತ್ಯುತ್ತಮ ಅಧ್ಯಕ್ಷರಾಗುವುದಿಲ್ಲ. ಅವರು ಸರಿಯಾದ ಆಯ್ಕೆಯಲ್ಲ ಎಂದು ಅವರು ಬಹಿರಂಗವಾಗಿ ಹೇಳಿದ್ದಾರೆ.

ಇದನ್ನೂ ಓದಿವಿವೇಕ್ ರಾಮಸ್ವಾಮಿ ಮನೆಯಲ್ಲಿ ದಾದಿ ಕೆಲಸ; ಸಂಬಳ 80 ಲಕ್ಷ ರೂ

ಆದರೆ ಯುನೈಟೆಡ್ ಸ್ಟೇಟ್ಸ್ ಸ್ಥಾಪಿಸಿದ ಮೌಲ್ಯಗಳನ್ನು ಉಳಿಸಲು ತಾನು ದೃಢವಾಗಿ ನಿಲ್ಲುತ್ತೇನೆ ಎಂದು ಅವರು ಹೇಳಿದರು. ಈ ವೇಳೆ ಮತ್ತೆ ಹಿಂದೂ ಧರ್ಮದ ಬಗ್ಗೆ ಮಾತನಾಡಿರುವ ವಿವೇಕ್ ರಾಮಸ್ವಾಮಿ, ಹಿಂದೂ-ಅಮೆರಿಕನ್ನರು ತಮ್ಮ ಧರ್ಮವನ್ನು ತೀವ್ರಗೊಳಿಸುವಂತೆ ಮನವಿ ಮಾಡಿದ್ದಾರೆ. ಅಧ್ಯಕ್ಷೀಯ ಚುನಾವಣೆಯಲ್ಲಿ ಹಿಂದೂ ಅಮೆರಿಕನ್ನರ ಬೆಂಬಲ ಪಡೆಯುವ ಬಗ್ಗೆ ವಿವೇಕ್ ರಾಮಸ್ವಾಮಿ ಗಂಭೀರವಾಗಿದ್ದಾರೆ ಎಂಬುದನ್ನು ವಿವೇಕ್ ರಾಮಸ್ವಾಮಿ ಅವರ ಭಾಷಣ ತೋರಿಸುತ್ತದೆ ಎಂದು ರಾಜಕೀಯ ವಿಮರ್ಶಕರು ಹೇಳುತ್ತಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ