ನಿಗೂಢ ಕಾಯಿಲೆಯಿಂದ 165 ಮಕ್ಕಳು ಸಾವು; ಹೆಚ್ಚಾಯ್ತು ಮತ್ತೊಂದು ಮಹಾಮಾರಿಯ ಭೀತಿ

Mysterious Disease: ಆಗಸ್ಟ್‌ನಲ್ಲಿ ಕ್ವಿಲು ಪ್ರಾಂತ್ಯದ ಗುಂಗು ಪಟ್ಟಣದಲ್ಲಿ ಈ ನಿಗೂಢ ರೋಗ ಮೊದಲು ಕಾಣಿಸಿಕೊಂಡಿತ್ತು. ಈ ಕಾಯಿಲೆ 5 ವರ್ಷದವರೆಗಿನ ಮಕ್ಕಳನ್ನು ಹೆಚ್ಚಾಗಿ ಭಾಧಿಸುತ್ತಿದೆ.

ನಿಗೂಢ ಕಾಯಿಲೆಯಿಂದ 165 ಮಕ್ಕಳು ಸಾವು; ಹೆಚ್ಚಾಯ್ತು ಮತ್ತೊಂದು ಮಹಾಮಾರಿಯ ಭೀತಿ
ಸಾಂಕೇತಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 22, 2021 | 4:56 PM

ಕಾಂಗೋ: ವಿಶ್ವಾದ್ಯಂತ ಈಗಾಗಲೇ ಕೊವಿಡ್ ಮಹಾಮಾರಿ 49 ಲಕ್ಷಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ. ಇದರ ಜೊತೆಗೆ ಕೊರೊನಾ ರೂಪಾಂತರಿ, ಮಲೇರಿಯಾ, ಡೆಂಗ್ಯೂ ಮುಂತಾದ ಅನೇಕ ರೋಗಗಳು ಪ್ರತಿವರ್ಷ ಸಾವಿರಾರು ಜನರನ್ನು ಬಲಿ ಪಡೆಯುತ್ತಿವೆ. ಇದರ ನಡುವೆ ಕಾಂಗೋದಲ್ಲಿ ಮತ್ತೊಂದು ನಿಗೂಢ ಕಾಯಿಲೆ ಪತ್ತೆಯಾಗಿದ್ದು, ಆಗಸ್ಟ್​ನಿಂದ ಇಲ್ಲಿಯರೆಗೂ 165ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿರುವ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.

ಆಗಸ್ಟ್‌ನಲ್ಲಿ ಕ್ವಿಲು ಪ್ರಾಂತ್ಯದ ಗುಂಗು ಪಟ್ಟಣದಲ್ಲಿ ಈ ನಿಗೂಢ ರೋಗ ಮೊದಲು ಕಾಣಿಸಿಕೊಂಡಿತ್ತು. ಈ ಕಾಯಿಲೆ 5 ವರ್ಷದವರೆಗಿನ ಮಕ್ಕಳನ್ನು ಹೆಚ್ಚಾಗಿ ಭಾಧಿಸುತ್ತಿದೆ. ಇಲ್ಲಿನ ಪ್ರಾದೇಶಿಕ ಆರೋಗ್ಯ ಮುಖ್ಯಸ್ಥ ಜೀನ್-ಪಿಯರ್ ಬಸಾಕೆ ಅವರು ಕೆಲವು ಸೋಂಕಿತ ಮಕ್ಕಳಲ್ಲಿ ಮಲೇರಿಯಾದಂತಹ ರೋಗಲಕ್ಷಣಗಳು ಕಾಣಿಸಿಕೊಂಡಿದೆ ಎಂದು ಹೇಳಿದ್ದಾರೆ.

ಈ ರೋಗ ಮಲೇರಿಯಾದ ರೀತಿಯ ರೋಗಲಕ್ಷಣಗಳನ್ನು ಹೊಂದಿದೆ. ಈ ಕಾಯಿಲೆಯ ಕುರಿತು ರ್ಯಾಪಿಡ್ ಟೆಸ್ಟ್​ಗಳನ್ನು ಮಾಡಲಾಗುತ್ತಿದೆ. ಈ ಕಾಯಿಲೆಯಿಂದ ಅನೀಮಿಯಾ ಕಾಣಿಸಿಕೊಳ್ಳುತ್ತಿದ್ದು, ಇದಕ್ಕೆ ಕಾರಣವೇನೆಂದು ಇನ್ನೂ ಪತ್ತೆಯಾಗಿಲ್ಲ ಎಂದು ಬಸಾಕೆ ತಿಳಿಸಿದ್ದಾರೆ.

ಕಳೆದ ಆಗಸ್ಟ್ ಅಂತ್ಯದಲ್ಲಿ ಮೊದಲು ಕಾಣಿಸಿಕೊಂಡ ಈ ರೋಗವು ವಿಶೇಷವಾಗಿ ಐದು ವರ್ಷದೊಳಗಿನ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ಮಲೇರಿಯಾದ ಹೊರತಾಗಿ, ನಮಗೆ ತಿಳಿದಿಲ್ಲದ ಬೇರೊಂದು ರೋಗದ ಲಕ್ಷಣ ಕೂಡ ಇದಾಗಿರಬಹುದು. ಈ ಕಾಯಿಲೆ ಬಂದ ರೋಗಗಳು ಅನೀಮಿಯಾ ಅಥವಾ ರಕ್ತಹೀನತೆಯಿಂದ ಬಳಲತೊಡಗುತ್ತಾರೆ. ಇದಕ್ಕೆ ಯಾವ ಬಗೆಯ ಔಷಧಿ ನೀಡಬೇಕೆಂಬುದು ತಿಳಿಯುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಈ ನಿಗೂಢ ಕಾಯಿಲೆ ಈಗ ಹೆಚ್ಚು ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: Coronavirus cases in India: ಭಾರತದಲ್ಲಿ 15,786 ಹೊಸ ಕೊವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ

ಮುಂಬೈನ ಅಪಾರ್ಟ್​ಮೆಂಟ್​ನಲ್ಲಿ ಭಾರೀ ಅಗ್ನಿ ದುರಂತ; ಓರ್ವ ಸಾವು, 26 ಜನರ ರಕ್ಷಣೆ

Published On - 4:56 pm, Fri, 22 October 21

ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ