Namibia President Death: ನಮೀಬಿಯಾ ಅಧ್ಯಕ್ಷ ಗೇನ್​ಗೋಬ್ ನಿಧನ

ನಮೀಬಿಯಾ ಅಧ್ಯಕ್ಷ ಹೇಗ್ ಗೇನ್​ಗೋಬ್ ಭಾನುವಾರ ಮುಂಜಾನೆ ಕ್ಯಾನ್ಸರ್​ನಿಂದ ನಿಧನರಾಗಿದ್ದಾರೆ. 2014ರಲ್ಲಿ ಪ್ರಧಾನಿಯಾಗಿದ್ದ ಅವಧಿಯಲ್ಲಿ ತಾವು ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಚೇತರಿಸಿಕೊಂಡಿರುವುದಾಗಿ ಸಾರ್ವಜನಿಕರಿಗೆ ತಿಳಿಸಿದ್ದರು. ಮುಂದಿನ ವರ್ಷ ಅವರು ಅಧ್ಯಕ್ಷರಾದರು.

Namibia President Death: ನಮೀಬಿಯಾ ಅಧ್ಯಕ್ಷ ಗೇನ್​ಗೋಬ್ ನಿಧನ
ಗೇನ್​ಗೋಬ್
Follow us
ನಯನಾ ರಾಜೀವ್
|

Updated on:Feb 04, 2024 | 10:38 AM

ನಮೀಬಿಯಾ ಅಧ್ಯಕ್ಷ ಹೇಗ್ ಗೇನ್​ಗೋಬ್(Hage Geingob) ಭಾನುವಾರ ಮುಂಜಾನೆ ಕ್ಯಾನ್ಸರ್​ನಿಂದ ನಿಧನರಾಗಿದ್ದಾರೆ. ಹೇಗ್ ಕಳೆದ ಕೆಲವು ವಾರಗಳಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ ತಿಂಗಳ ಕೊನೆಯಲ್ಲಿ ಅವರು ಸಾಮಾನ್ಯ ವೈದ್ಯಕೀಯ ತಪಾಸಣೆಯ ನಂತರ ಚಿಕಿತ್ಸೆಗಾಗಿ ಯುನೈಟೆಡ್ ಸ್ಟೇಟ್ಸ್‌ಗೆ ಹೋಗುವುದಾಗಿ ಹೇಳಿದ್ದರು. ಗೇನ್​ಗೋಬ್ ವಿಂಡ್‌ಹೋಕ್‌ನಲ್ಲಿರುವ ಲೇಡಿ ಪೊಹಂಬಾ ಆಸ್ಪತ್ರೆಯಲ್ಲಿ ಹೇಜ್ ಗೀಂಗೊಬ್ ನಿಧನರಾದರು.

2014ರಲ್ಲಿ ಪ್ರಧಾನಿಯಾಗಿದ್ದ ಅವಧಿಯಲ್ಲಿ ತಾವು ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಚೇತರಿಸಿಕೊಂಡಿರುವುದಾಗಿ ಸಾರ್ವಜನಿಕರಿಗೆ ತಿಳಿಸಿದ್ದರು. ಮುಂದಿನ ವರ್ಷ ಅವರು ಅಧ್ಯಕ್ಷರಾದರು. ಈ ವರ್ಷದ ಕೊನೆಯಲ್ಲಿ ದಕ್ಷಿಣ ಆಫ್ರಿಕಾ ದೇಶದಲ್ಲಿ ಅಧ್ಯಕ್ಷೀಯ ಮತ್ತು ಸಂಸದೀಯ ಚುನಾವಣೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಇದರಿಂದ ಸ್ಥಳೀಯ ಜನರು ಹಾಗೂ ಹಲವು ಗಣ್ಯರು ಹೇಗ್ ಸಾವಿಗೆ ಕಂಬನಿ ಮಿಡಿದಿದ್ದಾರೆ.

1990 ರಲ್ಲಿ ಸ್ವಾಪೋ ಪಕ್ಷವು ನಮೀಬಿಯಾದಲ್ಲಿ ಸ್ವಾತಂತ್ರ್ಯದ ನಂತರ ಅಧಿಕಾರದಲ್ಲಿದೆ. ಈಗ ಆ ಪಕ್ಷದ ಅಧ್ಯಕ್ಷರು ನಿಧನರಾದ ಕಾರಣ ಅವರ ಸ್ಥಾನಕ್ಕೆ ನಂದಿ-ನೈತ್ವಾ ಅವರನ್ನು ಆಯ್ಕೆ ಮಾಡಲಾಯಿತು. ಅವರು ಪ್ರಸ್ತುತ ನಮೀಬಿಯಾದ ಉಪ ಪ್ರಧಾನ ಮಂತ್ರಿಯಾಗಿದ್ದು, ಅವರು ಗೆದ್ದರೆ, ಅವರು ದೇಶದ ಮೊದಲ ಮಹಿಳಾ ಅಧ್ಯಕ್ಷರಾಗುತ್ತಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:31 am, Sun, 4 February 24

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ