1968ರ ಬಳಿಕ ಗಯಾನಾಗೆ ಭಾರತದ ಪ್ರಧಾನಿಯೊಬ್ಬರ ಭೇಟಿ ಇದೇ ಮೊದಲು

ಪ್ರಧಾನಿ ನರೇಂದ್ರ ಮೋದಿ ಅವರು 2024 ರ ನವೆಂಬರ್ 19 ರಿಂದ 21 ರವರೆಗೆ ಗಯಾನಾ ಗಣರಾಜ್ಯಕ್ಕೆ ಐತಿಹಾಸಿಕ ಭೇಟಿ ನೀಡಲಿದ್ದಾರೆ. 1968ರ ನಂತರ ದಕ್ಷಿಣ ಅಮೆರಿಕದ ಗಯಾನಾಗೆ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡುತ್ತಿರುವುದು ಇದೇ ಮೊದಲು.

1968ರ ಬಳಿಕ ಗಯಾನಾಗೆ ಭಾರತದ ಪ್ರಧಾನಿಯೊಬ್ಬರ ಭೇಟಿ  ಇದೇ ಮೊದಲು
ನರೇಂದ್ರ ಮೋದಿ

Updated on: Nov 19, 2024 | 12:16 PM

ಪ್ರಧಾನಿ ನರೇಂದ್ರ ಮೋದಿ ಅವರು 2024 ರ ನವೆಂಬರ್ 19 ರಿಂದ 21 ರವರೆಗೆ ಗಯಾನಾ ಗಣರಾಜ್ಯಕ್ಕೆ ಐತಿಹಾಸಿಕ ಭೇಟಿ ನೀಡಲಿದ್ದಾರೆ. 1968ರ ನಂತರ ದಕ್ಷಿಣ ಅಮೆರಿಕದ ಗಯಾನಾಗೆ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡುತ್ತಿರುವುದು ಇದೇ ಮೊದಲು.

56 ವರ್ಷಗಳ ನಂತರ ಭಾರತದ ಪ್ರಧಾನಿ ಗಯಾನಾಗೆ ಹೋಗುತ್ತಿದ್ದಾರೆ. ಈ ಭೇಟಿಯು ಎರಡು ದೇಶಗಳ ನಡುವಿನ ಬಲವಾದ ಮತ್ತು ಬಾಂಧವ್ಯವನ್ನು ಪ್ರತಿಬಿಂಬಿಸುತ್ತದೆ. ಈ ಭೇಟಿಯು ಗಯಾನಾದೊಂದಿಗೆ ಬಾಂಧವ್ಯವನ್ನು ಗಾಢವಾಗಿಸಲು ಮತ್ತು ಕೆರಿಬಿಯನ್ ಸಮುದಾಯದಲ್ಲಿ (CARICOM) ತನ್ನ ಪ್ರಭಾವವನ್ನು ವಿಸ್ತರಿಸುವ ಭಾರತದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಪ್ರಧಾನಿ ಮೋದಿ ಅವರು ಅಧ್ಯಕ್ಷ ಅಲಿ ಅವರೊಂದಿಗೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ.

ಇಂಧನ, ರಕ್ಷಣೆ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರದ ಕುರಿತು ಚರ್ಚಿಸಲಾಗುವುದು. ಜಾರ್ಜ್‌ಟೌನ್‌ನಲ್ಲಿ ನಡೆಯಲಿರುವ ಎರಡನೇ ಭಾರತ-ಕ್ಯಾರಿಕಾಮ್ ಶೃಂಗಸಭೆ ಇದಾಗಿದೆ. ಈ ಹಿಂದೆ, 2023 ರಲ್ಲಿ ಭಾರತದಲ್ಲಿ ನಡೆದ 17 ನೇ ಪ್ರವಾಸಿ ಭಾರತೀಯ ದಿವಸ್‌ನಲ್ಲಿ ಸಭೆಯನ್ನು ನಡೆಸಲಾಗಿತ್ತು.

ಮತ್ತಷ್ಟು ಓದಿ: ವಿಡಿಯೋ: ಪಿಎಂ ಮೋದಿ ಹಂಚಿಕೊಂಡ ಬ್ರೆಜಿಲ್​ನ ಜಿ-20 ಶೃಂಗಸಭೆಯ ಮೊದಲ ದಿನದ ಝಲಕ್​ ಇಲ್ಲಿದೆ

ಇದೇ ಸಭೆಯಲ್ಲಿ ಅಧ್ಯಕ್ಷ ಅಲಿ ಅವರಿಗೆ ಪ್ರವಾಸಿ ಭಾರತೀಯ ಸಮ್ಮಾನ್ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯು ಅನಿವಾಸಿ ಭಾರತೀಯರು ಮತ್ತು ಭಾರತ ಮೂಲದ ಜನರಿಗೆ ಭಾರತವು ನೀಡುವ ಅತ್ಯುನ್ನತ ಗೌರವವಾಗಿದೆ. ಗಯಾನಾ ಸಂಸತ್ತಿನ ರಾಷ್ಟ್ರೀಯ ಅಸೆಂಬ್ಲಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಇದು ಉಭಯ ದೇಶಗಳ ನಡುವಿನ ಪ್ರಜಾಸತ್ತಾತ್ಮಕ ಬಾಂಧವ್ಯ ಎಷ್ಟು ಗಟ್ಟಿಯಾಗಿದೆ ಎಂಬುದನ್ನು ತೋರಿಸುತ್ತದೆ.

ಇತ್ತೀಚಿನ ವರ್ಷಗಳಲ್ಲಿ, ಪ್ರಾದೇಶಿಕ ಭದ್ರತಾ ಸಹಕಾರವನ್ನು ಬಲಪಡಿಸಲು ಗಯಾನಾದ ರಕ್ಷಣಾ ಸಾಮರ್ಥ್ಯಗಳಿಗೆ ಭಾರತವು ಗಮನಾರ್ಹ ಕೊಡುಗೆಗಳನ್ನು ನೀಡಿದೆ. ದೇಶದ ವೈಮಾನಿಕ ಕಣ್ಗಾವಲು ಮತ್ತು ವಿಪತ್ತು ಪ್ರತಿಕ್ರಿಯೆ ಸಾಮರ್ಥ್ಯಗಳನ್ನು ಹೆಚ್ಚಿಸಲು ಭಾರತವು ಎರಡು ಡಾರ್ನಿಯರ್-228 ವಿಮಾನಗಳನ್ನು ಗಯಾನಾ ರಕ್ಷಣಾ ಪಡೆಗೆ 23.37 ಮಿಲಿಯನ್ ಡಾಲರ್​ ಸಾಲದ ರೂಪದಲ್ಲಿ ಒದಗಿಸಿದೆ.

 

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us