ಮೋದಿ ಹೆದರುವುದಿಲ್ಲ; ಭಾರತದೊಂದಿಗಿನ ಬಾಂಧವ್ಯದ ಬಗ್ಗೆ ಚೀನಾಕ್ಕೆ ತೈವಾನ್ ತಿರುಗೇಟು

ಪ್ರಧಾನಿ ಮೋದಿ ಅವರ ವಿಜಯಕ್ಕೆ ತೈವಾನ್ ಅಭಿನಂದನೆ ಸಲ್ಲಿಸಿದ ನಂತರ, ಚೀನಾದ ವಿದೇಶಾಂಗ ಸಚಿವಾಲಯ ಉಭಯ ದೇಶಗಳ ನಡುವಿನ ಸಂದೇಶಗಳ ವಿನಿಮಯವನ್ನು ಟೀಕಿಸಿದೆ.

ಮೋದಿ ಹೆದರುವುದಿಲ್ಲ; ಭಾರತದೊಂದಿಗಿನ ಬಾಂಧವ್ಯದ ಬಗ್ಗೆ ಚೀನಾಕ್ಕೆ ತೈವಾನ್ ತಿರುಗೇಟು
ಟಿಯೆನ್ ಚುಂಗ್-ಕ್ವಾಂಗ್
Follow us
ಸುಷ್ಮಾ ಚಕ್ರೆ
|

Updated on:Jun 18, 2024 | 5:27 PM

ನವದೆಹಲಿ: ದ್ವೀಪ ರಾಷ್ಟ್ರ ತೈವಾನ್ (Taiwan) ಮತ್ತು ಭಾರತದ (India) ನಡುವಿನ ಸಂದೇಶಗಳ ವಿನಿಮಯದ ಬಗ್ಗೆ ಟೀಕೆಗೆ ತೈವಾನ್ ಇಂದು (ಮಂಗಳವಾರ) ಚೀನಾಗೆ (China) ತಿರುಗೇಟು ನೀಡಿದೆ. ಚೀನಾದ ಟೀಕೆಗಳಿಗೆ ತಮ್ಮ ಅಧ್ಯಕ್ಷರಾಗಲೀ ಅಥವಾ ಭಾರತದ ಪ್ರಧಾನಿ ನರೇಂದ್ರ ಮೋದಿಯಾಗಲೀ (PM Narendra Modi) ಹೆದರುವುದಿಲ್ಲ ಎಂದು ತೈವಾನ್ ಉಪ ವಿದೇಶಾಂಗ ಸಚಿವ ಟಿಯೆನ್ ಚುಂಗ್-ಕ್ವಾಂಗ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ತೈವಾನ್ ಅಧ್ಯಕ್ಷ ಲಾಯ್ ಚಿಂಗ್ ಟೆ ನಡುವಿನ ಸಂದೇಶಗಳ ವಿನಿಮಯದ ಬಗ್ಗೆ ಚೀನಾದ ವಿದೇಶಾಂಗ ಸಚಿವಾಲಯ ಆಕ್ಷೇಪ ವ್ಯಕ್ತಪಡಿಸಿದ ನಂತರ ತೈವಾನ್ ಈ ಟೀಕೆ ಮಾಡಿದೆ. 2024ರಲ್ಲಿ ಭಾರತದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಅವರು ಗೆದ್ದಿದ್ದಕ್ಕಾಗಿ ನರೇಂದ್ರ ಮೋದಿಯನ್ನು ಅಭಿನಂದಿಸಿದ್ದರು.

ಭಾರತ ಮತ್ತು ತೈವಾನ್ ನಡುವಿನ ಸಂಬಂಧವನ್ನು ಬಲಪಡಿಸುವ ಚೀನಾದ ಟೀಕೆಗಳ ಬಗ್ಗೆ ಕೇಳಿದಾಗ, ಉಪ ವಿದೇಶಾಂಗ ಸಚಿವರು, “ಮೋದಿಯವರು ಮತ್ತು ನಮ್ಮ ಅಧ್ಯಕ್ಷರು ಭಯಪಡುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಧನ್ಯವಾದ ಮೋದಿ!; ತಮ್ಮ ಗೆಲುವನ್ನು ಪ್ರಧಾನಿಗೆ ಅರ್ಪಿಸಿದ ಎನ್​ಸಿಪಿ ನಾಯಕ ಶರದ್ ಪವಾರ್

ಕಳೆದ ತಿಂಗಳು ಚುನಾಯಿತರಾದ ತೈವಾನ್ ಅಧ್ಯಕ್ಷ ಲೈ ಚಿಂಗ್ ಟೆ ಅವರು ಜೂನ್ 7ರಂದು ಎಕ್ಸ್ ಪೋಸ್ಟ್‌ನಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯ ವಿಜಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿದ್ದರು. “ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಗೆಲುವಿಗಾಗಿ ನನ್ನ ಪ್ರಾಮಾಣಿಕ ಅಭಿನಂದನೆಗಳು. ವೇಗವಾಗಿ ಬೆಳೆಯುತ್ತಿರುವ ತೈವಾನ್-ಭಾರತದ ಪಾಲುದಾರಿಕೆಯನ್ನು ಹೆಚ್ಚಿಸಲು ನಾವು ಎದುರು ನೋಡುತ್ತಿದ್ದೇವೆ. ಇಂಡೋಪೆಸಿಫಿಕ್‌ನಲ್ಲಿ ಶಾಂತಿ ಮತ್ತು ಸಮೃದ್ಧಿಗೆ ಕೊಡುಗೆ ನೀಡಲು ವ್ಯಾಪಾರ, ತಂತ್ರಜ್ಞಾನ ಮತ್ತು ಇತರ ಕ್ಷೇತ್ರಗಳಲ್ಲಿ ನಮ್ಮ ಸಹಯೋಗವನ್ನು ವಿಸ್ತರಿಸುತ್ತೇವೆ” ಎಂದು ಅವರು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದರು.

ಈ ಸಂದೇಶಕ್ಕೆ ಪ್ರತ್ಯುತ್ತರ ನೀಡಿದ ಪ್ರಧಾನಿ ನರೇಂದ್ರ ಮೋದಿ, “ನಿಮ್ಮ ಆತ್ಮೀಯ ಸಂದೇಶಕ್ಕಾಗಿ ಲೈ ಚಿಂಗ್ ಟೆ ಅವರಿಗೆ ಧನ್ಯವಾದಗಳು. ನಾವು ಪರಸ್ಪರ ಲಾಭದಾಯಕ ಆರ್ಥಿಕ ಮತ್ತು ತಾಂತ್ರಿಕ ಪಾಲುದಾರಿಕೆಗಾಗಿ ಕೆಲಸ ಮಾಡುವಾಗ ನಾನು ನಿಕಟ ಸಂಬಂಧಗಳನ್ನು ಎದುರು ನೋಡುತ್ತಿದ್ದೇನೆ” ಎಂದು ಹೇಳಿದ್ದರು.

ಸಂದೇಶಗಳ ವಿನಿಮಯದ ನಂತರ, ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಮಾವೋ ನಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚಿಂಗ್ ಟೆ ನಡುವಿನ ಸಂವಾದಕ್ಕೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ತೈವಾನ್‌ನೊಂದಿಗಿನ ಭಾರತದ ಸಂವಹನವನ್ನು ಟೀಕಿಸಿದ ಅವರು, ಭಾರತವು ಈ ಬಗ್ಗೆ ಗಂಭೀರವಾದ ರಾಜಕೀಯ ಬದ್ಧತೆಗಳನ್ನು ಮಾಡಿದೆ. ತೈವಾನ್ ಅಧಿಕಾರಿಗಳ ರಾಜಕೀಯ ಲೆಕ್ಕಾಚಾರಗಳನ್ನು ಗುರುತಿಸಬೇಕು, ಎಚ್ಚರದಿಂದಿರಬೇಕು ಮತ್ತು ವಿರೋಧಿಸಬೇಕು ಎಂದಿದ್ದರು.

ಇದನ್ನೂ ಓದಿ: PM Modi Varanasi visit: ವಾರಣಾಸಿಯಲ್ಲಿ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನಕ್ಕೆ ಮೋದಿ ಆಗಮನ

ನರೇಂದ್ರ ಮೋದಿ ನೇತೃತ್ವದಲ್ಲಿ ಮೂರನೇ ಬಾರಿಗೆ ದೇಶದಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗಿದೆ. ಮೂರನೇ ಬಾರಿಗೆ ಪ್ರಧಾನಿಯಾದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ತೈವಾನ್ ಅಧ್ಯಕ್ಷ ಲೈ ಚಿಂಗ್ ಟೆ ಅವರೊಂದಿಗೆ ಮಾತನಾಡಿದರು. ಲೈ ಚಿಂಗ್ ಟೆ ಅವರು ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿಯವರನ್ನು ಅಭಿನಂದಿಸಿದ್ದಾರೆ. ಆದರೆ, ತೈವಾನ್ ಮತ್ತು ಭಾರತ ರಾಷ್ಟ್ರಗಳ ಮುಖ್ಯಸ್ಥರ ನಡುವಿನ ಸಂಭಾಷಣೆಯು ಚೀನಾದೊಂದಿಗೆ ಸರಿಯಾಗಿಲ್ಲ.

ಪ್ರಧಾನಿ ಮೋದಿಯವರನ್ನು ಅಭಿನಂದಿಸಿರುವ ತೈವಾನ್ ಅಧ್ಯಕ್ಷ ಲೈ ಚಿಂಗ್ ಟೆ ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದು, ‘ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ವಿಜಯಕ್ಕಾಗಿ ನನ್ನ ಹೃತ್ಪೂರ್ವಕ ಅಭಿನಂದನೆಗಳು. ವೇಗವಾಗಿ ಬೆಳೆಯುತ್ತಿರುವ ತೈವಾನ್-ಭಾರತ ಪಾಲುದಾರಿಕೆಯನ್ನು ಮತ್ತಷ್ಟು ಕೊಂಡೊಯ್ಯಲು ನಾವು ಉತ್ಸುಕರಾಗಿದ್ದೇವೆ. ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ಮತ್ತು ಸಮೃದ್ಧಿಗೆ ಕೊಡುಗೆ ನೀಡಲು ವ್ಯಾಪಾರ, ತಂತ್ರಜ್ಞಾನ ಮತ್ತು ಇತರ ಕ್ಷೇತ್ರಗಳಲ್ಲಿ ನಮ್ಮ ಸಹಕಾರವನ್ನು ವಿಸ್ತರಿಸಲು ಉತ್ಸುಕರಾಗಿದ್ದೇವೆ ಎಂದಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:26 pm, Tue, 18 June 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ