ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: ಬಾಂಗ್ಲಾದೇಶದಿಂದ 1,000 ಭಾರತೀಯ ವಿದ್ಯಾರ್ಥಿಗಳು ವಾಪಸ್
ಢಾಕಾದಲ್ಲಿರುವ ಭಾರತದ ಹೈಕಮಿಷನ್ ಮತ್ತು ನಮ್ಮ ಸಹಾಯಕ ಹೈಕಮಿಷನ್‌ಗಳು ಬಾಂಗ್ಲಾದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಉಳಿದಿರುವ 4,000 ಕ್ಕೂ ಹೆಚ್ಚು ವಿದ್ಯಾರ್ಥಿಗಳೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿವೆ ಮತ್ತು ಅಗತ್ಯ ನೆರವು ನೀಡುತ್ತಿವೆ" ಎಂದು ಎಂಇಎ ಹೇಳಿಕೆಯಲ್ಲಿ ತಿಳಿಸಿದೆ.ಸರ್ಕಾರಿ ಉದ್ಯೋಗ ಕೋಟಾಗಳ ವಿರುದ್ಧ ಇಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು ರಾಜಧಾನಿ ಢಾಕಾ ದಲ್ಲಿ ಕರ್ಫ್ಯೂ ಹೇರಲಾಗಿದೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಈ ವಾರ 115 ಮಂದಿ ಸಾವಿಗೀಡಾಗಿದ್ದಾರೆ.
ದೆಹಲಿ ಜುಲೈ 20: ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಶನಿವಾರ ಬಾಂಗ್ಲಾದೇಶದಿಂದ (Bangladesh) ಲ್ಯಾಂಡ್ ಪೋರ್ಟ್‌ಗಳ ಮೂಲಕ 778 ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ವಾಪಸ್ ಬಂದಿದ್ದಾರೆ ಎಂದು ಹೇಳಿದ್ದು ಇಲ್ಲಿವರೆಗೆ 998 ಕ್ಕೆ ಮಂದಿ ತಾಯ್ನಾಡಿಗೆ ಮರಳಿದ್ದಾರೆ ಎಂದು ಹೇಳಿದೆ. ಢಾಕಾದಲ್ಲಿರುವ ಭಾರತದ ಹೈಕಮಿಷನ್, ಚಿತ್ತಗಾಂಗ್, ರಾಜ್‌ಶಾಹಿ, ಸಿಲ್ಹೆಟ್ ಮತ್ತು ಖುಲ್ನಾದಲ್ಲಿನ ಸಹಾಯಕ ಹೈಕಮಿಷನ್‌ಗಳು ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ವಾಪಸಾತಿ ಪ್ರಯತ್ನಗಳಿಗೆ ಸಹಾಯ ಮಾಡುತ್ತಿವೆ ಎಂದು ಸಚಿವಾಲಯ ತಿಳಿಸಿದೆ.
ಢಾಕಾದಲ್ಲಿರುವ ಭಾರತದ ಹೈಕಮಿಷನ್ ಮತ್ತು ನಮ್ಮ ಸಹಾಯಕ ಹೈಕಮಿಷನ್‌ಗಳು ಬಾಂಗ್ಲಾದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಉಳಿದಿರುವ 4,000 ಕ್ಕೂ ಹೆಚ್ಚು ವಿದ್ಯಾರ್ಥಿಗಳೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿವೆ ಮತ್ತು ಅಗತ್ಯ ನೆರವು ನೀಡುತ್ತಿವೆ” ಎಂದು ಎಂಇಎ ಹೇಳಿಕೆಯಲ್ಲಿ ತಿಳಿಸಿದೆ.
ಆಯ್ದ ಭೂ ಬಂದರುಗಳ ಮೂಲಕ ವಾಪಸಾತಿ ಸಮಯದಲ್ಲಿ ಸುರಕ್ಷಿತ ರಸ್ತೆ ಪ್ರಯಾಣಕ್ಕಾಗಿ ಭದ್ರತಾ ಬೆಂಗಾವಲು ವ್ಯವಸ್ಥೆ ಮಾಡಲಾಗಿದೆ. ಢಾಕಾದಲ್ಲಿನ ಹೈ ಕಮಿಷನ್ ಬಾಂಗ್ಲಾದೇಶದ ನಾಗರಿಕ ವಿಮಾನಯಾನ ಅಧಿಕಾರಿಗಳು ಮತ್ತು ವಾಣಿಜ್ಯ ವಿಮಾನಯಾನ ಸಂಸ್ಥೆಗಳೊಂದಿಗೆ ನಿರಂತರ ವಿಮಾನ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ಸಮನ್ವಯ ಸಾಧಿಸುತ್ತಿದೆ ಎಂದು ಸಚಿವಾಲಯ ತಿಳಿಸಿದೆ.
ಸರ್ಕಾರಿ ಉದ್ಯೋಗ ಕೋಟಾಗಳ ವಿರುದ್ಧ ಇಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು ರಾಜಧಾನಿ ಢಾಕಾ ದಲ್ಲಿ ಕರ್ಫ್ಯೂ ಹೇರಲಾಗಿದೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಈ ವಾರ 115 ಮಂದಿ ಸಾವಿಗೀಡಾಗಿದ್ದಾರೆ.
ಪಾಕಿಸ್ತಾನದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಕುಟುಂಬಗಳಿಗೆ 30% ಹಂಚಿಕೆ ಸೇರಿದಂತೆ ವಿವಾದಾತ್ಮಕ ಸರ್ಕಾರಿ ಉದ್ಯೋಗ ಕೋಟಾಕ್ಕೆ ವಿರೋಧ ವ್ಯಕ್ತ ಪಡಿಸಿ ಪ್ರತಿಭಟನೆಗಳು ಭುಗಿಲೆದ್ದವು. 2018 ರಲ್ಲಿ ಕೋಟಾ ವ್ಯವಸ್ಥೆಯನ್ನು ರದ್ದುಗೊಳಿಸಲಾಗಿದ್ದರೂ, ನ್ಯಾಯಾಲಯವು ಕಳೆದ ತಿಂಗಳು ಅದನ್ನು ಮರುಸ್ಥಾಪಿಸಿತು, ಇದು ಹೆಚ್ಚಿನ ನಿರುದ್ಯೋಗ ದರಗಳನ್ನು ಎದುರಿಸುತ್ತಿರುವ ಯುವಜನರಲ್ಲಿ ವ್ಯಾಪಕ ಅಸಮಾಧಾನಕ್ಕೆ ಕಾರಣವಾಯಿತು.
ಪ್ರಧಾನಿ ಶೇಖ್ ಹಸೀನಾ ಅವರ ಸರ್ಕಾರವು ಮಿಲಿಟರಿಯನ್ನು ನಿಯೋಜಿಸಿದೆ ಮತ್ತು ದೇಶಾದ್ಯಂತ ಕರ್ಫ್ಯೂ ವಿಧಿಸಿದೆ. ಶನಿವಾರ ಎರಡು ಗಂಟೆಗಳ ಕಾಲ ಕರ್ಫ್ಯೂ ಅನ್ನು ಸಂಕ್ಷಿಪ್ತವಾಗಿ ತೆಗೆದುಹಾಕಲಾಗಿದ್ದರೂ, ಇದು ಭಾನುವಾರ ಬೆಳಿಗ್ಗೆ 10 ಗಂಟೆಯವರೆಗೆ ಇರುತ್ತದೆ. ಸರ್ಕಾರವು ಪರಿಸ್ಥಿತಿಯನ್ನು ಮರುಪರಿಶೀಲಿಸುತ್ತದೆ.
ಆಸ್ಪತ್ರೆಯ ಸಿಬ್ಬಂದಿ ಎಎಫ್‌ಪಿಗೆ ನೀಡಿದ ವಿವರಣೆಗಳ ಆಧಾರದ ಮೇಲೆ ಈ ವಾರ ಇಲ್ಲಿಯವರೆಗೆ ವರದಿಯಾದ ಅರ್ಧಕ್ಕಿಂತ ಹೆಚ್ಚು ಸಾವುಗಳಿಗೆ ಪೊಲೀಸ್ ಗುಂಡು ಕಾರಣ ಎಂದು ಹೇಳಲಾಗಿದೆ.
ಇದನ್ನೂ ಓದಿ: ಬಾಂಗ್ಲಾದೇಶ: ಮೀಸಲಾತಿ ವಿರೋಧಿಸಿ ಪ್ರತಿಭಟನೆ, ಕರ್ಫ್ಯೂ, ಸಾವಿನ ಸಂಖ್ಯೆ 105ಕ್ಕೆ ಏರಿಕೆ, ಭಾರತೀಯ ವಿದ್ಯಾರ್ಥಿಗಳು ವಾಪಸ್
ಹೆಚ್ಚುತ್ತಿರುವ ಸಾವಿನ ಸಂಖ್ಯೆಯು ಬಾಂಗ್ಲಾದೇಶದ ಅಧಿಕಾರಿಗಳು ಪ್ರತಿಭಟನೆ ಮತ್ತು ಭಿನ್ನಾಭಿಪ್ರಾಯಕ್ಕೆ ತೋರಿಸಿರುವ ಸಂಪೂರ್ಣ ಅಸಹಿಷ್ಣುತೆಯ ಆಘಾತಕಾರಿ ದೋಷಾರೋಪಣೆಯಾಗಿದೆ” ಎಂದು ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ಬಾಬು ರಾಮ್ ಪಂತ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:34 pm, Sat, 20 July 24