Nepal Air Crash: ಯೇತಿ ಏರ್‌ಲೈನ್ಸ್ ವಿಮಾನ ಪತನಕ್ಕೆ ಎಂಜಿನ್ ಸಮಸ್ಯೆ ಕಾರಣ: ವರದಿ

ಕಠ್ಮಂಡುವಿನಿಂದ ಪೋಖರಾ ಕಡೆಗೆ ತೆರಳುತ್ತಿದ್ದ ಯೇತಿ ಏರ್‌ಲೈನ್ಸ್ (Yeti Airlines)ಗೆ ಸೇರಿದ ವಿಮಾನ ಜನವರಿ ತಿಂಗಳಲ್ಲಿ ಪತಗೊಂಡಿತ್ತು. ಇದಕ್ಕೆ ಕಾರಣ ಯಾಂತ್ರಿಕ ಸಮಸ್ಯೆ ಎಂದು ವರದಿಯಾಗಿದೆ.

Nepal Air Crash: ಯೇತಿ ಏರ್‌ಲೈನ್ಸ್ ವಿಮಾನ ಪತನಕ್ಕೆ ಎಂಜಿನ್ ಸಮಸ್ಯೆ ಕಾರಣ: ವರದಿ
ಯೇತಿ ಏರ್​ಲೈನ್ಸ್​ಗೆ ಸೇರಿದ ವಿಮಾನ ಅಪಘಾತ
Follow us
TV9 Web
| Updated By: Rakesh Nayak Manchi

Updated on:Feb 06, 2023 | 7:45 PM

ಕಠ್ಮಂಡು: ನೇಪಾಳದ ಕಠ್ಮಂಡುವಿನಿಂದ ಪೋಖರಾ ಕಡೆಗೆ ತೆರಳುತ್ತಿದ್ದ ಯೇತಿ ಏರ್‌ಲೈನ್ಸ್ (Yeti Airlines)ಗೆ ಸೇರಿದ ವಿಮಾನ ಪತನ (Nepal Air Crash)ಕ್ಕೆ ಎಂಜಿನ್ ಸಮಸ್ಯೆ (ಯಾಂತ್ರಿಕ ದೋಷ) ಎಂದು ವರದಿಯಾಗಿದೆ. ನೇಪಾಳದ ಪೋಖರಾದಲ್ಲಿ ಜನವರಿ 15ರಂದು ಬೆಳಿಗ್ಗೆ ಎರಡು ಎಂಜಿನ್‌ನ ಎಟಿಆರ್ 72 ವಿಮಾನ ಭೀಕರ ಅಪಘಾತಕ್ಕೀಡಾಗಿತ್ತು. ಸುಮಾರು 68 ಪ್ರಯಾಣಿಕರು ಹಾಗೂ ನಾಲ್ವರು ಸಿಬ್ಬಂದಿ ಹೊತ್ತು ಸಾಗುತ್ತಿದ್ದ ಈ ವಿಮಾನ ದುರಂತಕ್ಕೀಡಾಗಿ ಅದರಲ್ಲಿದ್ದ ಅಷ್ಟೂ ಮಂದಿ ಸಾವನ್ನಪ್ಪಿದ್ದರು. ಇದರಲ್ಲಿ ಐವರು ಭಾರತೀಯರಾಗಿದ್ದಾರೆ. 53 ನೇಪಾಳಿಗಳು, 5 ಭಾರತೀಯರು, 4 ರಷ್ಯನ್ನರು, ಒಬ್ಬ ಐರಿಶ್, 2 ಕೊರಿಯನ್ನರು, 1 ಅರ್ಜೆಂಟೀನಾದ ಪ್ರಜೆ ಮತ್ತು ಒಬ್ಬ ಫ್ರೆಂಚ್ ಪ್ರಜೆ ವಿಮಾನದಲ್ಲಿದ್ದರು ಎಂದು ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿತ್ತು.

ಪೊಖರಾಗೆ ತೆರಳಬೇಕಿದ್ದ ವಿಮಾನ ಬೆಳಗ್ಗೆ 10:33ಕ್ಕೆ ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿತ್ತು. ಇದಾದ ಸುಮಾರು 20 ನಿಮಿಷಕ್ಕೆ ವಿಮಾನ ಅಪಘಾತಕ್ಕೀಡಾಗಿತ್ತು. ನಾಗರಿಕ ವಿಮಾನಯಾನ ಪ್ರಾಧಿಕಾರದ ಪ್ರಕಾರ, ಲ್ಯಾಂಡಿಂಗ್ ಮೊದಲು ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಪ್ರಾಥಮಿಕ ತನಿಖೆಯ ಪ್ರಕಾರ, ತಾಂತ್ರಿಕ ದೋಷದಿಂದ ಅಪಘಾತ ಸಂಭವಿಸಿದೆ ಎಂದು ನೇಪಾಳ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದರು. ಮಾತ್ರವಲ್ಲದೆ ವಿಮಾನ ದುರಂತದ ಕುರಿತು ತನಿಖೆ ನಡೆಸಲು 5 ಸದಸ್ಯರ ತನಿಖಾ ಆಯೋಗವನ್ನು ರಚಿಸಲಾಗಿತ್ತು.

ಇದನ್ನೂ ಓದಿ: Nepal Plane Crash: ನೇಪಾಳ ವಿಮಾನ ದುರಂತದಲ್ಲಿ ಎಲ್ಲಾ ಪ್ರಯಾಣಿಕರ ಸಾವು, 5 ಸದಸ್ಯರ ತನಿಖಾ ಆಯೋಗ ರಚನೆ

ಈ ದುರಂತದಲ್ಲಿ ಭಾರತೀಯ ಪ್ರಜೆಗಳಾದ ಅಭಿಷೇಕ್ ಕುಶ್ವಾಹ, ಬಿಶಾಲ್ ಶರ್ಮಾ, ಅನಿಲ್ ಕುಮಾರ್ ರಾಜ್‌ಭರ್, ಸೋನು ಜೈಸ್ವಾಲ್ ಮತ್ತು ಸಂಜಯ ಜೈಸ್ವಾಲ್ ಮೃತಪಟ್ಟಿದ್ದಾರೆ. ಇದು ಅತ್ಯಂತ ದುರದೃಷ್ಟಕರ ಘಟನೆ ಎಂದು ಭಾರತದ ನೇಪಾಳ ರಾಯಭಾರಿ ಶಂಕರ್ ಪಿ ಶರ್ಮಾ ಸಂತಾಪ ಸೂಚಿಸಿದ್ದರು. ನೇಪಾಳ ಪ್ರಧಾನಿ ಹಾಗೂ ಭಾರತದ ನಾಗರಿಕ ವಿಮಾನಯಾನ ಸಚಿವರು ಘಟನೆ ಸಂಬಂಧ ಸಂತಾಪ ವ್ಯಕ್ತಪಡಿಸಿದ್ದರು.

ಸಿರಿಯಮ್ ಫ್ಲೀಟ್ಸ್ ಡೇಟಾ, ವಿಮಾನದ ಫ್ಲೀಟ್, ಉಪಕರಣಗಳು ಮತ್ತು ಅದರ ವೆಚ್ಚವನ್ನು ಟ್ರ್ಯಾಕ್ ಮಾಡಲಾಗಿದೆ, ನದಿಯ ಕಂದರಕ್ಕೆ ಅಪ್ಪಳಿಸಿದ ಯೇತಿ ಏರ್‌ಲೈನ್ಸ್‌ನ 9N-ANC ATR-72 ವಿಮಾನವು ಈ ಹಿಂದೆ 2007ರಲ್ಲಿ ವಿಜಯ್ ಮಲ್ಯ ಕಿಂಗ್‌ಫಿಶರ್ ಏರ್‌ಲೈನ್ಸ್ ಒಡೆತನದಲ್ಲಿತ್ತು ಎಂದು ಹೇಳಲಾಗಿದೆ. ಆರು ವರ್ಷಗಳ ನಂತರ, ಈ ವಿಮಾನವನ್ನು 2019 ರಲ್ಲಿ ನೇಪಾಳದ ಯೇತಿ ಏರ್‌ಲೈನ್ಸ್‌ಗೆ ಮಾರಾಟ ಮಾಡುವ ಮೊದಲು ಥೈಲ್ಯಾಂಡ್‌ನ ನೋಕ್ ಏರ್ ಖರೀದಿಸಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:45 pm, Mon, 6 February 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ