AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳ ಪ್ರವಾಹ: ಕೆಸರಿನಲ್ಲಿ ತೆವಳುತ್ತಾ ಸುರಂಗ ಪ್ರವೇಶಿಸಿ ಜೀವ ಉಳಿಸಿದ ನೇಪಾಳ ಯೋಧರು

ಹಿಮಾಲಯ ಪ್ರದೇಶದಲ್ಲಿ ಗ್ಲೇಸಿಯರ್ ಕುಸಿತದಿಂದ ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. 586ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 2,400ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ನೇಪಾಳ ಸೇನೆಯು ಪ್ರವಾಹ ಪೀಡಿತ ಪ್ರದೇಶಗಳಿಂದ ಜನರನ್ನು ರಕ್ಷಿಸಲು ಬೃಹತ್ ಕಾರ್ಯಾಚರಣೆ ನಡೆಸುತ್ತಿದೆ. ಹೆಲಿಕಾಪ್ಟರ್‌ಗಳ ಮೂಲಕ ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ನೂರಾರು ಕಾರ್ಮಿಕರು ಸುರಂಗದಲ್ಲಿ ಸಿಲುಕಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ.

ನೇಪಾಳ ಪ್ರವಾಹ: ಕೆಸರಿನಲ್ಲಿ ತೆವಳುತ್ತಾ ಸುರಂಗ ಪ್ರವೇಶಿಸಿ ಜೀವ ಉಳಿಸಿದ ನೇಪಾಳ ಯೋಧರು
ರಕ್ಷಣಾ ಕಾರ್ಯಾಚರಣೆImage Credit source: News9
ಅಕ್ಷಯ್​ ಪಲ್ಲಮಜಲು​​
|

Updated on: Aug 29, 2026 | 1:31 PM

Share

ಕಠ್ಮಂಡು, ಆ.29: ಹಿಮಾಲಯ ಪ್ರದೇಶದಲ್ಲಿ ಗ್ಲೇಸಿಯರ್ (ಹಿಮಪಾತ) ಕುಸಿತದಿಂದಾಗಿ ಉಂಟಾದ ಭೀಕರ ಪ್ರವಾಹವು ನೇಪಾಳ ಮತ್ತು ಟಿಬೆಟ್ ಗಡಿ ಪ್ರದೇಶಗಳಲ್ಲಿ ಆಹಾಕಾರ ಸೃಷ್ಟಿಸಿದೆ. ನೇಪಾಳ ಸೇನೆಯು ಪ್ರವಾಹ, ಕೆಸರು ಹಾಗೂ ತ್ಯಾಜ್ಯಗಳ ನಡುವೆ ಸಿಲುಕಿರುವ ಜನರನ್ನು ರಕ್ಷಿಸಲು ಬೃಹತ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.

ನೇಪಾಳದಲ್ಲಿ579 ಹಾಗೂ ಟಿಬೆಟ್‌ನಲ್ಲಿ 7 ಜನರು ಸೇರಿ ಒಟ್ಟು 586ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಗಡಿಯ ಎರಡೂ ಬದಿಗಳಲ್ಲಿ ಇನ್ನೂ 2,400ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ. ಭೋಟೆಕೋಶಿ ನದಿಯ ಆರ್ಭಟಕ್ಕೆ ಸಂಪೂರ್ಣ ಜಲಾವೃತಗೊಂಡಿರುವ ಕಟ್ಟಡಗಳ ಛಾವಣಿ ಮೇಲೆ ಸಾವಿರಾರು ಜನರು ಆಶ್ರಯ ಪಡೆದಿದ್ದಾರೆ. ನೇಪಾಳ ಸೇನೆಯ ಹೆಲಿಕಾಪ್ಟರ್‌ಗಳು ಅತ್ಯಂತ ಅಪಾಯಕಾರಿ ಮಟ್ಟದಲ್ಲಿ ಕೆಳಗಿಳಿದು ಸಂತ್ರಸ್ತರನ್ನು ರಕ್ಷಿಸುತ್ತಿರುವ ದೃಶ್ಯಗಳು ಬೆಳಕಿಗೆ ಬಂದಿವೆ.

ಮನೆಗಳ ಮೇಲ್ಛಾವಣಿಯಿಂದ ಕೈಬೀಸಿ ನೆರವು ಕೋರುತ್ತಿದ್ದ ಜನರನ್ನು ಸೇನಾ ಸಿಬ್ಬಂದಿ ರೋಪ್ ಮೂಲಕ ಹೆಲಿಕಾಪ್ಟರ್‌ಗೆ ಎತ್ತಿಕೊಂಡು ಸುರಕ್ಷಿತ ತಾಣಗಳಿಗೆ ತಲುಪಿಸುತ್ತಿದ್ದಾರೆ. ರಸುವಾ ಜಿಲ್ಲೆಯ ‘ಅಪ್ಪರ್ ತ್ರಿಶೂಲಿ ಜಲವಿದ್ಯುತ್ ಯೋಜನೆ’ಯ ಸುರಂಗದಲ್ಲಿ ನೂರಾರು ಕಾರ್ಮಿಕರು ಹಾಗೂ ಪ್ರವಾಸಿಗರು ಸಿಲುಕಿಕೊಂಡಿದ್ದಾರೆ.

ಇಲ್ಲಿದೆ ನೋಡಿ ವಿಡಿಯೋ:

ಸುರಂಗದ ಪ್ರವೇಶ ದ್ವಾರವು ಗಟ್ಟಿ ಕೆಸರಿನಿಂದ ಆವೃತವಾಗಿದ್ದು, ನೇಪಾಳ ಸೇನೆಯ ಇಬ್ಬರು ಯೋಧರು ಜೀವದ ಹದನೋಡದೆ ಕೆಸರಿನಲ್ಲೇ ತೆವಳುತ್ತಾ ಒಳಹೋಗಿ ನೂರಾರು ಸಂತ್ರಸ್ತರನ್ನು ರಕ್ಷಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ನೇಪಾಳದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಪ್ರಸ್ತುತ 14,829 ಭದ್ರತಾ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಇಲ್ಲಿಯವರೆಗೆ 3,742 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: ನೇಪಾಳ-ಟಿಬೆಟ್ ಜಲಪ್ರಳಯ: ಸಾವಿನ ಸಂಖ್ಯೆ 584ಕ್ಕೆ ಏರಿಕೆ, 2,482 ಮಂದಿ ನಾಪತ್ತೆ, 320 ಭಾರತೀಯರು ಸಂಪರ್ಕಕ್ಕೆ ಸಿಗುತ್ತಿಲ್ಲ

ನೇಪಾಳದಲ್ಲಿ 1,924 ಜನರು ಹಾಗೂ ಟಿಬೆಟ್‌ನಲ್ಲಿ 540ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು ಸೇರಿದಂತೆ 558 ಮಂದಿ ನಾಪತ್ತೆಯಾಗಿದ್ದಾರೆ. ಪ್ರವಾಹ ಪೀಡಿತ ಪ್ರದೇಶದಿಂದ ಇದುವರೆಗೆ 84 ಭಾರತೀಯರನ್ನು ರಕ್ಷಿಸಲಾಗಿದ್ದು, 149 ಮಂದಿ ಚೀನಾದಿಂದ ನೇಪಾಳ ಗಡಿಗೆ ಸುರಕ್ಷಿತವಾಗಿ ತಲುಪಿದ್ದಾರೆ. ಚೀನಾದಲ್ಲಿ 400 ಭಾರತೀಯರು ಸುರಕ್ಷಿತವಾಗಿದ್ದರೂ, ಇನ್ನೂ 320 ಭಾರತೀಯರು ಸಂಪರ್ಕಕ್ಕೆ ಸಿಗುತ್ತಿಲ್ಲ ಅಥವಾ ನಾಪತ್ತೆಯಾಗಿದ್ದಾರೆ.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ
ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ
ದಾವಣಗೆರೆಯಲ್ಲಿ ಅಡಿಕೆ ಬೆಳೆಗಾರರ ಬೃಹತ್ ಪ್ರತಿಭಟನೆ
ದಾವಣಗೆರೆಯಲ್ಲಿ ಅಡಿಕೆ ಬೆಳೆಗಾರರ ಬೃಹತ್ ಪ್ರತಿಭಟನೆ
34 ಕಾಲೇಜು ಹಾಸ್ಟೆಲ್ ಕ್ಯಾಂಟೀನ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
34 ಕಾಲೇಜು ಹಾಸ್ಟೆಲ್ ಕ್ಯಾಂಟೀನ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೇದಿಕೆಯಲ್ಲಿ ರಂಪಾಟ: ಗಂಭೀರ ಆರೋಪ
‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೇದಿಕೆಯಲ್ಲಿ ರಂಪಾಟ: ಗಂಭೀರ ಆರೋಪ
ಶನಿ ಭಗವಾನರ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಶನಿ ಭಗವಾನರ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಕರ್ನಾಟಕ ಪೊಲೀಸರ ಭದ್ರತಾ ಸಾಮರ್ಥ್ಯ ಹೆಚ್ಚಿಸಲು ಬಿಗ್ ಪ್ಲಾನ್
ಕರ್ನಾಟಕ ಪೊಲೀಸರ ಭದ್ರತಾ ಸಾಮರ್ಥ್ಯ ಹೆಚ್ಚಿಸಲು ಬಿಗ್ ಪ್ಲಾನ್
ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ಮನಸಿಗೆ ನೋವಾಗಿದೆ; ಡಿಕೆಶಿ
ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ಮನಸಿಗೆ ನೋವಾಗಿದೆ; ಡಿಕೆಶಿ