AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal Earthquake: ನೇಪಾಳದಲ್ಲಿ 5.3 ತೀವ್ರತೆಯ ಭೂಕಂಪ, ಭಾರತ ಸೇರಿದಂತೆ 5 ದೇಶಗಳಲ್ಲಿ ಕಂಪಿಸಿದ ಭೂಮಿ

ನೇಪಾಳದಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಭಾರತ ಸೇರಿ ಐದು ದೇಶಗಳಲ್ಲಿ ಕಂಪನದ ಅನುಭವವಾಗಿದೆ. ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿಯ ವರದಿಯಾಗಿಲ್ಲ. ಹಿಮಾಲಯ ಪ್ರದೇಶವು ಭೂಫಲಕಗಳ ಘರ್ಷಣೆಯಿಂದ ಭೂಕಂಪಕ್ಕೆ ಸೂಕ್ಷ್ಮವಾಗಿದೆ. ಭೂಕಂಪದ ಸಮಯದಲ್ಲಿ ಸುರಕ್ಷಿತವಾಗಿರಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈ ಲೇಖನ ಮಾಹಿತಿ ನೀಡುತ್ತದೆ. ಭಯಪಡದೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚಿಸಲಾಗಿದೆ.

Nepal Earthquake: ನೇಪಾಳದಲ್ಲಿ 5.3 ತೀವ್ರತೆಯ ಭೂಕಂಪ, ಭಾರತ ಸೇರಿದಂತೆ 5 ದೇಶಗಳಲ್ಲಿ ಕಂಪಿಸಿದ ಭೂಮಿ
ಭೂಕಂಪ
ನಯನಾ ರಾಜೀವ್
|

Updated on:Nov 24, 2026 | 8:45 AM

Share

ಕಠ್ಮಂಡು, ನವೆಂಬರ್ 24: ನೇಪಾಳದಲ್ಲಿ ಭೂಕಂಪ ಸಂಭವಿಸಿದೆ. ಭಾರತ ಸೇರಿದಂತೆ ಹಲವು ಗಡಿ ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಮಂಗಳವಾರ ಬೆಳಗ್ಗೆ ನೇಪಾಳದ ಕೋಶಿ ಪ್ರಾಂತ್ಯದ ಲೆಲೆಪ್ ಸಮೀಪ 5.3 ತೀವ್ರತೆಯ ಭೂಕಂಪ ಸಂಭವಿಸಿದೆ. ಇದರ ಪರಿಣಾಮ ಭಾರತ, ಭೂತಾನ್, ಬಾಂಗ್ಲಾದೇಶ ಮತ್ತು ಚೀನಾದ ಕೆಲವು ಭಾಗಗಳಲ್ಲೂ ಕಂಪನದ ಅನುಭವವಾಗಿದೆ. ಬೆಳಗಿನ ಜಾವ ಜನರು ಭೂಮಿ ನಡುಗಿದ ಅನುಭವದಿಂದ ಆತಂಕಕ್ಕೊಳಗಾಗಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಯಾವುದೇ ಸಾವು-ನೋವು ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಪ್ರಕಾರ, ಬೆಳಗ್ಗೆ ಸುಮಾರು 7.02ಕ್ಕೆ ಭೂಕಂಪ ಸಂಭವಿಸಿದೆ. ಭೂಮಿಯ ಒಳಗೆ ಸುಮಾರು 20 ಕಿಲೋಮೀಟರ್ ಆಳದಲ್ಲಿ ಕಂಪನದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.

ಆದರೆ ನೇಪಾಳದ ರಾಷ್ಟ್ರೀಯ ಭೂಕಂಪ ಮಾನಿಟರಿಂಗ್ ಮತ್ತು ಸಂಶೋಧನಾ ಕೇಂದ್ರವು ಭೂಕಂಪದ ತೀವ್ರತೆ 5.6 ಎಂದು ದಾಖಲಿಸಿದೆ. ನೇಪಾಳ-ಟಿಬೆಟ್ ಗಡಿಯ ಸಮೀಪದ ತಾಪ್ಲೆಜಂಗ್ ಜಿಲ್ಲೆಯ ಓಲಾಂಗ್‌ಚುಂಗ್ ಗೋಲಾ ಪ್ರದೇಶವನ್ನು ಕೇಂದ್ರಬಿಂದುವೆಂದು ಗುರುತಿಸಲಾಗಿದೆ ಎಂದು ದಿ ಕಠ್ಮಂಡು ಪೋಸ್ಟ್ ವರದಿ ಮಾಡಿದೆ.

ಭಾರತದ ಬಿಹಾರ, ಮೇಘಾಲಯ ಮತ್ತು ಪಶ್ಚಿಮ ಬಂಗಾಳದ ಕೆಲವು ಪ್ರದೇಶಗಳಲ್ಲಿಯೂ ಕಂಪನದ ಅನುಭವವಾಗಿದೆ. ವಿಶೇಷವಾಗಿ ಹಿಮಾಲಯದ ಗಡಿ ಭಾಗಗಳಲ್ಲಿ ಭೂಕಂಪನದ ಪರಿಣಾಮ ಕಂಡುಬಂದಿದೆ. ಆದರೆ ಎಲ್ಲಿಯೂ ದೊಡ್ಡ ಪ್ರಮಾಣದ ಹಾನಿ ಸಂಭವಿಸಿರುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಒಂದೇ ದಿನ ಅಸ್ಸಾಂನಲ್ಲೂ ಭೂಕಂಪ ನೇಪಾಳದಲ್ಲಿ ಭೂಕಂಪ ಸಂಭವಿಸಿದ ದಿನವೇ ಅಸ್ಸಾಂನಲ್ಲೂ ಮತ್ತೊಂದು ಸಣ್ಣ ಪ್ರಮಾಣದ ಭೂಕಂಪ ದಾಖಲಾಗಿದೆ. ಮಂಗಳವಾರ ಬೆಳಗಿನ ಜಾವ 3.39ಕ್ಕೆ ಅಸ್ಸಾಂನ ಕರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ 2.5 ತೀವ್ರತೆಯ ಕಂಪನ ಸಂಭವಿಸಿದೆ. ಭೂಮಿಯ ಸುಮಾರು 15 ಕಿಲೋಮೀಟರ್ ಆಳದಲ್ಲಿ ಇದರ ಕೇಂದ್ರಬಿಂದು ಪತ್ತೆಯಾಗಿದೆ ಎಂದು ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಇದನ್ನೂ ಓದಿ: ಪೆಸಿಫಿಕ್ ಸಾಗರದಲ್ಲಿ ನಡುಗಿದ ಭೂಮಿ: ವನವಾಟು ದ್ವೀಪಗಳಲ್ಲಿ 3 ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

ಭೂಕಂಪ ಸಂಭವಿಸಲು ಕಾರಣವೇನು? ಭಾರತ ಮತ್ತು ನೇಪಾಳದ ಬಹುತೇಕ ಹಿಮಾಲಯ ಪ್ರದೇಶಗಳು ಭೂಕಂಪದ ದೃಷ್ಟಿಯಿಂದ ಸೂಕ್ಷ್ಮ ಪ್ರದೇಶಗಳಾಗಿವೆ. ಇದಕ್ಕೆ ಪ್ರಮುಖ ಕಾರಣ ಭೂಮಿಯ ಒಳಭಾಗದಲ್ಲಿರುವ ಭೂಫಲಕಗಳ ಚಲನೆ.

ಭಾರತೀಯ ಭೂಫಲಕವು ಉತ್ತರದ ಕಡೆಗೆ ಚಲಿಸಿ ಯುರೇಷಿಯನ್ ಭೂಫಲಕದೊಂದಿಗೆ ನಿರಂತರವಾಗಿ ಘರ್ಷಿಸುತ್ತಿದೆ. ಈ ಒತ್ತಡದಿಂದ ಭೂಮಿಯ ಒಳಭಾಗದಲ್ಲಿ ಶಕ್ತಿ ಸಂಗ್ರಹವಾಗುತ್ತದೆ. ಅದು ಬಿಡುಗಡೆಯಾದಾಗ ಭೂಕಂಪ ಸಂಭವಿಸುತ್ತದೆ. ಹೀಗಾಗಿ ಹಿಮಾಲಯದ ಸುತ್ತಮುತ್ತ ಆಗಾಗ ಭೂಕಂಪಗಳು ಸಂಭವಿಸುತ್ತವೆ.

ಭೂಕಂಪ ಸಂಭವಿಸಿದಾಗ ಏನು ಮಾಡಬೇಕು? – ಕಂಪನದ ಅನುಭವವಾದರೆ ಗಾಬರಿಯಾಗದೆ ಸುರಕ್ಷಿತ ಸ್ಥಳಕ್ಕೆ ತೆರಳಬೇಕು. – ಮನೆಯೊಳಗಿದ್ದರೆ ಗಟ್ಟಿಯಾದ ಮೇಜಿನ ಕೆಳಗೆ ಕುಳಿತು ತಲೆ ಮತ್ತು ಕುತ್ತಿಗೆಯನ್ನು ರಕ್ಷಿಸಿಕೊಳ್ಳಬೇಕು. – ಕಿಟಕಿ, ಗಾಜು ಮತ್ತು ಭಾರವಾದ ವಸ್ತುಗಳಿಂದ ದೂರವಿರಬೇಕು. – ಲಿಫ್ಟ್ ಬಳಸಬಾರದು. – ಕಂಪನ ನಿಂತ ಬಳಿಕ ಕಟ್ಟಡದಿಂದ ಸುರಕ್ಷಿತವಾಗಿ ಹೊರಬಂದು ತೆರೆದ ಜಾಗದಲ್ಲಿ ನಿಲ್ಲಬೇಕು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:45 am, Tue, 24 November 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?
ಬಂಗಾರದ ಬೆಲೆ ಪಾತಾಳಕ್ಕೆ ಕುಸಿದಿರುವುದ್ಯಾಕೆ? ಇಲ್ಲಿವೆ ಅಸಲಿ ಕಾರಣಗಳು
ಬಂಗಾರದ ಬೆಲೆ ಪಾತಾಳಕ್ಕೆ ಕುಸಿದಿರುವುದ್ಯಾಕೆ? ಇಲ್ಲಿವೆ ಅಸಲಿ ಕಾರಣಗಳು
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ
ಆರ್ಥಿಕ ಸಂಕಷ್ಟದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ
ಆರ್ಥಿಕ ಸಂಕಷ್ಟದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ
ಎಲ್ಲದಕ್ಕೂ ಪರಿಹಾರ ಕೊಟ್ರೇ ಸರ್ಕಾರ ನಡೆಸುವುದ್ಹೇಗೆ? ಸಚಿವ ಶಿವಲಿಂಗೇಗೌಡ
ಎಲ್ಲದಕ್ಕೂ ಪರಿಹಾರ ಕೊಟ್ರೇ ಸರ್ಕಾರ ನಡೆಸುವುದ್ಹೇಗೆ? ಸಚಿವ ಶಿವಲಿಂಗೇಗೌಡ
ಕೊಪ್ಪಳದ ಗವಿಮಠದ ಕಾರ್ಯಕ್ಕೆ ನಿವೃತ್ತ ನ್ಯಾಯಮೂರ್ತಿ ದೀಕ್ಷಿತ್ ಮೆಚ್ಚುಗೆ
ಕೊಪ್ಪಳದ ಗವಿಮಠದ ಕಾರ್ಯಕ್ಕೆ ನಿವೃತ್ತ ನ್ಯಾಯಮೂರ್ತಿ ದೀಕ್ಷಿತ್ ಮೆಚ್ಚುಗೆ
ಬಿಗ್ ಬಾಸ್ ಕನ್ನಡ 13: ಯಶಸ್ ಆಟಕ್ಕೆ ದೊಡ್ಡ ಕಂಟಕವಾದ ಗಗನ್ ಚಿನ್ನಪ್ಪ
ಬಿಗ್ ಬಾಸ್ ಕನ್ನಡ 13: ಯಶಸ್ ಆಟಕ್ಕೆ ದೊಡ್ಡ ಕಂಟಕವಾದ ಗಗನ್ ಚಿನ್ನಪ್ಪ