Nepal Earthquake: ನೇಪಾಳದಲ್ಲಿ ಸಂಭವಿಸಿದ 5.9 ತೀವ್ರತೆಯ ಪ್ರಭಲ ಭೂಕಂಪಕ್ಕೆ ಓರ್ವ ಬಲಿ

ನೇಪಾಳದಲ್ಲಿ ಸಂಭವಿಸಿದ 5.9 ತೀವ್ರತೆಯ ಪ್ರಭಲ ಭೂಕಂಪದಲ್ಲಿ ಓರ್ವ ಪ್ರಾಣ ಕಳೆದುಕೊಂಡಿದ್ದಾರೆ.  ಪಶ್ಚಿಮ ನೇಪಾಳದಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಈ ಪ್ರದೇಶದಲ್ಲಿ ಹಲವಾರು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Nepal Earthquake: ನೇಪಾಳದಲ್ಲಿ ಸಂಭವಿಸಿದ 5.9 ತೀವ್ರತೆಯ ಪ್ರಭಲ ಭೂಕಂಪಕ್ಕೆ ಓರ್ವ ಬಲಿ
ಭೂಕಂಪImage Credit source: The Hindu
Follow us
ನಯನಾ ರಾಜೀವ್
|

Updated on: Jan 25, 2023 | 12:23 PM

ನೇಪಾಳದಲ್ಲಿ ಸಂಭವಿಸಿದ 5.9 ತೀವ್ರತೆಯ ಪ್ರಭಲ ಭೂಕಂಪದಲ್ಲಿ ಓರ್ವ ಪ್ರಾಣ ಕಳೆದುಕೊಂಡಿದ್ದಾರೆ.  ಪಶ್ಚಿಮ ನೇಪಾಳದಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಈ ಪ್ರದೇಶದಲ್ಲಿ ಹಲವಾರು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುದುರ್ಪಶ್ಚಿಮ್ ಪ್ರಾಂತ್ಯದ ಬಾಜುರಾ ಜಿಲ್ಲೆಯ ಮೇಲಾ ಪ್ರದೇಶದಲ್ಲಿ ಭೂಕಂಪವು ಸ್ಥಳೀಯ ಕಾಲಮಾನ ಮಧ್ಯಾಹ್ನ 2:43 ಕ್ಕೆ ಈ ಪ್ರದೇಶವನ್ನು ಅಪ್ಪಳಿಸಿತು ಎಂದು ಭೂಕಂಪ ಮಾಪನ ಮತ್ತು ಸಂಶೋಧನಾ ಕೇಂದ್ರದ ಮುಖ್ಯಸ್ಥ ಲೋಕ ಬಿಜಯ ಅಧಿಕಾರಿ ತಿಳಿಸಿದ್ದಾರೆ.

ಗೌಮುಲ್ ಗ್ರಾಮಾಂತರ ಪುರಸಭೆ-2ರಲ್ಲಿ 35 ವರ್ಷದ ಮಹಿಳೆಯೊಬ್ಬರು ಸಮೀಪದ ಕಾಡಿನಲ್ಲಿ ಹುಲ್ಲು ಕಡಿಯುತ್ತಿದ್ದಾಗ ಬಂಡೆಯೊಂದು ಬಡಿದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Delhi Earthquake: ದೆಹಲಿಯಲ್ಲಿ ಪ್ರಬಲ ಭೂಕಂಪ

ಪ್ರಾಂತೀಯ ಪೊಲೀಸ್ ಮುಖ್ಯಸ್ಥರ ಪ್ರಕಾರ, ಭೂಕಂಪವು ಬಜುರಾ ಮತ್ತು ಬಜಾಂಗ್ ಜಿಲ್ಲೆಗಳಲ್ಲಿ ಹಲವಾರು ಮನೆಗಳಿಗೆ ಹಾನಿಯಾಗಿದೆ.

ಕಠ್ಮಂಡುವಿನಿಂದ ಪಶ್ಚಿಮಕ್ಕೆ 450 ಕಿಮೀ ದೂರದಲ್ಲಿರುವ ಬಾಜುರಾ ಜಿಲ್ಲೆಯ ಬಾಡಿಮಲಿಕಾ ಪುರಸಭೆಯ ವಾರ್ಡ್ ಸಂಖ್ಯೆ 7 ರಲ್ಲಿ ಎರಡು ಮನೆಗಳು ಮತ್ತು ವಾರ್ಡ್ ಸಂಖ್ಯೆ 9 ರಲ್ಲಿ ಇತರ ಎರಡು ಮನೆಗಳು ನಾಶವಾಗಿವೆ. ಪುರಸಭೆಯ ದೇವಸ್ಥಾನವೊಂದರಲ್ಲೂ ಬಿರುಕು ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭೂಕಂಪದಿಂದ ಉಂಟಾದ ಭೂಕುಸಿತದಿಂದಾಗಿ 40 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ, ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಶ್ಚಿಮ ನೇಪಾಳದ ವಿಶಾಲ ಪ್ರದೇಶಗಳಲ್ಲಿ 5.9 ತೀವ್ರತೆಯ ಭೂಕಂಪದ ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಮತ್ತು ಸಂಶೋಧನಾ ಕೇಂದ್ರದ ಮುಖ್ಯಸ್ಥೆ ಮೋನಿಕಾ ದಹಲ್ ಹೇಳಿದ್ದಾರೆ. ಇದು ನೆರೆಯ ಭಾರತದ ಕೆಲವು ಭಾಗಗಳಲ್ಲಿಯೂ ಕಂಡುಬಂದಿದೆ.

ಪಶ್ಚಿಮ ನೇಪಾಳವು ಸೌಮ್ಯದಿಂದ ಮಧ್ಯಮ ತೀವ್ರತೆಯ ಭೂಕಂಪಗಳಿಂದ ಆಗಾಗ ಹಾನಿಗೊಳಗಾಗುತ್ತದೆ. ಡಿಸೆಂಬರ್ 2022 ರಲ್ಲಿ, ಮೂರು ಕಂಪನಗಳು ಪಶ್ಚಿಮ ನೇಪಾಳವನ್ನು ಅಲುಗಾಡಿಸಿತ್ತು. ಏಪ್ರಿಲ್ 2015 ರಲ್ಲಿ, ನೇಪಾಳದಲ್ಲಿ 7.8 ತೀವ್ರತೆಯ ವಿನಾಶಕಾರಿ ಭೂಕಂಪವು ಸುಮಾರು 9,000 ಜನರನ್ನು ಕೊಂದಿತ್ತು ಮತ್ತು ಸುಮಾರು 22,000 ಜನರು ಗಾಯಗೊಂಡಿದ್ದರು, ಇದು 800,000 ಮನೆಗಳು ಮತ್ತು ಶಾಲಾ ಕಟ್ಟಡಗಳನ್ನು ಹಾನಿಗೊಳಿಸಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ
ಹಿಂದೆ ಯೋಗೇಶ್ವರ್ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮಾತಾಡಿದ್ದರು: ಸುರೇಶ್
ಹಿಂದೆ ಯೋಗೇಶ್ವರ್ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮಾತಾಡಿದ್ದರು: ಸುರೇಶ್
ಯಾದಗಿರಿ ತಲುಪಿ ರೈತರ ಸಂಕಷ್ಟ ಆಲಿಸುತ್ತಿರುವ ಬಸನಗೌಡ ಯತ್ನಾಳ್ ತಂಡ
ಯಾದಗಿರಿ ತಲುಪಿ ರೈತರ ಸಂಕಷ್ಟ ಆಲಿಸುತ್ತಿರುವ ಬಸನಗೌಡ ಯತ್ನಾಳ್ ತಂಡ
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್
ಶಿಶುವನ್ನು ವಾಪಸ್ಸು ಪಡೆದ ತಂದೆತಾಯಿಗಳ ಸಂತೋಷಕ್ಕೆ ಪಾರವೇ ಇಲ್ಲ!
ಶಿಶುವನ್ನು ವಾಪಸ್ಸು ಪಡೆದ ತಂದೆತಾಯಿಗಳ ಸಂತೋಷಕ್ಕೆ ಪಾರವೇ ಇಲ್ಲ!
ಮುಸ್ಲಿಮರಿಗೆ ಮತದಾನದ ಹಕ್ಕು: ಸ್ವಾಮೀಜಿ ಹೇಳಿಕೆಗೆ ಮಹದೇವಪ್ಪ ಗರಂ
ಮುಸ್ಲಿಮರಿಗೆ ಮತದಾನದ ಹಕ್ಕು: ಸ್ವಾಮೀಜಿ ಹೇಳಿಕೆಗೆ ಮಹದೇವಪ್ಪ ಗರಂ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ