AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal Earthquake: ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ, ಸಾವಿನ ಸಂಖ್ಯೆ 129ಕ್ಕೆ ಏರಿಕೆ

ನೇಪಾಳದಲ್ಲಿ ಶುಕ್ರವಾರ ರಾತ್ರಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 129ಕ್ಕೆ ಏರಿಕೆಯಾಗಿದೆ. ಭೂಕಂಪದ ಕೇಂದ್ರ ಬಿಂದು ನೇಪಾಳದ ಜಜರ್ಕೋಟ್ ಜಿಲ್ಲೆಯ ಲಾಮಿಡಾಂಡಾ ಪ್ರದೇಶದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರದ ಅಧಿಕಾರಿಗಳ ಹೇಳಿದ್ದಾರೆ. ದೆಹಲಿ-ಎನ್‌ಸಿಆರ್ ಪ್ರದೇಶ, ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಪ್ರಬಲ ಕಂಪನಗಳು ಸಂಭವಿಸಿವೆ.

Nepal Earthquake: ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ, ಸಾವಿನ ಸಂಖ್ಯೆ 129ಕ್ಕೆ ಏರಿಕೆ
ನೇಪಾಳದಲ್ಲಿ ಭೂಕಂಪ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Nov 04, 2023 | 8:03 AM

Share

ಕಠ್ಮಂಡು, ನ.4: ನೇಪಾಳದ ಕಠ್ಮಂಡು, ಪಶ್ಚಿಮ ರುಕುಂ, ಜಾಜರಕೋಟ್ ಸೇರಿದಂತೆ ಹಲವೆಡೆ ಭೂಕಂಪ (Nepal Earthqauke) ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 129ಕ್ಕೆ ಏರಿಕೆಯಾಗಿದ್ದು, 500 ಮಂದಿ ಗಾಯಗೊಂಡಿದ್ದಾರೆ. ದೆಹಲಿ-ಎನ್‌ಸಿಆರ್ ಪ್ರದೇಶ, ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಪ್ರಬಲ ಕಂಪನಗಳು ಸಂಭವಿಸಿವೆ. ಭೂಕಂಪನದ ರಾಷ್ಟ್ರೀಯ ಕೇಂದ್ರ (NCS) ಪ್ರಕಾರ, ಭೂಕಂಪವು ಶುಕ್ರವಾರ ರಾತ್ರಿ 11:32 ಕ್ಕೆ 10 ಕಿಮೀ ಆಳದಲ್ಲಿ ಸಂಭವಿಸಿದೆ.

ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರದ ಅಧಿಕಾರಿಗಳ ಪ್ರಕಾರ, ಭೂಕಂಪದ ಕೇಂದ್ರಬಿಂದು ನೇಪಾಳದ ಜಜರ್ಕೋಟ್ ಜಿಲ್ಲೆಯ ಲಾಮಿಡಾಂಡಾ ಪ್ರದೇಶದಲ್ಲಿದೆ. ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಸಂಭವಿಸಿದ ಸರಣಿ ಭೂಕಂಪಗಳ ಬೆನ್ನಲ್ಲೇ ಶುಕ್ರವಾರ ಭೂಕಂಪ ಸಂಭವಿಸಿದೆ.

ಇದನ್ನೂ ಓದಿ: Nepal Earthquake: ನೇಪಾಳದ ಕಠ್ಮಂಡುವಿನಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ

ಜಾಜರಕೋಟ್​​​​​​ನಲ್ಲಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಜಾಜರಕೋಟ್​​​​​​ ಡೆಪ್ಯುಟಿ ಮೇಯರ್ ಕೂಡ ಮೃತಪಟ್ಟಿದ್ದಾರೆ. ಪಶ್ಚಿಮ ರುಕುಂ ಜಿಲ್ಲೆಯಲ್ಲಿ 36 ಜನ, ಜಾಜರಕೋಟ್​ನಲ್ಲಿ 34 ಜನ ಸಾವನ್ನಪ್ಪಿದ್ದು, ಒಟ್ಟಾರೆಯಾಗಿ 129 ಮಂದಿಯನ್ನು ಭೂಕಂಪವು ಬಲಿ ಪಡೆದುಕೊಂಡಿದೆ.

ಕೆಲವು ದಿನಗಳ ಹಿಂದೆ, ಅಕ್ಟೋಬರ್ 22 ರಂದು ನೇಪಾಳದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿತ್ತು. ಭೂಕಂಪದ ಕೇಂದ್ರಬಿಂದು ಧಾಡಿಂಗ್‌ನಲ್ಲಿದ್ದು, ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿಯೂ ಭೂಕಂಪದ ಕಂಪನದ ಅನುಭವವಾಗಿತ್ತು. ಅಕ್ಟೋಬರ್ 15 ರಂದು, ಹರಿಯಾಣದಲ್ಲಿ 3.1 ತೀವ್ರತೆಯ ಭೂಕಂಪನದ ನಡುಕ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಅನುಭವವಾಗಿತ್ತು.

ಅಕ್ಟೋಬರ್ 3 ರಂದು ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಬಲವಾದ ಕಂಪನಗಳು ಸಂಭವಿಸಿದ್ದವು. ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆ ದಾಖಲಾಗಿತ್ತು.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:37 am, Sat, 4 November 23

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?