AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal Flood: ನೇಪಾಳ ಜಲಪ್ರಳಯದಲ್ಲಿ ಕೈಲಾಸ ಯಾತ್ರಿಕರು ನಾಪತ್ತೆ: ಇಶಾ ಫೌಂಡೇಶನ್‌ನ 77 ಮಂದಿ ಹಾಗೂ ಕೋಲ್ಕತ್ತಾದ 32 ಯಾತ್ರಿಕರ ಸಂಪರ್ಕ ಕಟ್

ನೇಪಾಳದ ಭೋಟೆ ಕೋಶಿ ನದಿಯ ಹಠಾತ್ ಪ್ರವಾಹದಲ್ಲಿ ಕೈಲಾಸ ಮಾನಸಸರೋವರ ಯಾತ್ರೆ ಮುಗಿಸಿ ಹಿಂದಿರುಗುತ್ತಿದ್ದ ಯಾತ್ರಿಕರು ನಾಪತ್ತೆಯಾಗಿದ್ದಾರೆ. ಆಧ್ಯಾತ್ಮಿಕ ಗುರು ಸದ್ಗುರು ಅವರ ಇಶಾ ಫೌಂಡೇಶನ್‌ನ 77 ಸದಸ್ಯರು ಹಾಗೂ ಕೋಲ್ಕತ್ತಾದ 32 ಪ್ರವಾಸಿಗರು ಸಂಪರ್ಕಕ್ಕೆ ಸಿಗುತ್ತಿಲ್ಲ. ಒಟ್ಟು 384 ಯಾತ್ರಿಕರು, 105 ಭಾರತೀಯರು ಸೇರಿದಂತೆ, ನಾಪತ್ತೆಯಾಗಿದ್ದು, ನೇಪಾಳ ಮತ್ತು ಚೀನಾ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

Nepal Flood: ನೇಪಾಳ ಜಲಪ್ರಳಯದಲ್ಲಿ ಕೈಲಾಸ ಯಾತ್ರಿಕರು ನಾಪತ್ತೆ: ಇಶಾ ಫೌಂಡೇಶನ್‌ನ 77 ಮಂದಿ ಹಾಗೂ ಕೋಲ್ಕತ್ತಾದ 32 ಯಾತ್ರಿಕರ ಸಂಪರ್ಕ ಕಟ್
ನೇಪಾಳ ಪ್ರವಾಹ
ನಯನಾ ರಾಜೀವ್
|

Updated on: Aug 27, 2026 | 8:53 AM

Share

ಕಠ್ಮಂಡು, ಆಗಸ್ಟ್​ 27: ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಭೋಟೆ ಕೋಶಿ ನದಿಯಲ್ಲಿ ಉಂಟಾದ ಭೀಕರ ಹಠಾತ್ ಪ್ರವಾಹ(Flood)ಕ್ಕೆ ಸಿಲುಕಿ, ಕೈಲಾಸ ಮಾನಸಸರೋವರ ಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಆಧ್ಯಾತ್ಮಿಕ ಗುರು ಸದ್ಗುರು ಅವರ ಇಶಾ ಫೌಂಡೇಶನ್‌ನ 77 ಸದಸ್ಯರು ಹಾಗೂ ಕೋಲ್ಕತ್ತಾದ 32 ಪ್ರವಾಸಿಗರ ಗುಂಪು ಸಂಪರ್ಕಕ್ಕೆ ಸಿಗುತ್ತಿಲ್ಲ. ಟಿಬೆಟ್‌ನ ಗೈರಾಂಗ್ (ಕ್ಸಿಗೇಜ್) ಮತ್ತು ನೇಪಾಳದ ರಸುವಾಗಧಿ ಗಡಿ ವಲಸೆ ಕಚೇರಿಗಳ ಮೇಲೆ ಏಕಾಏಕಿ ನುಗ್ಗಿದ ಬೃಹತ್ ಜಲರಾಶಿಯು ಕಟ್ಟಡಗಳನ್ನು ಮುಳುಗಿಸಿದ್ದು, ನೂರಾರು ಯಾತ್ರಿಕರು ಸಿಲುಕಿಕೊಂಡಿದ್ದಾರೆ.

ಸದ್ಗುರುಗಳ ಮಾಹಿತಿ ಮತ್ತು ಇಶಾ ಫೌಂಡೇಶನ್ ಪರಿಸ್ಥಿತಿ

ವಲಸೆ ಕಚೇರಿಯಲ್ಲಿ ಸಿಲುಕಿದ ತಂಡ: ಕೈಲಾಸ ಯಾತ್ರೆ ಮುಗಿಸಿ ಗೈರಾಂಗ್ ವಲಸೆ ಕಚೇರಿಯಲ್ಲಿ ಕ್ಲಿಯರೆನ್ಸ್ ಪ್ರಕ್ರಿಯೆಯಲ್ಲಿದ್ದಾಗ ಭೀಕರ ಅಲೆಯೊಂದು ಇಡೀ ಪಟ್ಟಣ ಮತ್ತು ಕಚೇರಿಯನ್ನು ಆವರಿಸಿತು ಎಂದು ಸದ್ಗುರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ. ಪ್ರವಾಸದಲ್ಲಿದ್ದ 21 ಗುಂಪುಗಳ ಪೈಕಿ 495 ಮಂದಿ ಸುರಕ್ಷಿತವಾಗಿ ಮರಳಿದ್ದು, 743 ಜನರು ಟಿಬೆಟ್‌ನಲ್ಲಿ ಹಾಗೂ 145 ಜನರು ನೇಪಾಳ ಭಾಗದಲ್ಲಿದ್ದಾರೆ.

ರಕ್ಷಣೆಗೆ ಇಶಾ ತಂಡ ಸನ್ನದ್ಧ: ಸಂಕಷ್ಟದಲ್ಲಿರುವ ಯಾತ್ರಿಕರನ್ನು ರಕ್ಷಿಸಲು ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲಾಗುತ್ತಿದ್ದು, ಯಾವುದೇ ಅಪಾಯವನ್ನು ಎದುರಿಸಿ ರಕ್ಷಣಾ ಕಾರ್ಯಾಚರಣೆಗೆ ಇಳಿಯಲು ತಮ್ಮ ಸ್ವಯಂಸೇವಕ ಪಡೆ ಸಿದ್ಧವಿದೆ ಎಂದು ಸದ್ಗುರು ಹೇಳಿದ್ದಾರೆ.

ಮತ್ತಷ್ಟು ಓದಿ: ಪ್ರವಾಹ ಪೀಡಿತ ನೇಪಾಳಕ್ಕೆ ಭಾರತದಿಂದ 10 ಟನ್ ಮಾನವೀಯ ನೆರವು ರವಾನೆ

ಕೊನೆಯ ಸಂಪರ್ಕ: ಕೋಲ್ಕತ್ತಾದಿಂದ ಆಗಸ್ಟ್ 21 ರಂದು ತೆರಳಿದ್ದ 30 ಯಾತ್ರಿಕರು ಮತ್ತು ಇಬ್ಬರು ಟೂರ್ ಮ್ಯಾನೇಜರ್‌ಗಳಿದ್ದ ತಂಡವು ರಸುವಾಗಧಿ ಗಡಿಯಲ್ಲಿದ್ದಾಗ ಬೆಳಗ್ಗೆ 8.30 ರ ಸುಮಾರಿಗೆ ಸಂಪರ್ಕ ಕಡಿದುಕೊಂಡಿದೆ.

ಬಂಗಾಳ ಸರ್ಕಾರದ ಸಹಾಯವಾಣಿ: ಸಂತ್ರಸ್ತ ಯಾತ್ರಿಕರ ಕುಟುಂಬಗಳಿಗಾಗಿ ಭವಾನಿ ಭವನ ಪೊಲೀಸ್ ಪ್ರಧಾನ ಕಚೇರಿಯಲ್ಲಿ 033-24793311 ಮತ್ತು 9147890181 ತುರ್ತು ಸಹಾಯವಾಣಿಗಳನ್ನು ಸಕ್ರಿಯಗೊಳಿಸಲಾಗಿದೆ.

ಒಟ್ಟು 384 ಯಾತ್ರಿಕರ ಶೋಧ: ನೇಪಾಳ ಪ್ರವಾಸೋದ್ಯಮ ಮಂಡಳಿಯ ಪ್ರಕಾರ, ಪ್ರವಾಹ ಪೀಡಿತ ಗಡಿ ಪ್ರದೇಶದಲ್ಲಿ 105 ಭಾರತೀಯರು ಸೇರಿದಂತೆ 291 ವಿದೇಶಿಯರು ಮತ್ತು 93 ನೇಪಾಳಿ ನಾಗರಿಕರು ನಾಪತ್ತೆಯಾಗಿದ್ದಾರೆ.

ವಿಡಿಯೋ

ಚೀನಾ-ನೇಪಾಳ ಜಂಟಿ ಕಾರ್ಯಾಚರಣೆ: ಟಿಬೆಟ್ ಕಡೆಯಿಂದ ಚೀನಾದ ಪೀಪಲ್ಸ್ ಆರ್ಮ್ಡ್ ಪೊಲೀಸ್ ಮತ್ತು ನೇಪಾಳ ಕಡೆಯಿಂದ ಸೇನಾ ಹೆಲಿಕಾಪ್ಟರ್‌ಗಳು ಸಂವಹನ ಸಂಪೂರ್ಣ ಸ್ಥಗಿತಗೊಂಡಿರುವ ಕಣಿವೆ ಪ್ರದೇಶಗಳಲ್ಲಿ ಯಾತ್ರಿಕರ ಪತ್ತೆಗೆ ತೀವ್ರ ಶೋಧ ನಡೆಸುತ್ತಿವೆ.

ಹಠಾತ್ ಪ್ರವಾಹವು ಹಲವಾರು ವಸಾಹತುಗಳು, ರಸ್ತೆಗಳು, ಸೇತುವೆಗಳು, ಭದ್ರತಾ ಕಂಬಗಳು ಮತ್ತು ಜಲವಿದ್ಯುತ್ ಯೋಜನೆಗಳಿಗೆ ವ್ಯಾಪಕ ಹಾನಿಯನ್ನುಂಟುಮಾಡಿದೆ. ನೇಪಾಳ ಸೇನೆ, ಸಶಸ್ತ್ರ ಪೊಲೀಸ್ ಪಡೆ ಮತ್ತು ನೇಪಾಳ ಪೊಲೀಸರ ತಂಡಗಳು ನಿರಂತರ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!