AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹದಲ್ಲಿ ಕೊಚ್ಚಿಬಂದ ಮಹಿಳೆಯ ಶವದಿಂದ ಕಿವಿಯೋಲೆ ಕದ್ದ ಕಳ್ಳರ ಸೆರೆ

ನೇಪಾಳದಲ್ಲಿ ಭೀಕರ ಪ್ರವಾಹದಿಂದ ಮೃತಪಟ್ಟ ಮಹಿಳೆಯ ಶವದಿಂದ ಕಿವಿಯೋಲೆ ಕದ್ದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಾರಾಯಣಿ ನದಿಯಲ್ಲಿ ಕೊಚ್ಚಿಬಂದ ಶವದಿಂದ ಆಭರಣ ಕದಿಯುವ ದೃಶ್ಯ ವೈರಲ್ ಆದ ನಂತರ ಈ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ನೈಸರ್ಗಿಕ ವಿಕೋಪದ ನಡುವೆಯೂ ನಡೆದ ಈ ಹೀನ ಕೃತ್ಯ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆಹಿಡಿದಿದ್ದಾರೆ.

ಪ್ರವಾಹದಲ್ಲಿ ಕೊಚ್ಚಿಬಂದ ಮಹಿಳೆಯ ಶವದಿಂದ ಕಿವಿಯೋಲೆ ಕದ್ದ ಕಳ್ಳರ ಸೆರೆ
ಪ್ರವಾಹ
ನಯನಾ ರಾಜೀವ್
|

Updated on:Aug 28, 2026 | 10:35 AM

Share

ಕಠ್ಮಂಡು, ಆಗಸ್ಟ್​ 28: ನೈಸರ್ಗಿಕ ವಿಕೋಪದ ರೋದನದ ನಡುವೆಯೂ ಮಾನವೀಯತೆಯನ್ನೇ ನಾಚಿಸುವಂತಹ ಅಮಾನವೀಯ ಘಟನೆಯೊಂದು ನೇಪಾಳ(Nepal)ದಲ್ಲಿ ಬೆಳಕಿಗೆ ಬಂದಿದೆ. ಭೀಕರ ಪ್ರವಾಹದಲ್ಲಿ ಕೊಚ್ಚಿಬಂದ ಮಹಿಳೆಯ ಶವವನ್ನು ನದಿಯಿಂದ ಕೂದಲನ್ನೆಳೆದು ಹೊರತಂದು, ಆಕೆಯ ಕಿವಿಯಲ್ಲಿದ್ದ ಚಿನ್ನದ ಓಲೆಗಳನ್ನು ಕಳವು ಮಾಡಿದ ಇಬ್ಬರು ಆರೋಪಿಗಳನ್ನು ನೇಪಾಳ ಪೊಲೀಸರು ಬಂಧಿಸಿದ್ದಾರೆ.

ನಾರಾಯಣಿ ನದಿ ದಂಡೆಯಲ್ಲಿ ಮೃತದೇಹದಿಂದ ಆಭರಣ ದೋಚುತ್ತಿದ್ದ 41 ಸೆಕೆಂಡುಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ತೀವ್ರ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆಹಿಡಿದಿದ್ದಾರೆ.

ಕೂದಲನ್ನೆಳೆದು ಶವ ಹೊರತಂದು ಚಿನ್ನ ಲೂಟಿ: ನಾರಾಯಣಿ ನದಿಯಲ್ಲಿ ತೇಲಿಬಂದ ಅಪರಿಚಿತ ಮಹಿಳೆಯ ಮೃತದೇಹವನ್ನು ಮರದ ಹಲಗೆಗಳು ಮತ್ತು ಆಕೆಯ ತಲೆ ಕೂದಲನ್ನು ಹಿಡಿದು ದಡಕ್ಕೆ ಎಳೆಯಲಾಯಿತು. ಶವ ದಡಕ್ಕೆ ಬಂದ ತಕ್ಷಣವೇ ಇಬ್ಬರು ವ್ಯಕ್ತಿಗಳು ಆಕೆಯ ಎರಡೂ ಕಿವಿಗಳಲ್ಲಿದ್ದ ಕಿವಿಯೋಲೆಗಳನ್ನು ಬಲವಂತವಾಗಿ ಬಿಚ್ಚಿ ತಮ್ಮ ಜೇಬಿಗೆ ಇಳಿಸಿಕೊಂಡರು. ಸುತ್ತಲೂ ನಿಂತಿದ್ದ ಜನರು ನೆರವಿಗೆ ಧಾವಿಸದೆ ಮೊಬೈಲ್‌ಗಳಲ್ಲಿ ವಿಡಿಯೋ ಚಿತ್ರೀಕರಿಸುತ್ತಿದ್ದರು.

ವಿಡಿಯೋ ಆಧಾರದ ಮೇಲೆ ಚಿತ್ವಾನ್ ಜಿಲ್ಲಾ ಪೊಲೀಸರು ಭರತ್‌ಪುರ ಮೆಟ್ರೋಪಾಲಿಟನ್ ಸಿಟಿಯ ಪೋಖರಾ ಬಸ್ ಪಾರ್ಕ್ ಬಳಿ 25 ವರ್ಷದ ಮದನ್ ಗುರುಂಗ್ ಮತ್ತು 38 ವರ್ಷದ ಉಮೇಶ್ ಚೌಧರಿ ಎಂಬಿಬ್ಬರನ್ನು ಬಂಧಿಸಿದ್ದಾರೆ.

ಮತ್ತಷ್ಟು ಓದಿ: ನೀರಿನಲ್ಲಿ ಕೊಚ್ಚಿ ಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನರು!

ಸಂಕಷ್ಟದ ಪರಿಸ್ಥಿತಿಯಲ್ಲಿ ಸಂತ್ರಸ್ತರ ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಂಡು ಲೂಟಿ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನೇಪಾಳ ಪೊಲೀಸರು ಎಚ್ಚರಿಸಿದ್ದಾರೆ.

ನೇಪಾಳ-ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿದ ಹಿಮನದಿ ಸ್ಫೋಟ ಮತ್ತು ಮಣ್ಣು ಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 392 ಕ್ಕೆ ಏರಿಕೆಯಾಗಿದ್ದು, ನಾಪತ್ತೆಯಾಗಿರುವ 1,400 ಕ್ಕೂ ಹೆಚ್ಚು ಜನರಿಗಾಗಿ ಕೆಸರಿನ ರಾಶಿಯಲ್ಲಿ ಶೋಧ ಮುಂದುವರೆದಿದೆ. ಚೀನಾದ ಗೈರೋಂಗ್ ಬಂದರು ಪ್ರದೇಶ ಮತ್ತು ಬಸ್ ನಿಲ್ದಾಣದ ಮೇಲೆ ಸುಮಾರು 5 ಅಡಿ ಆಳದ ಕೆಸರು ತುಂಬಿಕೊಂಡಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ.

ಪ್ರವಾಹದಲ್ಲಿ ಸರ್ವಸ್ವವನ್ನೂ ಕಳೆದುಕೊಂಡ ಕುಟುಂಬಗಳು ನದಿ ದಂಡೆಗಳಲ್ಲಿ ತಮ್ಮವರ ಶವಗಳಿಗಾಗಿ ಕಣ್ಣೀರಿಡುತ್ತಿದ್ದರೆ, ಇಂತಹ ದುರಂತಗಳ ನಡುವೆ ನಡೆಯುವ ಹೆಣದ ಮೇಲಿನ ಲೂಟಿ ಸಾರ್ವಜನಿಕರಲ್ಲಿ ನೈತಿಕ ಆಘಾತ ಮೂಡಿಸಿದೆ. ವಿಕೋಪ ಪೀಡಿತ ನಿರ್ಜನ ಪ್ರದೇಶಗಳಲ್ಲಿ ಮತ್ತು ನದಿ ದಂಡೆಗಳಲ್ಲಿ ಕಳ್ಳತನ ತಡೆಗಟ್ಟಲು ನೇಪಾಳ ಸಶಸ್ತ್ರ ಪೊಲೀಸ್ ಪಡೆ (APF) ವಿಶೇಷ ರಾತ್ರಿ ಗಸ್ತು ಆರಂಭಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:26 am, Fri, 28 August 26

Follow Us
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು