AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal Flood: ಕ್ಯಾಮೆರಾದಲ್ಲಿ ಸೆರೆಯಾಯ್ತು ನೇಪಾಳ ಜಲಪ್ರಳಯದ ಭಯಾನಕತೆ: ಕೆಲವೇ ಸೆಕೆಂಡುಗಳಲ್ಲಿ ಕೊಚ್ಚಿಹೋದ ಗ್ರಾಮಗಳು

ನೇಪಾಳ-ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯದಿಂದ ನೂರಾರು ಗ್ರಾಮಗಳು ಕೆಲವೇ ಸೆಕೆಂಡುಗಳಲ್ಲಿ ಕೊಚ್ಚಿಹೋಗಿವೆ. ಹಿಮನದಿ ಕಳಚಿಬಿದ್ದು ಉಂಟಾದ ಈ ದುರಂತದಲ್ಲಿ 392 ಮಂದಿ ಮೃತಪಟ್ಟು, 1400ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಮೂಲಸೌಕರ್ಯಗಳು ಧ್ವಂಸಗೊಂಡು, 290 ಭಾರತೀಯರು ಸೇರಿದಂತೆ ಅನೇಕರು ಸಿಲುಕಿಕೊಂಡಿದ್ದಾರೆ. ಜಾಗತಿಕ ತಾಪಮಾನ ಏರಿಕೆಯಿಂದ ಹಿಮಾಲಯ ಎದುರಿಸುತ್ತಿರುವ ಪರಿಸರ ಬಿಕ್ಕಟ್ಟನ್ನು ಇದು ಎತ್ತಿ ತೋರಿಸುತ್ತದೆ.

Nepal Flood: ಕ್ಯಾಮೆರಾದಲ್ಲಿ ಸೆರೆಯಾಯ್ತು ನೇಪಾಳ ಜಲಪ್ರಳಯದ ಭಯಾನಕತೆ: ಕೆಲವೇ ಸೆಕೆಂಡುಗಳಲ್ಲಿ ಕೊಚ್ಚಿಹೋದ ಗ್ರಾಮಗಳು
ಪ್ರವಾಹ
ನಯನಾ ರಾಜೀವ್
|

Updated on: Aug 28, 2026 | 7:28 AM

Share

ಕಠ್ಮಂಡು, ಆಗಸ್ಟ್​ 28: ನೇಪಾಳ-ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿದ ವಿನಾಶಕಾರಿ ಹಠಾತ್ ಪ್ರವಾಹ(Flood)ದ ಭೀಕರ ವಿಡಿಯೋವೊಂದು ಸಾರ್ವಜನಿಕವಾಗಿ ಲಭ್ಯವಾಗಿದ್ದು, ದೈತ್ಯ ಕೆಸರು ಮತ್ತು ಕಲ್ಲುಬಂಡೆಗಳ ಪ್ರವಾಹವು ಕೇವಲ ಕೆಲವೇ ಸೆಕೆಂಡುಗಳಲ್ಲಿ ನದಿ ತೀರದ ಇಡೀ ಗ್ರಾಮಗಳನ್ನೇ ಕೊಚ್ಚಿಕೊಂಡು ಹೋಗುವ ದೃಶ್ಯಗಳು ಎದೆಝಲ್ಲೆನಿಸುವಂತಿವೆ. ಈ ಮಹಾದುರಂತದಲ್ಲಿ ಮೃತಪಟ್ಟವರ ಸಂಖ್ಯೆ 392 ಕ್ಕೆ ಏರಿಕೆಯಾಗಿದ್ದು, 1,400 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ನೇಪಾಳ ಅಧಿಕಾರಿಗಳು ದೃಢಪಡಿಸಿದ್ದಾರೆ.

ಭೋಟೆಕೋಶಿ ಮತ್ತು ತ್ರಿಶೂಲಿ ನದಿಗಳು ಉಕ್ಕಿ ಹರಿದ ಪರಿಣಾಮ ನೂರಾರು ಮನೆಗಳು, ವಾಹನಗಳು ಹಾಗೂ ಸೇತುವೆಗಳು ದಟ್ಟವಾದ ಕೆಸರಿನಡಿಯಲ್ಲಿ ಸಮಾಧಿಯಾಗಿವೆ.

ಅಸಾಧಾರಣ ಜಲಪ್ರವಾಹ: ಅಂತಾರಾಷ್ಟ್ರೀಯ ಸಮಗ್ರ ಪರ್ವತ ಅಭಿವೃದ್ಧಿ ಕೇಂದ್ರದ (ICIMOD) ಹವಾಮಾನ ತಜ್ಞರ ಪ್ರಕಾರ, ಹಿಮನದಿ ಕಳಚಿಬಿದ್ದ ಕಾರಣ ಕೇವಲ 30 ನಿಮಿಷಗಳ ಅವಧಿಯಲ್ಲಿ ತ್ರಿಶೂಲಿ ನದಿಯ ನೀರಿನ ಮಟ್ಟ ಬರೋಬ್ಬರಿ 9 ಮೀಟರ್ ಏರಿಕೆಯಾಗಿದೆ.

ಮೂಲಸೌಕರ್ಯ ಧ್ವಂಸ: ಪ್ರವಾಹದ ರಭಸಕ್ಕೆ ಸುಮಾರು 40 ಕಿಲೋಮೀಟರ್ ಉದ್ದದ ಪ್ರಮುಖ ರಸ್ತೆಗಳು ಮತ್ತು ಡಜನ್‌ಗಟ್ಟಲೆ ಸೇತುವೆಗಳು ಕೊಚ್ಚಿಹೋಗಿದ್ದು, ರಕ್ಷಣಾ ವಾಹನಗಳು ದುರಂತ ಸ್ಥಳವನ್ನು ತಲುಪುವುದು ಅತ್ಯಂತ ಸವಾಲಾಗಿದೆ.

ಮತ್ತಷ್ಟು ಓದಿ: ನೇಪಾಳ ಪ್ರವಾಹ: ರಕ್ಷಣೆ ಸಂಬಂಧ ಪ್ರವಾಸಿಗರ ಮಾಹಿತಿ ಕೋರಿದ ಮುಖ್ಯಮಂತ್ರಿಗಳ ಕಚೇರಿ

84 ಭಾರತೀಯರ ಸುರಕ್ಷಿತ ರಕ್ಷಣೆ: ಭಾರತೀಯ ವಾಯುಪಡೆ ಹಾಗೂ ಸ್ಥಳೀಯ ರಕ್ಷಣಾ ಪಡೆಗಳು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಇದುವರೆಗೆ 84 ಭಾರತೀಯ ನಾಗರಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

290 ಮಂದಿ ನಾಪತ್ತೆ: ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿರುವಂತೆ, ಕೈಲಾಸ ಮಾನಸ ಸರೋವರ ಯಾತ್ರಿಕರು, ‘ತ್ರಿಶೂಲಿ-1’ ಜಲವಿದ್ಯುತ್ ಯೋಜನೆಯ ಭಾರತೀಯ ಕಾರ್ಮಿಕರು ಹಾಗೂ ಪ್ರವಾಸಿಗರು ಸೇರಿದಂತೆ 290ಭಾರತೀಯರು ಇನ್ನೂ ಸಂಪರ್ಕಕ್ಕೆ ಸಿಕ್ಕಿಲ್ಲ. ಭಾರತೀಯ ರಾಯಭಾರ ಕಚೇರಿಯು ಕಠ್ಮಂಡು ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಿಲುಕಿರುವವರನ್ನು ಹೆಲಿಕಾಪ್ಟರ್ ಮೂಲಕ ಏರ್‌ಲಿಫ್ಟ್ ಮಾಡುವ ಕಾರ್ಯ ಮುಂದುವರೆದಿದೆ.

ವಿಡಿಯೋ

200 ಕೋಟಿ ಜನರ ಭವಿಷ್ಯಕ್ಕೆ ಕಂಟಕ: ಆರ್ಕ್ಟಿಕ್ ಮತ್ತು ಅಂಟಾರ್ಕ್ಟಿಕಾ ನಂತರ ವಿಶ್ವದಲ್ಲೇ ಅತಿ ಹೆಚ್ಚು ಮಂಜುಗಡ್ಡೆ ಹೊಂದಿರುವ ಹಿಮಾಲಯ ಶ್ರೇಣಿಯನ್ನು ಭೂಮಿಯ ಮೂರನೇ ಧ್ರುವ (Third Pole) ಎಂದು ಕರೆಯಲಾಗುತ್ತದೆ. ಗಂಗಾ, ಸಿಂಧು, ಬ್ರಹ್ಮಪುತ್ರ ಸೇರಿದಂತೆ ಪ್ರಮುಖ ನದಿಗಳ ಮೂಲಕ ಕೆಳಹರಿವಿನ ಸುಮಾರು 200 ಕೋಟಿ ಜನರಿಗೆ ಹಿಮಾಲಯ ನೀರು ಒದಗಿಸುತ್ತದೆ.

ಜಾಗತಿಕ ತಾಪಮಾನ ಏರಿಕೆಯಿಂದಾಗಿ ಹಿಮನದಿಗಳು ಅಸ್ಥಿರಗೊಳ್ಳುತ್ತಿದ್ದು, ಆಗಸ್ಟ್ 2025ರಲ್ಲಿ ಸಂಭವಿಸಿದ ಪ್ರವಾಹದ ಬಳಿಕ ಇದೀಗ ಮತ್ತೊಮ್ಮೆ ಸಂಭವಿಸಿರುವ ಈ ದುರಂತವು ಹಿಮಾಲಯದ ಪರಿಸರ ಬಿಕ್ಕಟ್ಟನ್ನು ಜಗತ್ತಿನ ಮುಂದಿಟ್ಟಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!