AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಶೇಷಗಳ ರಾಶಿಯೊಳಗಿಂದ ಕೇಳಿಬಂತು ಆ ಪುಟ್ಟ ದನಿ, ಜೀವ ಪಣಕ್ಕಿಟ್ಟು ಮುಗ್ಧ ಬಾಲಕಿಯ ರಕ್ಷಿಸಿದ ಪಡೆ

ನೇಪಾಳದ ಭೀಕರ ಪ್ರವಾಹದಲ್ಲಿ ಸಾವಿರಾರು ಜೀವಗಳು ನಲುಗಿರುವಾಗ, ಮಣ್ಣಿನ ರಾಶಿಯಡಿಯಲ್ಲಿ 72 ಗಂಟೆಗಳ ಕಾಲ ಸಿಲುಕಿದ್ದ 6 ವರ್ಷದ ಮನೀಷಾ ಮಗರ್ ಅವರನ್ನು ನೇಪಾಳ ಸಶಸ್ತ್ರ ಪೊಲೀಸ್ ಪಡೆ (APF) ಪವಾಡ ಸದೃಶವಾಗಿ ರಕ್ಷಿಸಿದೆ. ಕೈಗಳಿಂದಲೇ ಮಣ್ಣು ಅಗೆದು ಬಾಲಕಿಯನ್ನು ಹೊರತೆಗೆದ ಯೋಧರ ಸಾಹಸ ಮೆಚ್ಚುಗೆ ಗಳಿಸಿದ್ದು, ಈ ಘಟನೆ ನೇಪಾಳದ ದುರಂತದ ನಡುವೆ ಭರವಸೆಯ ಕಿರಣವಾಗಿ ಮೂಡಿದೆ.

ಅವಶೇಷಗಳ ರಾಶಿಯೊಳಗಿಂದ ಕೇಳಿಬಂತು ಆ ಪುಟ್ಟ ದನಿ, ಜೀವ ಪಣಕ್ಕಿಟ್ಟು ಮುಗ್ಧ ಬಾಲಕಿಯ ರಕ್ಷಿಸಿದ ಪಡೆ
ಪ್ರವಾಹ
ನಯನಾ ರಾಜೀವ್
|

Updated on: Aug 31, 2026 | 9:12 AM

Share

ಕಠ್ಮಂಡು, ಆಗಸ್ಟ್ 31: ನೇಪಾಳ ಪ್ರವಾಹದಲ್ಲಿ ಸಾವಿರಾರು ಮನೆಗಳ ಜತೆಗೆ ನೂರಾರು ಜೀವಗಳು ಕೊಚ್ಚಿಹೋಗಿ, ಕಣ್ಣೀರ ಕಡಲಿನಲ್ಲಿ ಮುಳುಗಿರುವ ನೇಪಾಳದಲ್ಲಿ ಕಗ್ಗತ್ತಲೆಯ ನಡುವೆ ಒಂದು ಪುಟ್ಟ ಬೆಳಕಿನ ಕಿರಣ ಮೂಡಿದೆ. ಭೋಟೆ ಕೋಶಿ ನದಿಯ ಪ್ರವಾಹ(Flood)ಕ್ಕೆ ನೆಲಸಮವಾಗಿದ್ದ ರಸುವಾ ಜಿಲ್ಲೆಯ ತಿಮುರೆ ಗ್ರಾಮದ ದಟ್ಟವಾದ ಮಣ್ಣು ಹಾಗೂ ಕಲ್ಲು-ಬಂಡೆಗಳ ರಾಶಿಯಡಿಯಲ್ಲಿ ಬರೋಬ್ಬರಿ 72 ಗಂಟೆಗಳಿಗೂ ಹೆಚ್ಚು ಕಾಲ ಸಿಲುಕಿದ್ದ 6 ವರ್ಷದ ಬಾಲಕಿ ಮನೀಷಾ ಮಗರ್​ನನ್ನು ರಕ್ಷಿಸಲಾಗಿದೆ.

ಶುಕ್ರವಾರ ಸಂಜೆ ತಿಮುರೆ ಗ್ರಾಮದ ಅವಶೇಷಗಳ ರಾಶಿಯ ನಡುವೆ ಶೋಧ ನಡೆಸುತ್ತಿದ್ದ ನೇಪಾಳದ ಸಶಸ್ತ್ರ ಪೊಲೀಸ್ ಪಡೆ (APF) ಸಿಬ್ಬಂದಿಗೆ ಮಣ್ಣಿನ ಆಳದಿಂದ ಮಗುವಿನ ಮಸುಕಾದ ಅಳು ಮತ್ತು ಕಿರುಚಾಟದ ಧ್ವನಿ ಕೇಳಿಸಿತು.

ಕೈಗಳಿಂದಲೇ ಅಗೆದ ಯೋಧರು: ಸಣ್ಣ ಸುಳಿವೂ ಸಾಕೆಂದು ಬಗೆದ ಯೋಧರು, ಯಾವುದೇ ಯಂತ್ರಗಳ ಸಹಾಯವಿಲ್ಲದೆ ಕೈಗಳು ಮತ್ತು ಸಲಿಕೆಗಳಿಂದ ಎಚ್ಚರಿಕೆಯಿಂದ ಮಣ್ಣು ತೆರವುಗೊಳಿಸಿ, ಆ ಪುಟ್ಟ ಕಂದಮ್ಮನನ್ನು ಜೀವಂತವಾಗಿ ಹೊರತೆಗೆಯುವಲ್ಲಿ ಯಶಸ್ವಿಯಾದರು.

ಗಡಿ ಹೊರಠಾಣೆಯಲ್ಲಿ ಪ್ರಾಥಮಿಕ ಚಿಕಿತ್ಸೆ: ಮಣ್ಣಿನಿಂದ ಹೊರತೆಗೆದಾಗ ಮಗುವಿನ ಉಸಿರಾಟ ಕ್ಷೀಣಿಸುತ್ತಿತ್ತು. ತಕ್ಷಣ ಸಮೀಪದ ಎಪಿಎಫ್ ಔಟ್‌ಪೋಸ್ಟ್‌ನಲ್ಲಿ ಪ್ರಥಮ ಚಿಕಿತ್ಸೆ ನೀಡಿ ಸ್ಥಿತಿ ಹದಗೆಡದಂತೆ ನೋಡಿಕೊಳ್ಳಲಾಯಿತು.

ಮತ್ತಷ್ಟು ಓದಿ: ಹಿಮಬಂಡೆ ಹೊಡೆತಕ್ಕೆ ನೇಪಾಳದ ಶೇ. 10 ಆರ್ಥಿಕತೆ ಧ್ವಂಸ; ಈ ಪುಟ್ಟ ದೇಶದ ಪುನರ್ನಿರ್ಮಾಣಕ್ಕೆ ಬೇಕು 5 ಬಿಲಿಯನ್ ಡಾಲರ್

ಕಠ್ಮಂಡು ಆಸ್ಪತ್ರೆಗೆ ರವಾನೆ: ಪ್ರತಿಕೂಲ ಹವಾಮಾನ, ಮಳೆ ಮತ್ತು ಮಂಜಿನ ಕಾರಣ ಹೆಲಿಕಾಪ್ಟರ್ ಹಾರಾಟ ವಿಳಂಬವಾದರೂ, ಶನಿವಾರ ವಾತಾವರಣ ತಿಳಿಯಾಗುತ್ತಿದ್ದಂತೆ ಸೇನಾ ಹೆಲಿಕಾಪ್ಟರ್ ಮೂಲಕ ಬಾಲಕಿಯನ್ನು ಕಠ್ಮಂಡುವಿನ ಸುಸಜ್ಜಿತ ಆಸ್ಪತ್ರೆಗೆ ಏರ್‌ಲಿಫ್ಟ್ ಮಾಡಲಾಯಿತು. ಸದ್ಯ ಆಕೆ ತೀವ್ರ ನಿಗಾ ಘಟಕದಲ್ಲಿ (ICU) ಚೇತರಿಸಿಕೊಳ್ಳುತ್ತಿದ್ದಾಳೆ.

ವೈರಲ್ ಆದ ವೀಡಿಯೊ: ಮಗುವನ್ನು ಮಣ್ಣಿನಡಿಯಿಂದ ಹೊರತೆಗೆಯುವ ಭಾವನಾತ್ಮಕ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಕ್ಷಣಾ ಸಿಬ್ಬಂದಿಯ ಕರ್ತವ್ಯನಿಷ್ಠೆಗೆ ಜಾಗತಿಕ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಕುಟುಂಬಸ್ಥರ ಪತ್ತೆಗೆ ಮನವಿ: ಪ್ರವಾಹದಲ್ಲಿ ಬಾಲಕಿಯ ಹೆತ್ತವರು ಕಣ್ಮರೆಯಾಗಿದ್ದು, “ಈ ಮುಗ್ಧ ಮಗು ಮನೀಷಾ ಮಗರ್ ಅವರ ಹೆತ್ತವರು ಅಥವಾ ಸಂಬಂಧಿಕರ ಬಗ್ಗೆ ಮಾಹಿತಿ ಇದ್ದರೆ ತಕ್ಷಣ ಅಧಿಕಾರಿಗಳನ್ನು ಸಂಪರ್ಕಿಸಿ” ಎಂದು ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಈವರೆಗೆ ಪ್ರವಾಹದಲ್ಲಿ 675ಕ್ಕೂ ಹೆಚ್ಚು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, 2,400ಕ್ಕೂ ಅಧಿಕ ಜನರು ಇನ್ನೂ ನಾಪತ್ತೆಯಾಗಿದ್ದಾರೆ.

ಶತಕೋಟಿ ಡಾಲರ್ ಆರ್ಥಿಕ ನಷ್ಟ: ನೇಪಾಳದ ವಿದೇಶಾಂಗ ಸಚಿವ ಶಿಶಿರ್ ಖನಾಲ್ ಮಾತನಾಡಿ, ಧ್ವಂಸಗೊಂಡ ಹಳ್ಳಿಗಳು, ರಸ್ತೆಗಳು ಮತ್ತು ಜಲವಿದ್ಯುತ್ ಯೋಜನೆಗಳ ಮರುನಿರ್ಮಾಣಕ್ಕೆ ನೂರಾರು ಕೋಟಿ ಡಾಲರ್‌ಗಳ ಅಗತ್ಯವಿದ್ದು, ಅಂತಾರಾಷ್ಟ್ರೀಯ ಸಮುದಾಯದ ನೆರವು ಕೋರಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!