AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

76 ಪ್ರಯಾಣಿಕರಿದ್ದ ಬುದ್ಧ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ, ತುರ್ತು ಭೂಸ್ಪರ್ಶ

ಬುದ್ಧ ವಿಮಾನದ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ವಿಮಾನದ ಎಡ ಇಂಜಿನ್​ನಲ್ಲಿ ಬೆಂಕಿಯ ಜ್ವಾಲೆ ಕಾಣಿಸಿಕೊಂಡಿತ್ತು, ನಂತರ ತಕ್ಷಣ ವಿಮಾನವನ್ನು ಕೆಳಗೊಳಿಸಲಾಯಿತು.ಕಠ್ಮಂಡುವಿನಿಂದ ಭದ್ರಾಪುರಕ್ಕೆ ತೆರಳುತ್ತಿದ್ದಾಗ ವಿಮಾನವು ಅದರ ಎಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆ ಎದುರಿಸಿತು ಎಂದು ಏರ್‌ಲೈನ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

76 ಪ್ರಯಾಣಿಕರಿದ್ದ ಬುದ್ಧ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ, ತುರ್ತು ಭೂಸ್ಪರ್ಶ
ಬುದ್ಧ ಏರ್​Image Credit source: The Assam Tribune
ನಯನಾ ರಾಜೀವ್
|

Updated on:Jan 06, 2025 | 2:37 PM

Share

ನೇಪಾಳದ ಬುದ್ಧ ವಿಮಾನದ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ವಿಮಾನದ ಎಡ ಇಂಜಿನ್​ನಲ್ಲಿ ಬೆಂಕಿಯ ಜ್ವಾಲೆ ಕಾಣಿಸಿಕೊಂಡಿತ್ತು, ನಂತರ ತಕ್ಷಣ ವಿಮಾನವನ್ನು ಕೆಳಗಿಳಿಸಲಾಯಿತು.

ವಿಮಾನದಲ್ಲಿ ಸಿಬ್ಬಂದಿ ಸೇರಿದಂತೆ 76 ಮಂದಿ ಇದ್ದರು ಎಂದು ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಿಳಿಸಿದೆ. ವಿಮಾನ ಸಂಖ್ಯೆ 953 ಕಠ್ಮಂಡುವಿನಿಂದ ಭದ್ರಾಪುರಕ್ಕೆ ತೆರಳುತ್ತಿದ್ದಾಗ ವಿಮಾನವು ಅದರ ಎಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆ ಎದುರಿಸಿತು ಎಂದು ಏರ್‌ಲೈನ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಪರಿಣಾಮವಾಗಿ, ವಿಮಾನವನ್ನು ಕಠ್ಮಂಡುವಿಗೆ ತಿರುಗಿಸಲಾಯಿತು ಮತ್ತು ಸುರಕ್ಷಿತವಾಗಿ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ 11.15 ಕ್ಕೆ ಇಳಿಸಲಾಯಿತು ಎಂದು ಅದು ಹೇಳಿದೆ.

ಮತ್ತಷ್ಟು ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಏರ್​ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ನಮ್ಮ ತಾಂತ್ರಿಕ ತಂಡವು ಪ್ರಸ್ತುತ ವಿಮಾನವನ್ನು ಪರಿಶೀಲಿಸುತ್ತಿದೆ. ಮತ್ತೊಂದು ವಿಮಾನದಲ್ಲಿ ಪ್ರಯಾಣಿಕರನ್ನು ಭದ್ರಾಪುರಕ್ಕೆ ಕಳುಹಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಬುದ್ಧ ಏರ್​ನ ಅಧಿಕಾರಿಗಳು ತಿಳಿಸಿದ್ದಾರೆ.

82 ಮಂದಿ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ದುಬೈನಿಂದ ಬಂದ 182 ಮಂದಿ ಪ್ರಯಾಣಿಕರಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವನ್ನು ತಾಂತ್ರಿಕ ದೋಷದ ಹಿನ್ನೆಲೆ ಕೇರಳದ ಕರಿಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.

ಏರ್ ಇಂಡಿಯಾ ಎಕ್ಸ್ ಪ್ರೆಸ್- IX344 ವಿಮಾನದಲ್ಲಿ ಆರು ಸಿಬ್ಬಂದಿ ಸೇರಿದಂತೆ 182 ಮಂದಿ ಪ್ರಯಾಣಿಸುತ್ತಿದ್ದರು. ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ಖಚಿತಪಡಿಸಿವೆ.

ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣವಾಗಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿತ್ತು, ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಆತಂಕಗಳ ಹೊರತಾಗಿಯೂ, ವಿಮಾನವು ಯಾವುದೇ ಸಮಸ್ಯೆಗಳಿಲ್ಲದೆ ಲ್ಯಾಂಡಿಂಗ್ ಆಗಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:32 pm, Mon, 6 January 25