AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 20 ರಂದು ಶ್ರೀಲಂಕಾ ಹೊಸ ಅಧ್ಯಕ್ಷರ ಆಯ್ಕೆ: ಲಂಕಾ ಸಂಸತ್​ ಸ್ಪೀಕರ್​ ಹೇಳಿಕೆ

ಜುಲೈ 13 ರಂದು ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ರಾಜೀನಾಮೆ ನೀಡಿದರೆ,  ಜುಲೈ 20 ರಂದು ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಪಕ್ಷದ ನಾಯಕರು ನಿರ್ಧರಿಸಿದ್ದಾರೆ.

ಜುಲೈ 20 ರಂದು ಶ್ರೀಲಂಕಾ ಹೊಸ ಅಧ್ಯಕ್ಷರ ಆಯ್ಕೆ: ಲಂಕಾ ಸಂಸತ್​ ಸ್ಪೀಕರ್​ ಹೇಳಿಕೆ
ಗೊಟಬಯ ರಾಜಪಕ್ಸೆ
TV9 Web
| Updated By: ವಿವೇಕ ಬಿರಾದಾರ|

Updated on:Jul 11, 2022 | 6:08 PM

Share

ಕೊಲಂಬೊ: ಜುಲೈ 13 ರಂದು ಶ್ರೀಲಂಕಾ (Sri Lanka) ಅಧ್ಯಕ್ಷ ಗೋಟಬಯ ರಾಜಪಕ್ಸೆ (Gotabaya Rajapaksa) ರಾಜೀನಾಮೆ ನೀಡಿದರೆ,  ಜುಲೈ 20 ರಂದು ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಪಕ್ಷದ ನಾಯಕರು ನಿರ್ಧರಿಸಿದ್ದಾರೆ ಎಂದು ಶ್ರೀಲಂಕಾ ಸಚಿವ ಪ್ರಸನ್ನ ರಣತುಂಗ ಇಂದು (ಜುಲೈ 11) ಹೇಳಿದ್ದಾರೆ ಎಂದು ಶ್ರೀಲಂಕಾ ಸಂಸತ್​ ಸ್ಪೀಕರ್​ ಹೇಳಿಕೆ ಉಲ್ಲೇಖಿಸಿ ಖಾಸಗಿ ಸುದ್ದಿ ಸಂಸ್ಥೆ ಹಿಂದುಸ್ಥಾನ ಟೈಮ್ಸ್​​ ವರದಿ ಮಾಡಿದೆ.

ಈ ಹಿಂದೆ ಘೋಷಿಸಿದಂತೆ ಜುಲೈ 13 (ಬುಧವಾರ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶ್ರೀಲಂಕಾ  ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಅವರಿಗೆ ತಿಳಿಸಿರುವುದಾಗಿ ಪ್ರಧಾನಿ ಕಚೇರಿ ಸೋಮವಾರ ಹೇಳಿದೆ.

ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ನಡುವೆಯೇ ಪ್ರತಿಭಟನಾಕಾರರು ಶನಿವಾರ ದೇಶದ ನಾಯಕರ ಮನೆಗೆ ನುಗ್ಗಿ ಅಲ್ಲಿ ರಾಜಾರೋಷವಾಗಿ ಸಂಭ್ರಮಿಸಿದ್ದಾರೆ. ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸಲು ಸಾಧ್ಯವಾಗದೇ ಇರುವ ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ ದೇಶದ ಜನರು ಶನಿವಾರ ರಾಜಪಕ್ಸೆ ಅವರ ಅಧಿಕೃತ ನಿವಾಸಕ್ಕೆ ನುಗ್ಗಿದ್ದರು.ಇದಾದ ನಂತರ ತಾನು ಬುಧವಾರ ರಾಜೀನಾಮೆ ನೀಡುವುದಾಗಿ ರಾಜಪಕ್ಸೆ ಘೋಷಿಸಿದ್ದಾರೆ. ತಾನು ಕೂಡಾ ರಾಜೀನಾಮೆಗೆ ಸಿದ್ಧ ಎಂದು ಪ್ರಧಾನಿ ರನಿಲ್ ವಿಕ್ರಮಸಿಂಘೆ ಹೇಳಿದ್ದಾರೆ. ಪ್ರತಿಭಟನಾಕಾರರು ರನಿಲ್ ಅವರ ಖಾಸಗಿ ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದಾರೆ ಎಂದು ಪ್ರಧಾನಿಯವರ ಕಚೇರಿ ತಿಳಿಸಿದೆ.

ಈ ಹಿಂದೆ ಘೋಷಿಸಿದಂತೆ ಅಧ್ಯಕ್ಷ ಗೊಟಬಯ ರಾಜಪಕ್ಸೆ ರಾಜೀನಾಮೆ ನೀಡುವುದಾಗಿ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರಿಗೆ ಅಧಿಕೃತವಾಗಿ ತಿಳಿಸಿದ್ದಾರೆ ಎಂದು ಪ್ರಧಾನಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಶನಿವಾರ ಅಜ್ಞಾತ ಸ್ಥಳದಿಂದ ಮಾತನಾಡಿದ ರಾಜಪಕ್ಸೆ ಸ್ಪೀಕರ್ ಮಹಿಂದಾ ಯಾಪ ಅಬೇವರ್ದೆನಾ ಅವರಿಗೆ ರಾಜೀನಾಮೆ ನೀಡುವ ವಿಚಾರ ತಿಳಿಸಿದ್ದಾರೆ.

ಅಧ್ಯಕ್ಷರು ಮತ್ತು ಪ್ರಧಾನಿ ರಾಜೀನಾಮೆ ನೀಡಲು ಸಮ್ಮತಿಸಿರುವುದರಿಂದ ವಿಪಕ್ಷಗಳು ಭಾನುವಾರ ಸಭೆ ಸೇರಿ ಸರ್ವಪಕ್ಷಗಳ ಮಧ್ಯಂತರ ಸರ್ಕಾರ ರಚಿಸುವ ಬಗ್ಗೆ ಚರ್ಚಿಸಿವೆ. ಈ ಬಗ್ಗೆ ಸೋಮವಾರವೂ ಚರ್ಚೆ ಮುಂದವರಿಯಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಾಜಪಕ್ಸೆ ರಾಜೀನಾಮೆ ನಂತರ ನೂತನ ಅಧ್ಯಕ್ಷರ ಆಯ್ಕೆ ಮತ್ತು ನೂತನ ಸರ್ಕಾರ ರಚನೆ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಬಲ್ಲಮೂಲಗಳು ಹೇಳಿವೆ

Published On - 5:50 pm, Mon, 11 July 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ