New Zealand Earthquake: ನ್ಯೂಜಿಲೆಂಡ್​ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

|

Updated on: Mar 16, 2023 | 8:12 AM

ನ್ಯೂಜಿಲೆಂಡ್​ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ.

New Zealand Earthquake: ನ್ಯೂಜಿಲೆಂಡ್​ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ
ಭೂಕಂಪ (ಸಾಂದರ್ಭಿಕ ಚಿತ್ರ)
Image Credit source: Mint
Follow us on

ನ್ಯೂಜಿಲೆಂಡ್​ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ. ನ್ಯೂಜಿಲೆಂಡ್‌ನ ಉತ್ತರ ಭಾಗದಲ್ಲಿರುವ ಕೆರ್ಮಾಡೆಕ್ ದ್ವೀಪಗಳಲ್ಲಿ ಗುರುವಾರ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 7.1 ಎಂದು ಅಳೆಯಲಾಗಿದೆ. ಭೂಕಂಪವು 10 ಕಿಮೀ ಆಳವನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ.

ನ್ಯೂಜಿಲೆಂಡ್ ಪ್ರಪಂಚದ ಎರಡು ಪ್ರಮುಖ ಟೆಕ್ಟೋನಿಕ್ ಪ್ಲೇಟ್‌ಗಳ – ಪೆಸಿಫಿಕ್ ಪ್ಲೇಟ್ ಮತ್ತು ಆಸ್ಟ್ರೇಲಿಯನ್ ಪ್ಲೇಟ್‌ಗಳ ಗಡಿಯಲ್ಲಿ ನೆಲೆಗೊಂಡಿರುವುದರಿಂದ ಭೂಕಂಪಗಳಿಗೆ ಗುರಿಯಾಗುತ್ತದೆ. ಇದು ರಿಂಗ್ ಆಫ್ ಫೈರ್ ಎಂದು ಕರೆಯಲ್ಪಡುವ ತೀವ್ರವಾದ ಭೂಕಂಪನ ಚಟುವಟಿಕೆಯ ವಲಯದ ಅಂಚಿನಲ್ಲಿದೆ. ನ್ಯೂಜಿಲೆಂಡ್‌ನಲ್ಲಿ ಪ್ರತಿ ವರ್ಷ ಸಾವಿರಾರು ಭೂಕಂಪಗಳು ಸಂಭವಿಸುತ್ತವೆ.

 

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:08 am, Thu, 16 March 23