Chris Hipkins: ನ್ಯೂಜಿಲೆಂಡ್​ನ ನೂತನ ಪ್ರಧಾನಿಯಾಗಿ ಕ್ರಿಸ್​ ಹಿಪ್​​ಕಿನ್ಸ್ ಪ್ರಮಾಣವಚನ

ನ್ಯೂಜಿಲೆಂಡ್​ನ ನೂತನ ಪ್ರಧಾನಿಯಾಗಿ ಕ್ರಿಸ್​ ಹಿಪ್​​ಕಿನ್ಸ್ (Chris Hipkins)ಪ್ರಮಾಣವಚನ ಸ್ವೀಕರಿಸಿದ್ದಾರೆ. 44 ವರ್ಷದ ಕ್ರಿಸ್​ ಹಿಪ್​ಕಿನ್ಸ್ ಆರ್ಥಿಕತೆಯ ಮೇಲೆ ಕೇಂದ್ರೀಕರಿಸುವುದಾಗಿ ಭರವಸೆ ನೀಡಿದ್ದಾರೆ.

Chris Hipkins: ನ್ಯೂಜಿಲೆಂಡ್​ನ ನೂತನ ಪ್ರಧಾನಿಯಾಗಿ ಕ್ರಿಸ್​ ಹಿಪ್​​ಕಿನ್ಸ್ ಪ್ರಮಾಣವಚನ
ಕ್ರಿಸ್ ಹಿಪ್​ಕಿನ್ಸ್
Follow us
ನಯನಾ ರಾಜೀವ್
|

Updated on: Jan 25, 2023 | 12:09 PM

ನ್ಯೂಜಿಲೆಂಡ್​ನ ನೂತನ ಪ್ರಧಾನಿಯಾಗಿ ಕ್ರಿಸ್​ ಹಿಪ್​​ಕಿನ್ಸ್ (Chris Hipkins)ಪ್ರಮಾಣವಚನ ಸ್ವೀಕರಿಸಿದ್ದಾರೆ. 44 ವರ್ಷದ ಕ್ರಿಸ್​ ಹಿಪ್​ಕಿನ್ಸ್ ಆರ್ಥಿಕತೆಯ ಮೇಲೆ ಕೇಂದ್ರೀಕರಿಸುವುದಾಗಿ ಭರವಸೆ ನೀಡಿದ್ದಾರೆ. ಪ್ರಧಾನ ಮಂತ್ರಿಯಾದ ನಂತರ, ಹಿಪ್​ಕಿನ್ಸ್ 9 ತಿಂಗಳಿಗಿಂತ ಕಡಿಮೆ ಅವಧಿಯ ಅಧಿಕಾರವನ್ನು ಹೊಂದಿರುತ್ತಾರೆ. ಅಕ್ಟೋಬರ್‌ನಲ್ಲಿ ನ್ಯೂಜಿಲೆಂಡ್‌ನಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ.

ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ, ಲೇಬರ್ ಪಕ್ಷದ ಸ್ಥಾನವು ಪ್ರಮುಖ ಪ್ರತಿಸ್ಪರ್ಧಿ ರಾಷ್ಟ್ರೀಯ ಪಕ್ಷಕ್ಕಿಂತ ಉತ್ತಮವಾಗಿದೆ. ನ್ಯೂಜಿಲೆಂಡ್ ಗವರ್ನರ್-ಜನರಲ್ ಸಿಂಡಿ ಕಿರೊ ಅವರು ಅರ್ಡೆರ್ನ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ ನಂತರ ಹಿಪ್​ಕಿನ್ಸ್ ಪ್ರಮಾಣವಚನ ಸ್ವೀಕರಿಸಿದರು.

ಇದು ನನ್ನ ಜೀವನದ ಅತ್ಯಂತ ದೊಡ್ಡ ಸವಾಲು ಮತ್ತು ದೊಡ್ಡ ಜವಾಬ್ದಾರಿಯಾಗಿದೆ ಎಂದು ಹಿಪ್​ಕಿನ್ಸ್ ಪ್ರಮಾಣವಚನ ಸಮಾರಂಭದಲ್ಲಿ ಹೇಳಿದರು. ಭವಿಷ್ಯದ ಸವಾಲುಗಳ ಬಗ್ಗೆ ನನಗೆ ಕುತೂಹಲವಿದೆ ಎಂದು ಅವರು ಹೇಳಿದರು. ಕಾರ್ಮೆಲ್ ಸೆಪುಲೋನಿ ಉಪ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ದೇಶದಲ್ಲೇ ಪ್ರಥಮ ಬಾರಿಗೆ ಪೆಸಿಫಿಕ್ ದ್ವೀಪಕ್ಕೆ ಸೇರಿದ ವ್ಯಕ್ತಿಯೊಬ್ಬರಿಗೆ ಈ ಹುದ್ದೆಯ ಜವಾಬ್ದಾರಿಯನ್ನು ವಹಿಸಲಾಗಿದೆ.

ಸೆಪುಲೋನಿ ಹಿಪ್​ಕಿನ್ಸ್ ಅವರನ್ನು ಅಭಿನಂದಿಸಿದರು ಮತ್ತು ಅವರ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಅವರಿಗೆ ಧನ್ಯವಾದ ಹೇಳಿದರು. ಅರ್ಡೆರ್ನ್ ನೇತೃತ್ವದಲ್ಲಿ ಶಿಕ್ಷಣ ಮತ್ತು ಪೊಲೀಸ್ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಈ ಬಿಕ್ಕಟ್ಟಿನ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮೂಲಕ ಕೋವಿಡ್ -19 ಜಾಗತಿಕ ಸಾಂಕ್ರಾಮಿಕ ಸಮಯದಲ್ಲಿ ಹಿಪ್​ಕಿನ್ಸ್ ಸಾರ್ವಜನಿಕವಾಗಿ ಕಾಣಿಸಿಕೊಂಡರು, ಜನರ ಗಮನ ಸೆಳೆದರು.

ಸುಮಾರು ಐದೂವರೆ ವರ್ಷಗಳ ಕಾಲ ಉನ್ನತ ಹುದ್ದೆಯನ್ನು ಅಲಂಕರಿಸಿದ ಅರ್ಡೆರ್ನ್ ಕಳೆದ ಗುರುವಾರ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್