AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ: ಮದುವೆಯಾಗಿ ಕೆಲವೇ ಗಂಟೆಗಳಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತ ಮೂಲದ ಪೈಲಟ್ ಸಾವು, ವಧು ಅಪಾಯದಿಂದ ಪಾರು

ಅಮೆರಿಕದ ಜಾರ್ಜಿಯಾದಲ್ಲಿ ಮದುವೆಯ ಕೆಲವೇ ಗಂಟೆಗಳಲ್ಲಿ ನವದಂಪತಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ದುರಂತ ಸಂಭವಿಸಿದೆ. ಭಾರತೀಯ ಮೂಲದ ವರ ಡೇವ್ ಫಿಜಿ ಸಾವನ್ನಪ್ಪಿದ್ದಾರೆ, ಆದರೆ ವಧು ಜೆಸ್ನಿ ತೀವ್ರ ಗಾಯಗಳೊಂದಿಗೆ ಪವಾಡ ಸದೃಶವಾಗಿ ಬದುಕುಳಿದಿದ್ದಾರೆ. ಮಳೆ ಮತ್ತು ಮಂಜಿನ ಕಾರಣದಿಂದ ಹೆಲಿಕಾಪ್ಟರ್ ಅರಣ್ಯ ಪ್ರದೇಶದಲ್ಲಿ ಪತನಗೊಂಡಿದ್ದು, ರಕ್ಷಣಾ ಸಿಬ್ಬಂದಿ ಜೆಸ್ನಿಯನ್ನು ರಕ್ಷಿಸಿದ್ದಾರೆ.

ಅಮೆರಿಕ: ಮದುವೆಯಾಗಿ ಕೆಲವೇ ಗಂಟೆಗಳಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತ ಮೂಲದ ಪೈಲಟ್ ಸಾವು, ವಧು ಅಪಾಯದಿಂದ ಪಾರು
ಮದುವೆImage Credit source: India Today
ನಯನಾ ರಾಜೀವ್
|

Updated on: Jun 01, 2026 | 10:11 AM

Share

ಅಟ್ಲಾಂಟಾ, ಜೂನ್ 01: ಆಗಷ್ಟೇ ಇಬ್ಬರೂ ಸಪ್ತಪದಿ ತುಳಿದಿದ್ದರು, ಇನ್ನುಮುಂದೆ ಜೀವನದಲ್ಲಿ ಕಷ್ಟ, ಸುಖ ಏನೇ ಇರಲಿ ಇಬ್ಬರು ಒಟ್ಟಿಗೆ ಸಾಗೋಣ ಎನ್ನವು ಪ್ರಮಾಣ ಮಾಡಿದ್ದರು. ಸಾವಿರಾರು ಕನಸುಗಳನ್ನು ಹೊತ್ತಿದ್ದರು. ಆದರೆ ವಿಧಿಯ ಆಟವೇ ಬೇರೆ ಇತ್ತು. ಮದುವೆಯಾಗಿ ಕೆಲವೇ ಗಂಟೆಗಳಲ್ಲಿ ವರ ಹೆಲಿಕಾಪ್ಟರ್ ಅಪಘಾತ(Accident)ದಲ್ಲಿ ಪ್ರಾಣ ಕಳೆದುಕೊಂಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.

ಅಮೆರಿಕದ ಜಾರ್ಜಿಯಾದಲ್ಲಿ ನಡೆದ ಭೀಕರ ಹೆಲಿಕಾಪ್ಟರ್ ಅಪಘಾತವೊಂದರಲ್ಲಿ ತೀವ್ರ ಗಾಯಗಳ ನಡುವೆಯೂ ಭಾರತ ಮೂಲದ ನವವಧು ಜೆಸ್ನಿ ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ದುರಂತವೆಂದರೆ ಮದುವೆಯಾದ ಕೆಲವೇ ಗಂಟೆಗಳಲ್ಲಿ ನಡೆದ ಈ ಘಟನೆಯಲ್ಲಿ ಆಕೆಯ ಪತಿ, ಡೆಲ್ಟಾ ಏರ್‌ಲೈನ್ಸ್‌ನ ಪೈಲಟ್ ಆಗಿದ್ದ ಭಾರತೀಯ ಮೂಲದ ಡೇವ್ ಫಿಜಿ (25) ಮತ್ತು ಹೆಲಿಕಾಪ್ಟರ್‌ನ ಪೈಲಟ್ ಸಾವನ್ನಪ್ಪಿದ್ದಾರೆ.

ಕೇರಳ ಮೂಲದ ಈ ದಂಪತಿ ವಿವಾಹವು ಶುಕ್ರವಾರ ಡಾಸನ್‌ವಿಲ್ಲೆಯ ‘ದಿ ರೆವೆರೆ’ ಕಲ್ಯಾಣ ಮಂಟಪದಲ್ಲಿ ನೂರಾರು ಅತಿಥಿಗಳ ಸಮ್ಮುಖದಲ್ಲಿ ಅತ್ಯಂತ ವೈಭವದಿಂದ ನೆರವೇರಿತ್ತು. ವಿವಾಹದ ಬಳಿಕ ದಂಪತಿ ಹೋಟೆಲ್‌ಗೆ ತೆರಳಲು ಹೆಲಿಕಾಪ್ಟರ್ ಏರಿದ್ದರು. ಆದರೆ, ಮಳೆ ಮತ್ತು ದಟ್ಟವಾದ ಮಂಜಿನ ಕಾರಣದಿಂದಾಗಿ ಗೋಚರತೆ ಕಡಿಮೆಯಾಗಿ, ಹೆಲಿಕಾಪ್ಟರ್ ಡಾಸನ್‌ವಿಲ್ಲೆಯ ದಟ್ಟ ಅರಣ್ಯ ಹಾಗೂ ಪರ್ವತ ಪ್ರದೇಶದಲ್ಲಿ ಪತನಗೊಂಡಿದೆ.

ಮತ್ತಷ್ಟು ಓದಿ: ಹಸೆಮಣೆ ಏರಬೇಕಿದ್ದ ವಧುವಿನ ದಾರುಣ ಅಂತ್ಯ, ಮದುವೆ ದಿನ ಬ್ಯೂಟಿ ಪಾರ್ಲರ್‌ಗೆ ಹೋಗುತ್ತಿದ್ದಾಗ ಅಪಘಾತ, ಯುವತಿ ಸಾವು

ರಕ್ಷಣಾ ಪಡೆಯ ಸಾಹಸ ಮತ್ತು ಜೆಸ್ನಿ ಚೇತರಿಕೆ ಅಪಘಾತದ ತೀವ್ರತೆಗೆ ಹೆಲಿಕಾಪ್ಟರ್ ಸಂಪೂರ್ಣ ಜಖಂಗೊಂಡಿದ್ದು, ದಟ್ಟವಾದ ಕಾಡಿನ ಕಾರಣದಿಂದಾಗಿ ರಕ್ಷಣಾ ಕಾರ್ಯಾಚರಣೆ ಅತ್ಯಂತ ಸವಾಲಾಗಿತ್ತು. ಸುಮಾರು ಐದು ಗಂಟೆಗಳ ಕಾಲ ಅವಶೇಷಗಳು ಮತ್ತು ಬಿದ್ದ ಮರಗಳ ಅಡಿಯಲ್ಲಿ ಸಿಲುಕಿಕೊಂಡಿದ್ದ ನವವಧು ಜೆಸ್ನಿಯನ್ನು ರಕ್ಷಣಾ ಸಿಬ್ಬಂದಿ ಆಫ್-ರೋಡ್ ವಾಹನಗಳ ಸಹಾಯದಿಂದ ಅತ್ಯಂತ ಶ್ರಮಪಟ್ಟು ಹೊರತೆಗೆದಿದ್ದಾರೆ.

ವೃತ್ತಿಯಲ್ಲಿ ನರ್ಸ್ ಆಗಿರುವ ಜೆಸ್ನಿಗೆ ದೇಹದಾದ್ಯಂತ ತೀವ್ರ ಗಾಯಗಳಾಗಿದ್ದರೂ, ಯಾವುದೇ ಮೂಳೆ ಮುರಿತ ಸಂಭವಿಸದೆ ಬದುಕುಳಿದಿರುವುದು ವೈದ್ಯಕೀಯ ಪವಾಡವೇ ಸರಿ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತನಿಖೆ ಆರಂಭ ನಾಲ್ಕು ದಶಕಗಳಿಂದ ಅತ್ಯುತ್ತಮ ಸುರಕ್ಷತಾ ದಾಖಲೆ ಹೊಂದಿದ್ದ ‘ಪ್ರೆಸ್ಟೀಜ್ ಹೆಲಿಕಾಪ್ಟರ್ಸ್’ ಸಂಸ್ಥೆಗೆ ಸೇರಿದ ರಾಬಿನ್ಸನ್ R66 ಹೆಲಿಕಾಪ್ಟರ್ ಇದಾಗಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿಯಲು ಅಮೆರಿಕದ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿಯು (NTSB) ತನಿಖೆ ಆರಂಭಿಸಿದೆ. ಇನ್ನು 30 ದಿನಗಳಲ್ಲಿ ಇದರ ಪ್ರಾಥಮಿಕ ವರದಿ ಹೊರಬರಲಿದೆ. ಭೀಕರ ದುರಂತದಲ್ಲೂ ಮಗಳು ಬದುಕುಳಿದಿರುವುದಕ್ಕೆ ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More