ನೈಜೀರಿಯಾ: ಶಾಲಾ ಕಟ್ಟಡ ಕುಸಿತ; 22 ವಿದ್ಯಾರ್ಥಿಗಳು ಸಾವು, ಮುಂದುವರಿದ ಶೋಧ ಕಾರ್ಯ

ಏಕಾಏಕಿ ಶಾಲಾ ಕಟ್ಟಡ ಬಿದ್ದ ಪರಿಣಾಮ 22 ವಿದ್ಯಾರ್ಥಿಗಳು ಸಾವನ್ನಪ್ಪಿರು ಘಟನೆ ನೈಜೀರಿಯಾದಲ್ಲಿ ಅಬುಜಾದಲ್ಲಿ ನಡೆದಿದೆ. ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 132 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.

ನೈಜೀರಿಯಾ: ಶಾಲಾ ಕಟ್ಟಡ ಕುಸಿತ; 22 ವಿದ್ಯಾರ್ಥಿಗಳು ಸಾವು, ಮುಂದುವರಿದ ಶೋಧ ಕಾರ್ಯ
ಶಾಲಾ ಕಟ್ಟಡ ಕುಸಿತImage Credit source: AFP
Follow us
ಅಕ್ಷತಾ ವರ್ಕಾಡಿ
|

Updated on:Jul 13, 2024 | 10:16 AM

ಅಬುಜಾ (ನೈಜೀರಿಯಾ): ಆಫ್ರಿಕಾದ ನೈಜೀರಿಯಾದಲ್ಲಿ ಶುಕ್ರವಾರ ಭೀಕರ ಅಪಘಾತ ಸಂಭವಿಸಿದೆ. ಇಲ್ಲಿನ ಸೇಂಟ್ಸ್ ಅಕಾಡೆಮಿ ಕಾಲೇಜಿನ ಎರಡು ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಪರಿಣಾಮ 22 ಮಕ್ಕಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಶಾಲಾ ಸಿಬ್ಬಂದಿ ವರ್ಗ ಸೇರಿದಂತೆ ಹಲವು ವಿದ್ಯಾರ್ಥಿಗಳು ಅವಶೇಷಗಳಡಿ ಸಿಲುಕಿದ್ದು, ಶೋಧ ಕಾರ್ಯ ಮುಂದುವರಿದಿದೆ. ಗಾಯಾಳುಗಳಿಗೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಆರಂಭದಲ್ಲಿ ಒಟ್ಟು 154 ವಿದ್ಯಾರ್ಥಿಗಳು ಅವಶೇಷಗಳಲ್ಲಿ ಸಿಲುಕಿಕೊಂಡಿದ್ದು, ಅವರಲ್ಲಿ 132 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ದುರದೃಷ್ಟವಶಾತ್​​ 22 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ವಕ್ತಾರ ಆಲ್ಫ್ರೆಡ್ ಅಲಾಬೊ ಹೇಳಿದ್ದಾರೆ.

ಅಪಘಾತಕ್ಕೆ ಕಾರಣ:

ಈ ಶಾಲೆಯನ್ನು ನದಿಯ ದಡದಲ್ಲಿ ನಿರ್ಮಿಸಲಾಗಿರುವುದೇ ಈ ಅಪಘಾತಕ್ಕೆ ಕಾರಣ ಎಂದು ರಾಜ್ಯ ಸರ್ಕಾರ ಆರೋಪಿಸಿದೆ. ಅಲ್ಲದೆ, ಮುನ್ನೆಚ್ಚರಿಕೆ ವಹಿಸಿ, ದುರ್ಬಲ ಕಟ್ಟಡಗಳನ್ನು ಹೊಂದಿರುವ ಮತ್ತು ನದಿ ದಡದಲ್ಲಿರುವ ರಾಜ್ಯದ ಎಲ್ಲಾ ಶಾಲಾ ಕಟ್ಟಡಗಳನ್ನು ಕೂಡಲೇ ಮುಚ್ಚುವಂತೆ ಸರ್ಕಾರ ಮನವಿ ಮಾಡಿದೆ.

ಮತ್ತಷ್ಟು ಓದಿ: ಚಾರ್‌ ಧಾಮ್​ನಲ್ಲಿ ಭೂಕುಸಿತ: ಸಂಕಷ್ಟಕ್ಕೆ ಸಿಲುಕಿದ ಹಾವೇರಿಯ 7 ಜನರು

ಆಫ್ರಿಕನ್ ದೇಶಗಳ ಪೈಕಿ ನೈಜೀರಿಯಾ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿದೆ. ನೈಜೀರಿಯಾದಲ್ಲಿ ಕಟ್ಟಡ ಕುಸಿತವು ಸಾಮಾನ್ಯ ಘಟನೆಯಾಗಿದ್ದರೂ, ಕಳೆದ ಎರಡು ವರ್ಷಗಳಲ್ಲಿ ದೇಶದಲ್ಲಿ ಹತ್ತಕ್ಕೂ ಹೆಚ್ಚು ಕಟ್ಟಡ ಕುಸಿತದ ಘಟನೆಗಳು ದಾಖಲಾಗಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:14 am, Sat, 13 July 24

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ