AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು

ಪಶ್ಚಿಮ ಆಫ್ರಿಕಾದ ನೈಜೀರಿಯಾದಲ್ಲಿ ಸೇನಾ ವಿಮಾನ ಪತನಗೊಂಡು 25 ಪ್ರಯಾಣಿಕರು ಮತ್ತು 7 ಸಿಬ್ಬಂದಿ ಸೇರಿದಂತೆ 32 ಮಂದಿ ಮೃತಪಟ್ಟಿದ್ದಾರೆ. ಅಧ್ಯಕ್ಷ ಬೋಲಾ ಟಿನುಬು ಮೂರು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ್ದು, ದುರಂತಕ್ಕೆ ತನಿಖೆಗೆ ಆದೇಶಿಸಿದ್ದಾರೆ. ದಕ್ಷಿಣ ನೈಜೀರಿಯಾದ ಒಂಡೋ ರಾಜ್ಯದ ಇಗ್ಬೊಕೊಡಾ ಬಳಿ ಅವಳಿ-ಎಂಜಿನ್‌ನ ATR-42 ವಿಮಾನ ಪತನಗೊಂಡಿದೆ. ಇದು ದೇಶದ ವಾಯುಯಾನ ಸುರಕ್ಷತಾ ಮಾನದಂಡಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು
ವಿಮಾನ ಪತನImage Credit source: XTrafrica x account
ನಯನಾ ರಾಜೀವ್
|

Updated on:Oct 06, 2026 | 7:35 AM

Share

ಅಬುಜಾ, ಅಕ್ಟೋಬರ್ 06: ಪಶ್ಚಿಮ ಆಫ್ರಿಕಾದ ನೈಜೀರಿಯಾದಲ್ಲಿ ಸೇನಾ ವಿಮಾನವೊಂದು ಪತನಗೊಂಡು 25 ಪ್ರಯಾಣಿಕರು ಹಾಗೂ 7 ಸಿಬ್ಬಂದಿ ಸೇರಿದಂತೆ ಒಟ್ಟು 32 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇಶದ ಇತ್ತೀಚಿನ ವರ್ಷಗಳ ಅತ್ಯಂತ ಭೀಕರ ವಾಯು ದುರಂತಗಳಲ್ಲಿ ಒಂದಾದ ಈ ಘಟನೆಗೆ ರಾಷ್ಟ್ರಪತಿ ಬೋಲಾ ಟಿನುಬು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ದೇಶಾದ್ಯಂತ ಮೂರು ದಿನಗಳ ಕಾಲ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ್ದಾರೆ.

ಘಟನಾ ಸ್ಥಳ: ದಕ್ಷಿಣ ನೈಜೀರಿಯಾದ ಕರಾವಳಿ ತೈಲ ಉತ್ಪಾದನಾ ಪ್ರದೇಶವಾದ ಒಂಡೋ ರಾಜ್ಯದ ಇಗ್ಬೊಕೊಡಾ ಬಳಿ ಈ ಅವಘಡ ಸಂಭವಿಸಿದೆ. ವಿಮಾನವು ಸಮೀಪದ ನೌಕಾ ನೆಲೆಯ ಬಳಿಯ ಜೌಗು ಪ್ರದೇಶಕ್ಕೆ ಅಪ್ಪಳಿಸಿದೆ. ವಿಮಾನವು ಬೆನಿನ್ ನಗರದಿಂದ ದೇಶದ ಪ್ರಮುಖ ಆರ್ಥಿಕ ಕೇಂದ್ರವಾದ ಲಾಗೋಸ್‌ಗೆ ವಾಡಿಕೆಯ ಕಾರ್ಯಾಚರಣೆಯಲ್ಲಿದ್ದಾಗ ಬೆಳಗ್ಗೆ ಸುಮಾರು 9 ಗಂಟೆಗೆ ಪತನಗೊಂಡಿದೆ.

ಪತನಗೊಂಡ ವಿಮಾನವನ್ನು ಅವಳಿ-ಎಂಜಿನ್‌ನ ಟರ್ಬೊಪ್ರೊಪ್ ATR-42 ಎಂದು ಗುರುತಿಸಲಾಗಿದೆ. ಇದು ಸಾಮಾನ್ಯವಾಗಿ 30 ರಿಂದ 50 ಪ್ರಯಾಣಿಕರನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ.ಅಪಘಾತದ ವೇಳೆ ಭಾರೀ ಗುಡುಗಿನಂತಹ ಶಬ್ದ ಕೇಳಿಬಂತು ಎಂದು ಸ್ಥಳೀಯರು ತಿಳಿಸಿದ್ದಾರೆ. ಜೌಗು ಪ್ರದೇಶದಲ್ಲಿ ಮೀನುಗಾರಿಕೆ ನಡೆಸುತ್ತಿದ್ದವರು ಸ್ಥಳೀಯ ನೌಕಾ ನೆಲೆಗೆ ಮಾಹಿತಿ ನೀಡಿದ ಬಳಿಕ ದೋಣಿಗಳ ಮೂಲಕ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿದವು.

ಮತ್ತಷ್ಟು ಓದಿ: 6 ಜನರೊಂದಿಗೆ ಬರ್ಮುಡಾದಿಂದ ಬೋಸ್ಟನ್‌ಗೆ ತೆರಳುತ್ತಿದ್ದ ವಿಮಾನ ನಿಗೂಢವಾಗಿ ನಾಪತ್ತೆ

ಮೃತ ಸೈನಿಕರು ಹಾಗೂ ಸಿಬ್ಬಂದಿಗೆ ಗೌರವ ಸಲ್ಲಿಸಲು ಮೂರು ದಿನ ದೇಶಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲು ಆದೇಶಿಸಲಾಗಿದೆ.ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ದುರಂತಕ್ಕೆ ತಾಂತ್ರಿಕ ದೋಷವೇ ಅಥವಾ ಹವಾಮಾನ ವೈಪರೀತ್ಯವೇ ಕಾರಣ ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಲು ವಾಯುಪಡೆಗೆ ಅಧ್ಯಕ್ಷರು ನಿರ್ದೇಶನ ನೀಡಿದ್ದಾರೆ.ಗುರುತು ಪತ್ತೆ ಕಾರ್ಯಮೃತರ ಕುಟುಂಬಸ್ಥರಿಗೆ ಅಧಿಕೃತವಾಗಿ ಮಾಹಿತಿ ರವಾನಿಸಿದ ನಂತರ ಅವರ ಹೆಸರು ಮತ್ತು ವಿವರಗಳನ್ನು ವಾಯುಪಡೆ ಬಿಡುಗಡೆ ಮಾಡಲಿದೆ.

ನೈಜೀರಿಯಾದ ಹಿಂದಿನ ಪ್ರಮುಖ ವಾಯು ದುರಂತಗಳು ಮೇ 2021: ಉತ್ತರ ಕಡುನಾ ವಿಮಾನ ನಿಲ್ದಾಣದ ಬಳಿ ಕೆಟ್ಟ ಹವಾಮಾನದ ಕಾರಣ ಸೇನಾ ವಿಮಾನ ಪತನಗೊಂಡು, ನೈಜೀರಿಯಾದ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಇಬ್ರಾಹಿಂ ಅಟ್ಟಹಿರು ಸೇರಿದಂತೆ 11 ಹಿರಿಯ ಸೇನಾ ಅಧಿಕಾರಿಗಳು ಮೃತಪಟ್ಟಿದ್ದರು.

ಪೋಸ್ಟ್​

ಆಗಸ್ಟ್ 2015: ಉತ್ತರ ನೈಜೀರಿಯಾದಲ್ಲಿ ಮಿಲಿಟರಿ ಡೋರ್ನಿಯರ್ ವಿಮಾನವೊಂದು ವಸತಿ ಕಟ್ಟಡಕ್ಕೆ ಅಪ್ಪಳಿಸಿ ಅದರಲ್ಲಿದ್ದ ಎಲ್ಲಾ 7 ಮಂದಿ ಸಾವನ್ನಪ್ಪಿದ್ದರು.

ಆಗಸ್ಟ್ 2015 (ಲಾಗೋಸ್): ಬ್ರಿಸ್ಟೋ ಹೆಲಿಕಾಪ್ಟರ್ ಲಾಗೋಸ್ ಲಗೂನ್‌ಗೆ ಬಿದ್ದು ಅಮೆರಿಕದ ಪೈಲಟ್ ಸೇರಿದಂತೆ 6 ಮಂದಿ ಜಲಸಮಾಧಿಯಾಗಿದ್ದರು. ನೈಜೀರಿಯಾ ವಾಯುಪಡೆಯ ವಿಮಾನಗಳ ನಿರ್ವಹಣೆ ಮತ್ತು ವಾಯುಯಾನ ಸುರಕ್ಷತಾ ಮಾನದಂಡಗಳ ಬಗ್ಗೆ ಈ ದುರಂತವು ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:35 am, Tue, 6 October 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಐಷಾರಾಮಿ ಪ್ರವಾಸಿ ರೈಲಿನಲ್ಲಿ ಪ್ರಯಾಣಿಸಿ ಖುಷಿ ಹಂಚಿಕೊಂಡ ಸಿಎಂ ಡಿಕೆಶಿ !
ಐಷಾರಾಮಿ ಪ್ರವಾಸಿ ರೈಲಿನಲ್ಲಿ ಪ್ರಯಾಣಿಸಿ ಖುಷಿ ಹಂಚಿಕೊಂಡ ಸಿಎಂ ಡಿಕೆಶಿ !