AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಂಪ್ ನೇತೃತ್ವದ ಇರಾನ್ ಸಭೆ ಅಪೂರ್ಣ: ಒಪ್ಪಂದಕ್ಕೆ ಒಪ್ಪದ ಅಮೆರಿಕ, ಇಂಧನ ದರ ಏರಿಕೆ ಆತಂಕ

ಡೊನಾಲ್ಡ್ ಟ್ರಂಪ್ ನೇತೃತ್ವದ ಇರಾನ್ ಜೊತೆಗಿನ ಉನ್ನತ ಸಭೆ ಯಾವುದೇ ನಿರ್ಧಾರವಿಲ್ಲದೆ ಅಂತ್ಯಗೊಂಡಿದೆ. ಅಮೆರಿಕದ ಕಠಿಣ ನಿಲುವು ಮತ್ತು ಇರಾನ್‌ನ ಬೇಡಿಕೆಗಳಿಂದಾಗಿ ಒಪ್ಪಂದಕ್ಕೆ ಬರಲು ಸಾಧ್ಯವಾಗಿಲ್ಲ. ಪರಮಾಣು ಶಸ್ತ್ರಾಸ್ತ್ರ, ಜಲಸಂಧಿಯ ಗಣಿಗಾರಿಕೆ ಮತ್ತು ಇರಾನ್ ಹಣ ಬಿಡುಗಡೆ ಕುರಿತು ಭಿನ್ನಾಭಿಪ್ರಾಯಗಳಿವೆ. ಈ ಬಿಕ್ಕಟ್ಟು ಜಾಗತಿಕ ಇಂಧನ ದರಗಳ ಏರಿಕೆಯ ಆತಂಕವನ್ನು ಸೃಷ್ಟಿಸಿದೆ. ಸದ್ಯಕ್ಕೆ ಶಾಂತಿ ಸ್ಥಾಪನೆ ಅನಿಶ್ಚಿತ.

ಟ್ರಂಪ್ ನೇತೃತ್ವದ ಇರಾನ್ ಸಭೆ ಅಪೂರ್ಣ: ಒಪ್ಪಂದಕ್ಕೆ ಒಪ್ಪದ ಅಮೆರಿಕ, ಇಂಧನ ದರ ಏರಿಕೆ ಆತಂಕ
ಡೊನಾಲ್ಡ್​ ಟ್ರಂಪ್ Image Credit source: PTI
ನಯನಾ ರಾಜೀವ್
|

Updated on: May 30, 2026 | 9:03 AM

Share

ವಾಷಿಂಗ್ಟನ್, ಮೇ 30: ಇರಾನ್ ಜೊತೆಗಿನ ಉದ್ವಿಗ್ನತೆಯನ್ನು ಕೊನೆಗೊಳಿಸಲು ಮತ್ತು ಸಂಭಾವ್ಯ ಕದನ ವಿರಾಮ ಒಪ್ಪಂದವನ್ನು ಚರ್ಚಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಶ್ವೇತಭವನದ ಕರೆದಿದ್ದ ಉನ್ನತ ಮಟ್ಟದ ಸಭೆಯು ಯಾವುದೇ ನಿರ್ಧಾರವಿಲ್ಲದೆ ಮುಕ್ತಾಯಗೊಂಡಿದೆ. ಜಾಗತಿಕ ಇಂಧನ ಬೆಲೆಗಳು ವೇಗವಾಗಿ ಏರುತ್ತಿದ್ದರೂ ಮತ್ತು ನವೆಂಬರ್‌ನ ಮಧ್ಯಾವಧಿ ಚುನಾವಣೆ ಹತ್ತಿರ ಬರುತ್ತಿದ್ದರೂ, ಟ್ರಂಪ್ ತಮ್ಮ ಕಠಿಣ ನಿಲುವಿನಿಂದ ಹಿಂದೆ ಸರಿದಿಲ್ಲ.

ಇರಾನ್ ಯಾವುದೇ ಕಾರಣಕ್ಕೂ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದುವಂತಿಲ್ಲ ಎಂಬುದು ಅಮೆರಿಕದ ಮೊದಲ ಷರತ್ತಾಗಿತ್ತು. ಒಪ್ಪಂದವು ಹತ್ತಿರದಲ್ಲಿದ್ದರೂ, ಇರಾನ್‌ನ ಮುಟ್ಟುಗೋಲು ಹಾಕಿಕೊಳ್ಳಲಾದ ಹಣವನ್ನು ಬಿಡುಗಡೆ ಮಾಡುವ ವಿಷಯದಲ್ಲಿ ಇನ್ನೂ ಭಿನ್ನಾಭಿಪ್ರಾಯಗಳು ಮುಂದುವರೆದಿವೆ ಎಂದು ಹಿರಿಯ ಆಡಳಿತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟ್ರೂತ್ ಸೋಶಿಯಲ್‌ನಲ್ಲಿ ಟ್ರಂಪ್ ಪೋಸ್ಟ್ ಸಭೆಯ ನಂತರ ತಮ್ಮ ‘ಟ್ರೂತ್ ಸೋಶಿಯಲ್’ ಜಾಲತಾಣದಲ್ಲಿ ಬರೆದುಕೊಂಡಿರುವ ಡೊನಾಲ್ಡ್ ಟ್ರಂಪ್, ಒಪ್ಪಂದಕ್ಕೆ ಮುನ್ನ ಇರಾನ್ ಅನುಸರಿಸಬೇಕಾದ ಕ್ರಮಗಳನ್ನು ಬಿಚ್ಚಿಟ್ಟಿದ್ದಾರೆ.

ಸಮುದ್ರ ಮಾರ್ಗ ಮುಕ್ತ: ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ಅಳವಡಿಸಿರುವ ಕಡಲ ಗಣಿಗಳನ್ನು (Mines) ತೆಗೆದುಹಾಕಬೇಕು. ಆಗ ಅಮೆರಿಕ ತನ್ನ ನೌಕಾ ದಿಗ್ಬಂಧನವನ್ನು ಹಿಂಪಡೆಯಲಿದ್ದು, ಹಡಗುಗಳ ಸಂಚಾರ ಪುನರಾರಂಭಗೊಳ್ಳಲಿದೆ.

ಯುರೇನಿಯಂ ನಾಶ: ಇರಾನ್ ಬಳಿ ಇರುವ ಅತಿ ಹೆಚ್ಚು ಪುಷ್ಟೀಕರಿಸಿದ ಯುರೇನಿಯಂ ಅನ್ನು ಹೊರತೆಗೆದು ನಾಶಪಡಿಸಬೇಕು.

ಹಣ ಬಿಡುಗಡೆ ಇಲ್ಲ: ಮುಂದಿನ ಸೂಚನೆ ಬರುವವರೆಗೂ ಇರಾನ್‌ಗೆ ಯಾವುದೇ ಹಣ ವರ್ಗಾವಣೆ ಮಾಡುವುದಿಲ್ಲ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಮಾತುಕತೆ ಮುಂದುವರಿಯುವ ಮುನ್ನ ತನ್ನ 12 ಬಿಲಿಯನ್ ಡಾಲರ್ ಫ್ರೀಜ್ ಆಗಿರುವ ಆಸ್ತಿಯನ್ನು ಬಿಡುಗಡೆ ಮಾಡಬೇಕೆಂಬ ಇರಾನ್ ಬೇಡಿಕೆಯನ್ನು ಟ್ರಂಪ್ ತಿರಸ್ಕರಿಸಿದ್ದಾರೆ.

ಮತ್ತಷ್ಟು ಓದಿ: ಐ ಲವ್ ಇಂಡಿಯಾ, ನಾನು ಪಿಎಂ ಮೋದಿಯ ದೊಡ್ಡ ಅಭಿಮಾನಿ ಎಂದ ಡೊನಾಲ್ಡ್​ ಟ್ರಂಪ್

ಇರಾನ್ ಹೇಳುವುದೇನು? ಈ ಕುರಿತು ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಇಸ್ಮಾಯಿಲ್ ಬಘೈ ಪ್ರತಿಕ್ರಿಯಿಸಿದ್ದು, ಅಮೆರಿಕದೊಂದಿಗೆ ಇನ್ನೂ ಯಾವುದೇ ಒಪ್ಪಂದ ಅಂತಿಮಗೊಂಡಿಲ್ಲ, ಕೇವಲ ಸಂದೇಶಗಳ ವಿನಿಮಯ ನಡೆಯುತ್ತಿದೆ ಎಂದಿದ್ದಾರೆ.

ಸದ್ಯಕ್ಕೆ ಯುದ್ಧ ನಿಲ್ಲಿಸುವುದಷ್ಟೇ ಇರಾನ್‌ನ ಮೊದಲ ಆದ್ಯತೆಯಾಗಿದ್ದು, ಯುರೇನಿಯಂ ಪುಷ್ಟೀಕರಣದ ಬಗ್ಗೆ ಈಗ ಚರ್ಚಿಸುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಹಾರ್ಮುಜ್ ಜಲಸಂಧಿಯ ನಿರ್ವಹಣೆಯು ಕೇವಲ ಇರಾನ್ ಮತ್ತು ಒಮಾನ್‌ ದೇಶಗಳಿಗೆ ಮಾತ್ರ ಸಂಬಂಧಿಸಿದ್ದು ಎಂದು ಅವರು ಪ್ರತಿಪಾದಿಸಿದ್ದಾರೆ. ಒಟ್ಟಾರೆ ಉಭಯ ದೇಶಗಳ ಹಠಮಾರಿ ಧೋರಣೆಯಿಂದಾಗಿ ಸದ್ಯಕ್ಕೆ ಬಿಕ್ಕಟ್ಟು ಶಮನಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ