AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಹೋರ್​ನಲ್ಲಿ ಪೆಟ್ರೋಲ್ ಇಲ್ಲ, ಎಟಿಎಂನಲ್ಲಿ ಹಣವಿಲ್ಲ; ಶ್ರೀಲಂಕಾದಂತೆ ಪಾಕಿಸ್ತಾನದಲ್ಲೂ ಶುರುವಾಯ್ತ ಆರ್ಥಿಕ ಬಿಕ್ಕಟ್ಟು?

Pakistan Economic Crisis: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಮಾಡಿರುವ ಟ್ವೀಟ್​ನಿಂದಾಗಿ ಪಾಕಿಸ್ತಾನದಲ್ಲಿ ಕೂಡ ಶ್ರೀಲಂಕಾದ ರೀತಿಯದ್ದೇ ಪರಿಸ್ಥಿತಿ ನಿರ್ಮಾಣವಾಗುತ್ತಿದೆಯಾ? ಎಂಬ ಚರ್ಚೆ ಆರಂಭವಾಗಿದೆ.

ಲಾಹೋರ್​ನಲ್ಲಿ ಪೆಟ್ರೋಲ್ ಇಲ್ಲ, ಎಟಿಎಂನಲ್ಲಿ ಹಣವಿಲ್ಲ; ಶ್ರೀಲಂಕಾದಂತೆ ಪಾಕಿಸ್ತಾನದಲ್ಲೂ ಶುರುವಾಯ್ತ ಆರ್ಥಿಕ ಬಿಕ್ಕಟ್ಟು?
ಮೊಹಮ್ಮದ್ ಹಫೀಜ್Image Credit source: Republic World
TV9 Web
| Updated By: ಪೃಥ್ವಿಶಂಕರ|

Updated on:May 26, 2022 | 12:56 AM

Share

ನವದೆಹಲಿ: ಶ್ರೀಲಂಕಾದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು (Srilanka Economic Crisis) ಎದುರಾಗಿರುವುದು ಗೊತ್ತೇ ಇದೆ. ಶ್ರೀಲಂಕಾದಲ್ಲಿ ಆರ್ಥಿಕ ಸಂಕಷ್ಟದಿಂದಾಗಿ 1 ಲೀಟರ್ ಪೆಟ್ರೋಲ್​ಗೆ 420 ರೂ., ಡೀಸೆಲ್​ಗೆ 400 ರೂ. ಆಗಿದೆ! ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಕೂಡ ಗಗನಕ್ಕೇರಿದ್ದು, ಈ ಮೂಲಕ ಶ್ರೀಲಂಕಾದಲ್ಲಿ ಜನರು ಬದುಕುವುದೇ ಕಷ್ಟ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ವಾರಾಂತ್ಯದವರೆಗೂ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಜಾರಿಗೊಳಿಸಲಾಗಿತ್ತು. ಇದೀಗ ನೆರೆಯ ರಾಷ್ಟ್ರವಾದ ಪಾಕಿಸ್ತಾನದಲ್ಲಿ ಕೂಡ ಶ್ರೀಲಂಕಾ ರೀತಿಯದ್ದೇ ಪರಿಸ್ಥಿತಿ ಎದುರಾಗಿದೆಯಾ? ಎಂಬ ಚರ್ಚೆಗಳು ಶುರುವಾಗಿವೆ. ಈ ಚರ್ಚೆಯನ್ನು ಹುಟ್ಟುಹಾಕಿದ್ದು ಪಾಕಿಸ್ತಾನದ (Pakistan Ecnomic Crisis) ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ (Mohammad Hafeez) ಅವರ ಒಂದು ಟ್ವೀಟ್.

ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಆಲ್‌ರೌಂಡರ್ ಮೊಹಮ್ಮದ್ ಹಫೀಜ್ ಪಾಕಿಸ್ತಾನದಲ್ಲಿ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಎತ್ತಿ ತೋರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ತಮ್ಮ ಟ್ವೀಟ್​ನಲ್ಲಿ ಪಾಕಿಸ್ತಾನದ ಪ್ರಮುಖ ರಾಜಕಾರಣಿಗಳನ್ನು ಟ್ಯಾಗ್ ಮಾಡಿದ್ದಾರೆ. ಇದು ಭಾರೀ ಚರ್ಚೆಗೆ ಕಾರಣವಾಗಿದೆ. ಶ್ರೀಲಂಕಾದಂತೆ ಪಾಕಿಸ್ತಾನದಲ್ಲೂ ಆರ್ಥಿಕ ಬಿಕ್ಕಟ್ಟು ಎದುರಾಗಿದೆಯಾ? ಎಂಬ ಅನುಮಾನವನ್ನೂ ಹುಟ್ಟುಹಾಕಿದೆ.

ಇದನ್ನೂ ಓದಿ
Image
Sri Lanka Crisis: ಶ್ರೀಲಂಕಾದಲ್ಲಿ ಪೆಟ್ರೋಲ್ ಖಾಲಿ; ಆರ್ಥಿಕ ಬಿಕ್ಕಟ್ಟು ಉಲ್ಬಣ, ಏರ್​ಲೈನ್ಸ್ ಮಾರಾಟಕ್ಕೆ ಮುಂದಾದ ಪ್ರಧಾನಿ
Image
Sri Lanka Economic Crises : ಶ್ರೀಲಂಕಾ ಎತ್ತ ಸಾಗುತ್ತಿದೆ, ಭಾರತವೂ ಇದರಿಂದ ಕಲಿಯಬಹುದಾದ ಪಾಠಗಳೇನು?
Image
Srilanka Crisis: ಶ್ರೀಲಂಕಾ ಪ್ರಧಾನಿಯಾಗಿ ರನಿಲ್ ವಿಕ್ರಮಸಿಂಘೆ ಅಧಿಕಾರ ಸ್ವೀಕಾರ
Image
ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ, ನೇಪಾಳ, ಪಾಕಿಸ್ತಾನದಲ್ಲಿ ವಿದೇಶಿ ಮೀಸಲು ನಿಧಿ ಕುಸಿತ: ಭಾರತದ ಸುತ್ತಲ ದೇಶಗಳಲ್ಲಿ ತಲ್ಲಣ

‘ಲಾಹೋರ್‌ನ ನಿಲ್ದಾಣದಲ್ಲಿ ಪೆಟ್ರೋಲ್ ಇಲ್ಲ, ಎಟಿಎಂನಲ್ಲಿ ಹಣವಿಲ್ಲ’ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಇಂದು ಪೋಸ್ಟ್ ಮಾಡಿದ ಟ್ವೀಟ್ ಅಲ್ಲಿನ ಆರ್ಥಿಕತೆಯ ಬಗ್ಗೆ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ವರ್ಷ ಮಾರ್ಚ್ 10ರಂದು ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯದ ಮೂಲಕ ಮಾಜಿ ಕ್ರಿಕೆಟಿಗ ಹಾಗೂ ಪಾಕಿಸ್ತಾನದ ಪ್ರಧಾನಿಯಾಗಿದ್ದ ಇಮ್ರಾನ್ ಖಾನ್ ಅವರನ್ನು ಪದಚ್ಯುತಗೊಳಿಸಿದ ಬಳಿಕ ಪಾಕಿಸ್ತಾನದ ಆಡಳಿತದಲ್ಲಿ ಬದಲಾವಣೆಗಳು ಉಂಟಾದವು.

ಇದನ್ನೂ ಓದಿ: Sri Lanka Crisis: ಶ್ರೀಲಂಕಾದಲ್ಲಿ ಪೆಟ್ರೋಲ್ ಖಾಲಿ; ಆರ್ಥಿಕ ಬಿಕ್ಕಟ್ಟು ಉಲ್ಬಣ, ಏರ್​ಲೈನ್ಸ್ ಮಾರಾಟಕ್ಕೆ ಮುಂದಾದ ಪ್ರಧಾನಿ

ಏಪ್ರಿಲ್ 10ರಂದು ಪಾಕಿಸ್ತಾನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲಾಯಿತು. ವಿಶ್ವಾಸ ಮತಯಾಚನೆ ವೇಳೆ ಇಮ್ರಾನ್ ಖಾನ್ ಬಹುಮತ ಸಾಬೀತುಪಡಿಸಲು ವಿಫಲರಾದ್ದರಿಂದ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಯಿತು. ಈ ಮೂಲಕ ಇಮ್ರಾನ್ ಖಾನ್ ಅವಿಶ್ವಾಸ ಮತದ ಮೂಲಕ ಅಧಿಕಾರದಿಂದ ತೆಗೆದುಹಾಕಲ್ಪಟ್ಟ ಪಾಕಿಸ್ತಾನದ ಮೊದಲ ಪ್ರಧಾನ ಮಂತ್ರಿಯಾದರು.

ವಿಶ್ವಾಸಮತ ಯಾಚನೆಯ ನಂತರ ವಿರೋಧ ಪಕ್ಷಗಳಿಂದ ಶೆಹಬಾಜ್ ಷರೀಫ್ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಲಾಗಿತ್ತು. ಅವರು 2022ರ ಏಪ್ರಿಲ್ 11 ರಂದು ಪ್ರಧಾನ ಮಂತ್ರಿಯಾಗಿ ಆಯ್ಕೆಯಾದರು. ಬಲ್ಲ ಮೂಲಗಳ ಪ್ರಕಾರ, ಪಾಕಿಸ್ತಾನ ಇತ್ತೀಚೆಗೆ ದೀರ್ಘಾವಧಿಯ ಅಸ್ಥಿರತೆಯತ್ತ ಸಾಗುತ್ತಿದೆ. ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿದೆ. ಪಾಕಿಸ್ತಾನದ ರೂಪಾಯಿಯ ಮೌಲ್ಯವೂ ಕುಸಿತಯುತ್ತಿದೆ. ಪಾಕಿಸ್ತಾನದ ಸೇನೆಯು ತಟಸ್ಥ ನಿಲುವುಗಳನ್ನು ಅಳವಡಿಸಿಕೊಂಡಿದೆ.

ಇದನ್ನೂ ಓದಿ: ಜನರ ಗಮನ ಬೇರೆಡೆಗೆ ಸೆಳೆಯುವುದರಿಂದ ಸತ್ಯಗಳು ಬದಲಾಗುವುದಿಲ್ಲ, ಭಾರತವು ಶ್ರೀಲಂಕಾದಂತೆ ಕಾಣುತ್ತದೆ: ರಾಹುಲ್ ಗಾಂಧಿ

ಇದರ ಮಧ್ಯೆ ಪಾಕಿಸ್ತಾನದ ಕ್ರಿಕೆಟ್ ತಂಡದ ಮಾಜಿ ಆಲ್‌ರೌಂಡರ್ ಮೊಹಮ್ಮದ್ ಹಫೀಜ್ ಪಾಕಿಸ್ತಾನದಲ್ಲಿ ಸಾಮಾನ್ಯ ವ್ಯಕ್ತಿ ಎದುರಿಸುತ್ತಿರುವ ಸಮಸ್ಯೆಗಳನ್ನು ಎತ್ತಿ ತೋರಿಸಿದ್ದಾರೆ. ತಮ್ಮ ಪೋಸ್ಟ್‌ನಲ್ಲಿ ಪಾಕಿಸ್ತಾನದ ಪ್ರಮುಖ ರಾಜಕಾರಣಿಗಳನ್ನು ಟ್ಯಾಗ್ ಮಾಡಿದ್ದಾರೆ. ಪಾಕಿಸ್ತಾನದ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಎದ್ದಿರುವ ಸುದ್ದಿಗಳಿಗೆ ಇಂದು ಪಾಕ್ ಮಾಜಿ ಕ್ರಿಕೆಟಿಗ ಮಾಡಿರುವ ಟ್ವೀಟ್ ಪುಷ್ಠಿ ನೀಡುವಂತಿದೆ.

“ಲಾಹೋರ್‌ನ ಯಾವುದೇ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಲಭ್ಯವಿಲ್ಲವೇ? ಎಟಿಎಂ ಯಂತ್ರಗಳಲ್ಲಿ ನಗದು ಲಭ್ಯವಿಲ್ಲವೇ? ಸಾಮಾನ್ಯ ಜನರು ರಾಜಕೀಯ ನಿರ್ಧಾರಗಳಿಂದ ಏಕೆ ಬಳಲಬೇಕಾಗಿದೆ?” ಎಂದು ಪಾಕಿಸ್ತಾನದ ಮಾಜಿ ಆಲ್‌ರೌಂಡರ್ ಟ್ವಿಟರ್‌ನಲ್ಲಿ ಬರೆದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ ಹಾಗೂ ಪ್ರಸ್ತುತ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಸೇರಿದಂತೆ ಅನೇಕ ರಾಜಕಾರಣಿಗಳಿಗೆ ಟ್ಯಾಗ್ ಮಾಡಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:53 pm, Wed, 25 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ