AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಬರ್ಬರ ಹತ್ಯೆ; ಯೂನಸ್ ಸರ್ಕಾರದಿಂದ ಖಡಕ್ ಎಚ್ಚರಿಕೆ

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಕಟ್ಟಿ ಹಾಕಿ ಥಳಿಸಿ, ಬೆಂಕಿ ಹಚ್ಚಿ ಸುಟ್ಟಿರುವುದು ಅಲ್ಲಿ ಹೆಚ್ಚುತ್ತಿರುವ ಕೋಮುವಾದಿ ಧಂಗೆಗೆ ನಿದರ್ಶನವಾಗಿದೆ. ಈ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ನೇತೃತ್ವ ವಹಿಸಿರುವ ಮುಹಮ್ಮದ್ ಯೂನಸ್ ಪ್ರತಿಕ್ರಿಯಿಸಿದ್ದು, ಈ ಹತ್ಯೆಯನ್ನು ಖಂಡಿಸಿದ್ದಾರೆ. ಹಾಗೇ, ಹೊಸ ಬಾಂಗ್ಲಾದೇಶದಲ್ಲಿ ಹಿಂಸಾಚಾರಕ್ಕೆ ಸ್ಥಳವಿಲ್ಲ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಬರ್ಬರ ಹತ್ಯೆ; ಯೂನಸ್ ಸರ್ಕಾರದಿಂದ ಖಡಕ್ ಎಚ್ಚರಿಕೆ
Muhammed Yunus
ಸುಷ್ಮಾ ಚಕ್ರೆ
|

Updated on: Dec 19, 2025 | 6:29 PM

Share

ಢಾಕಾ, ಡಿಸೆಂಬರ್ 19: ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಅವರ ಸಾವಿನ ನಂತರ ಉಂಟಾದ ಪ್ರತಿಭಟನೆಗಳ ನಡುವೆ, ಧರ್ಮನಿಂದನೆಯ ಆರೋಪದ ಮೇಲೆ ಹಿಂದೂ ವ್ಯಕ್ತಿಯನ್ನು ಕಟ್ಟಿಹಾಕಿ, ಹೊಡೆದು, ಸಜೀವದಹನ ಮಾಡಲಾಗಿದೆ. ಈ ಹತ್ಯೆಯನ್ನು ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ (Bangladesh) ಮಧ್ಯಂತರ ಸರ್ಕಾರ ಬಲವಾಗಿ ಖಂಡಿಸಿದೆ. “ನವ ಬಾಂಗ್ಲಾದೇಶದಲ್ಲಿ ಯಾವುದೇ ರೀತಿಯ ಹಿಂಸಾಚಾರಕ್ಕೆ ಅವಕಾಶವಿಲ್ಲ” ಎಂದು ಯೂನಸ್ ಸರ್ಕಾರ ಎಚ್ಚರಿಕೆ ನೀಡಿದೆ. ಹತ್ಯೆಗಳಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡಲಾಗುವುದಿಲ್ಲ ಎಂದು ಎಚ್ಚರಿಸಿದೆ.

“ಮೈಮೆನ್ಸಿಂಗ್‌ನಲ್ಲಿ ಹಿಂದೂ ವ್ಯಕ್ತಿಯ ಹತ್ಯೆಯನ್ನು ನಾವು ಸಂಪೂರ್ಣವಾಗಿ ಖಂಡಿಸುತ್ತೇವೆ. ಹೊಸ ಬಾಂಗ್ಲಾದೇಶದಲ್ಲಿ ಅಂತಹ ಹಿಂಸಾಚಾರಕ್ಕೆ ಸ್ಥಳವಿಲ್ಲ. ಈ ಘೋರ ಅಪರಾಧ ಮಾಡಿದವರನ್ನು ಬಿಡುವುದಿಲ್ಲ” ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಥಳಿಸಿ, ಮರಕ್ಕೆ ಕಟ್ಟಿಹಾಕಿ, ಸುಟ್ಟು ಹಾಕಿದ ಪಾಪಿಗಳು

ಬಾಂಗ್ಲಾದೇಶಿಗರು ಎಲ್ಲಾ ರೀತಿಯ ಗುಂಪು ಹಿಂಸಾಚಾರವನ್ನು ವಿರೋಧಿಸಬೇಕು ಎಂದು ಸರ್ಕಾರ ಹೇಳಿದೆ. ಇದು ಕೆಲವು ಸೂಕ್ಷ್ಮ ಅಂಶ. ಎಲ್ಲಾ ಹಿಂಸಾಚಾರ, ಬೆದರಿಕೆ, ಬೆಂಕಿ ಹಚ್ಚುವಿಕೆ ಮತ್ತು ಆಸ್ತಿಗಳ ನಾಶದ ಕೃತ್ಯಗಳನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಯೂನಸ್ ಸರ್ಕಾರ ಹೇಳಿದೆ.

ಮೃತ ಯುವಕ ದೀಪು ಚಂದ್ರ ದಾಸ್ ಭಾಲುಕಾ ಉಪಜಿಲಾದ ದುಬಾಲಿಯಾ ಪ್ಯಾರಾ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಆತ ಯುವ ಗಾರ್ಮೆಂಟ್ ಫ್ಯಾಕ್ಟರಿ ಕೆಲಸಗಾರನಾಗಿದ್ದ. ಸ್ಥಳೀಯ ನಿವಾಸಿಗಳ ಗುಂಪೊಂದು ಆತ ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾನೆ ಎಂದು ಆರೋಪಿಸಿ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಮೇಲೆ ಹಲ್ಲೆ ನಡೆಸಿತು. ಬಳಿಕ ಆತನನ್ನು ಕಟ್ಟಿಹಾಕಿ ಬೆಂಕಿ ಹಚ್ಚಿತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ