Nobel Peace Prize: ಪ್ರಧಾನಿ ನರೇಂದ್ರ ಮೋದಿ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಅರ್ಹರು: ಆಸ್ಲೆ ಟೋಜೆ

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ನೊಬೆಲ್ ಶಾಂತಿ ಪುರಸ್ಕಾರಕ್ಕೆ ಅರ್ಹರು ಎಂದು ನೊಬೆಲ್ ಪ್ರಶಸ್ತಿ ಸಮಿತಿಯ ಉಪ ನಾಯಕ ಆಸ್ಲೆ ಟೋಜೆ ಹೇಳಿದ್ದಾರೆ.

Nobel Peace Prize: ಪ್ರಧಾನಿ ನರೇಂದ್ರ ಮೋದಿ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಅರ್ಹರು: ಆಸ್ಲೆ ಟೋಜೆ
ಪ್ರಧಾನಿ ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on: Mar 16, 2023 | 9:58 AM

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ನೊಬೆಲ್ ಶಾಂತಿ ಪುರಸ್ಕಾರಕ್ಕೆ ಅರ್ಹರು ಎಂದು ನೊಬೆಲ್ ಪ್ರಶಸ್ತಿ ಸಮಿತಿಯ ಉಪ ನಾಯಕ ಆಸ್ಲೆ ಟೋಜೆ ಹೇಳಿದ್ದಾರೆ.  ನಾವು ನೊಬೆಲ್ ಶಾಂತಿ ಪ್ರಶಸ್ತಿಗೆ ಹೆಚ್ಚಿನ ಸಂಖ್ಯೆಯ ಭಾರತೀಯ ನಾಮನಿರ್ದೇಶನಗಳನ್ನು ಪಡೆಯುತ್ತಿದ್ದೇವೆ. ನೊಬೆಲ್ ಶಾಂತಿ ಪ್ರಶಸ್ತಿಗೆ ಅಗತ್ಯವಿರುವ ಕೆಲಸವನ್ನು ವಿಶ್ವದ ಪ್ರತಿಯೊಬ್ಬ ನಾಯಕರು ಮಾಡುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಮೋದಿಯಂತಹ ಪ್ರಬಲ ನಾಯಕರಿಗೆ ಶಾಂತಿ ಸ್ಥಾಪಿಸುವ ಅಗಾಧ ಸಾಮರ್ಥ್ಯವಿದೆ. ಪ್ರಧಾನಿ ಮೋದಿ ಅತ್ಯಂತ ಶಕ್ತಿಶಾಲಿ ದೇಶದಿಂದ ಬಂದವರು, ಅವರನ್ನು ತುಂಬಾ ಗಂಭೀರವಾಗಿ ಪರಿಗಣಿಸಲಾಗಿದೆ. ಅವರಲ್ಲಿ ಅಪಾರವಾದ ವಿಶ್ವಾಸಾರ್ಹತೆ ಇದೆ ಎಂದು ಹೇಳಿದ್ದಾರೆ.

ಭಾರತವನ್ನು ಶಾಂತಿಯ ಪರಂಪರೆ ಎಂದು ಕರೆದ ಆಸ್ಲೆ ಟೋಜೆ, ದೇಶವು ಜಗತ್ತಿನ ಸೂಪರ್ ಪವರ್ ಆಗುವತ್ತ ಮುನ್ನಡೆದಿದೆ ಎಂದು ಹೇಳಿದರು. ಇದಲ್ಲದೆ, ಪ್ರಧಾನಿ ಮೋದಿ ಅವರು ಯುದ್ಧವನ್ನು ನಿಲ್ಲಿಸಲು ಅತ್ಯಂತ ವಿಶ್ವಾಸಾರ್ಹ ನಾಯಕರಾಗಿದ್ದಾರೆ ಮತ್ತು ಅವರು ಮಾತ್ರ ಶಾಂತಿ ಸ್ಥಾಪಿಸಲು ಸಾಧ್ಯ ಎಂದು ಹೇಳಿದರು.

ಪ್ರಧಾನಿ ಮೋದಿಯವರ ನೀತಿಗಳಿಂದಾಗಿ ಭಾರತ ಶ್ರೀಮಂತ – ಶಕ್ತಿಶಾಲಿ ರಾಷ್ಟ್ರವಾಗುತ್ತಿದೆ ಎಂದೂ ಅವರು ಹೇಳಿದರು. ಒಂದು ಕಡೆ ರಷ್ಯಾ ಮತ್ತು ಅಮೆರಿಕ ಎರಡೂ ಪರಮಾಣು ಯುದ್ಧದ ಬಗ್ಗೆ ಮಾತನಾಡುತ್ತಿದೆ, ಇಂತಹ ಪರಿಸ್ಥಿತಿಯಲ್ಲಿ ಈ ದೇಶಗಳು ಭಾರತವನ್ನೊಮ್ಮೆ ನೋಡಿ ಕಲಿಯಬೇಕಿದೆ ಎಂದರು.

ಕಳೆದ ಒಂದು ವರ್ಷದಿಂದ ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧಕ್ಕೆ ಸಂಬಂಧಿಸಿದಂತೆ ಭದ್ರತಾ ಮಂಡಳಿಯು (UNSC) ತನ್ನ ಸಭೆಯೊಂದರಲ್ಲಿ ಶಾಂತಿಗಾಗಿ ಭಾರತದ ಪ್ರಯತ್ನಗಳನ್ನು ಶ್ಲಾಘಿಸಿತ್ತು.

ಯುಎಸ್ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೆ 2009 ರಲ್ಲಿ ಶಾಂತಿ ಪ್ರಶಸ್ತಿ ನೀಡಲಾಯಿತು.  ಅಂತಾರಾಷ್ಟ್ರೀಯ ರಾಜತಾಂತ್ರಿಕತೆಯನ್ನು ಬಲಪಡಿಸಲು ಮತ್ತು ಜನರ ನಡುವೆ ಸಹಕಾರವನ್ನು ಹೆಚ್ಚಿಸಲು ಅವರ ಪ್ರಯತ್ನಗಳಿಗಾಗಿ ಈ ಗೌರವವನ್ನು ಅವರಿಗೆ ನೀಡಲಾಯಿತು.

ಇದಲ್ಲದೆ, 2002 ರಲ್ಲಿ ಯುಎಸ್ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್ ಅವರಿಗೆ ಈ ಗೌರವವನ್ನು ನೀಡಲಾಯಿತು. 2012 ರಲ್ಲಿ ಯುರೋಪಿಯನ್ ಯೂನಿಯನ್, 2001 ರಲ್ಲಿ ವಿಶ್ವಸಂಸ್ಥೆ ಮತ್ತು ಅದರ ಪ್ರಧಾನ ಕಾರ್ಯದರ್ಶಿ ಕೋಫಿ ಅನ್ನಾನ್ ಮತ್ತು 1979 ರಲ್ಲಿ ಕಲ್ಕತ್ತಾದ ಸೇಂಟ್ ತೆರೇಸಾ ಮತ್ತು 2014 ರಲ್ಲಿ ಕೈಲಾಶ್ ಸತ್ಯಾರ್ಥಿ ಮತ್ತು ಮಲಾಲಾ ಯೂಸುಫ್ಜಾಯ್ ಅವರಿಗೆ ನೊಬೆಲ್ ಶಾಂತಿ ಪುರಸ್ಕಾರ ನೀಡಿ ಗೌರವಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ