ಹಂಗಾಮಿ ಪ್ರಧಾನಿಯಾಗಿ ಬಾಂಗ್ಲಾದೇಶವನ್ನು ಮುನ್ನಡೆಸಲಿದ್ದಾರೆ ಮೊಹಮ್ಮದ್ ಯೂನಸ್
ನೋಬೆಲ್ ಪ್ರಶಸ್ತಿ ವಿಜೇತ ಮೊಹಮದ್ ಯೂನಸ್ ಅವರು ಬಾಂಗ್ಲಾದೇಶದ ಹಂಗಾಮಿ ಪ್ರಧಾನಿಯಾಗಿ ನೇಮಕಗೊಳ್ಳುವ ಸಾಧ್ಯತೆ ಇದೆ. ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ ಬಾಂಗ್ಲಾದೇಶದಲ್ಲಿ ಇದೀಗ ಮೀಸಲು ವಿವಾದ ಭುಗಿಲೆದ್ದಿದ್ದು, ಹಿಂಸಾಚಾರದ ಹಿನ್ನೆಲೆಯಲ್ಲಿ 5 ಬಾರಿಯ ಪ್ರಧಾನಿ ಶೇಖ್ ಹಸೀನಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಹೋಗಿದ್ದಾರೆ.
ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನಸ್ ಬಾಂಗ್ಲಾದೇಶದ ಹಂಗಾಮಿ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಲಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ ಬಾಂಗ್ಲಾದೇಶದಲ್ಲಿ ಇದೀಗ ಮೀಸಲು ವಿವಾದ ಭುಗಿಲೆದ್ದಿದ್ದು, ಹಿಂಸಾಚಾರದ ಹಿನ್ನೆಲೆಯಲ್ಲಿ 5 ಬಾರಿಯ ಪ್ರಧಾನಿ ಶೇಖ್ ಹಸೀನಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ್ದಾರೆ.
ಈ ಮೊದಲು ಹಸೀನಾ ಯಾರನ್ನು ರಕ್ತದಾಹಿ ಎಂದು ಕರೆದಿದ್ದರೋ ಅದೇ ಯೂನಸ್ಗೆ ಬಾಂಗ್ಲಾ ಸಾರಥ್ಯ ನೀಡಬೇಕೆಂಬ ಕೂಗು ಕೇಳಿಬಂದಿದೆ. ರಾಷ್ಟ್ರಪತಿ ಮೊಹಮ್ಮದ್ ಶಹಾಬುದ್ದೀನ್ ಮಂಗಳವಾರ ಬಾಂಗ್ಲಾ ಸಂಸತ್ತನ್ನು ವಿಸರ್ಜಿಸಿದ್ದಾರೆ. ಬಳಿಕ ರಕ್ಷಣ ಪಡೆಯ ಮೂರು ವಿಭಾಗಗಳ ಮುಖ್ಯಸ್ಥರು ಹಾಗೂ ವಿದ್ಯಾರ್ಥಿ ಚಳವಳಿಯ 13 ಸದಸ್ಯರೊಂದಿಗೆ ಮಧ್ಯಂತರ ಸರ್ಕಾರ ರಚನೆ ಕುರಿತು ಚರ್ಚೆ ನಡೆಸಿದ್ದಾರೆ. ಮೊಹಮ್ಮದ್ ಯೂನುಸ್ ಬಾಂಗ್ಲಾದೇಶದಲ್ಲಿ ಗ್ರಾಮೀಣ ಬ್ಯಾಂಕ್ ಸ್ಥಾಪಿಸಿ ಸಣ್ಣ ಉದ್ಯಮಗಳಿಗೆ ಬೆಂಬಲ ನೀಡಿ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಿದ್ದವರು.
ಹಸೀನಾ ಅವರು ತಮ್ಮ ತಂಗಿ ಶೇಖ್ ರೆಹಾನಾ ಅವರೊಂದಿಗೆ ಸೇನಾ ವಿಮಾನದ ಮೂಲಕ ದೇಶ ತೊರೆದ ಸುದ್ದಿ ಬಿತ್ತರವಾದ ಕೂಡಲೇ ಸಾವಿರಾರು ಸಂಖ್ಯೆಯ ಪ್ರತಿಭಟನಕಾರರು ಪ್ರಧಾನಿ ಅವರ ಅಧಿಕೃತ ನಿವಾಸಕ್ಕೆ ‘ಗಾನಾಭವನ್’ಗೆ ನುಗ್ಗಿ ಲೂಟಿ ಮಾಡಿದರು. ಮನೆಯ ಆವರಣದಲ್ಲಿದ್ದ ಶೇಖ್ ಮುಜಿಬುರ್ ರೆಹಮಾನ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದರು.
ಮತ್ತಷ್ಟು ಓದಿ: Sheikh Hasina: ಆ ಒಂದು ಫೋನ್ ಕಾಲ್ನಿಂದ ಬಾಂಗ್ಲಾದೇಶ ಬಿಟ್ಟು ಹೊರಟ ಶೇಖ್ ಹಸೀನಾ
ಬಾಂಗ್ಲಾದೇಶದ ಮೀಸಲು ನಿಯಮವನ್ನು ವಿರೋಧಿಸಿ ಮತ್ತು ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಆಗ್ರಹಿಸಿ ದೇಶದಾದ್ಯಂತ ಸೋಮವಾರವು ಪ್ರತಿಭಟನೆ ಮುಂದುವರಿದಿದ್ದು, 56 ಜನರು ಮೃತಪಟ್ಟಿದ್ದಾರೆ. ಇದರಿಂದ ಎರಡು ದಿನಗಳಿಂದ ನಡೆಯುತ್ತಿರುವ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 156ಕ್ಕೆ ಏರಿಕೆಯಾಗಿದೆ.
ಇದೇ ಪ್ರತಿಭಟನೆಯ ನಾಯಕರು ಮಧ್ಯಂತರ ಸರ್ಕಾರದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳುವಂತೆ ಮೊಹಮದ್ ಯೂನಸ್ ಅವರಿಗೆ ಮನವಿ ಮಾಡಿಕೊಳ್ಳುತ್ತಿದೆ. ಅದಕ್ಕೆ ಯೂನಸ್ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಯೂನಸ್ ಅವರ ಸೇವೆಯನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಿ 2006ರಲ್ಲಿ ನೋಬೆಲ್ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿತ್ತು.
ಆದಿವಾಸಿಗಳು ಹಾಗೂ ಗ್ರಾಮೀಣ ಪ್ರದೇಶದಲ್ಲಿರುವ ಕಡುಬಡವರಿಗೆ ಬದುಕು ಕಟ್ಟಿಕೊಳ್ಳಲು ಅತ್ಯಂತ ಕಡಿಮೆ ಬಡ್ಡಿ ದರ ಅಥವಾ ಬಡ್ಡಿ ರಹಿತ ಸಾಲ ನೀಡುವ ಮೂಲಕ ಲಕ್ಷಾಂತರ ಕುಟುಂಬಗಳಿಗೆ ನೆರವು ನೀಡುವ ಮೂಲಕ ಬಡವರಲ್ಲಿ ಬಡವರ ಪಾಲಿಗೆ ಬ್ಯಾಂಕರ್ ಎಂದೇ 84 ವರ್ಷದ ಯೂನಸ್ ಖ್ಯಾತಿ ಪಡೆದಿದ್ದಾರೆ.
ಅತ್ಯಂತ ಕಡಿಮೆ ಮೊತ್ತದ ಸಾಲ ನೀಡುವ ಗ್ರಾಮೀಣ ಬ್ಯಾಂಕ್ ಸ್ಥಾಪನೆ ಮಾಡಿದ್ದ ಮೊಹಮದ್ ಯೂನಸ್ ಬಡವರಿಗೆ ಸಾಲ ನೀಡುವ ಮೂಲಕ ದೇಶದ ಆರ್ಥಿಕತೆ ಕುಸಿಯದಂತೆ ನೋಡಿಕೊಂಡಿದ್ದರು. ಇವರ ಸಾಲದ ವ್ಯವಸ್ಥೆಯನ್ನು ಅಭಿವೃದ್ದಿ ಹೊಂದಿದ್ದ ದೊಡ್ಡ ದೇಶಗಳು ಕೂಡ ಪಾಲಿಸಲು ಆರಂಭಿಸಿದ್ದವು.
ಯೂನಸ್ ಯಾರು? ಮೊಹಮ್ಮದ್ ಯೂನಸ್ ಬ್ಯಾಂಕ್ ಉದ್ಯೋಗಿ, 1983ರಲ್ಲಿ ಗ್ರಾಮೀಣ ಬ್ಯಾಂಕ್ಗಳನ್ನು ಸ್ಥಾಪಿಸಿದರು., ಸಣ್ಣ ಸಾಲ ವ್ಯವಸ್ಥೆ ಪರಿಚಯಿಸಿ ಬಡತನ ನಿರ್ಮೂಲನೆಗೆ ಕಾರಣರಾದರು, 2006ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ, 2007ರಲ್ಲಿ ಹೊಸ ರಾಜಕೀಯ ಪಕ್ಷ ರಚಿಸುವುದಾಗಿ ಘೋಷಣೆ, 2008ರಲ್ಲಿ ಯೂನಸ್ ವಿರುದ್ಧ ತನಿಖೆಗೆ ಹಸೀನಾ ಆದೇಶ, ಬಡವರಿಂದ ಹಣ ವಸೂಲಿಗೆ ಬಲ ಪ್ರಯೋಗಿಸಿದ ಆರೋಪ. ಹಸೀನಾರ ವೈರಿ ಎಂಬ ವಾದವೂ ಇದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ