Nobel Prize 2023: ಕ್ಯಾಟಲಿನ್ ಕ್ಯಾರಿಕೊ, ಡ್ರೂ ವೈಸ್‌ಮನ್​​ಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿ

ಕಟಾಲಿನ್ ಕರಿಕೊ ಮತ್ತು ಡ್ರೂ ವೈಸ್‌ಮನ್‌ಗೆ ಜಂಟಿಯಾಗಿ ಇಂದು (ಅ.2) 2023ರ ಶರೀರಶಾಸ್ತ್ರ ಅಥವಾ ವೈದ್ಯಕೀಯ (Physiology or Medicine) ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ. ನ್ಯೂಕ್ಲಿಯೊಸೈಡ್ ಬೇಸ್ ಮಾರ್ಪಾಡುಗಳಿಗೆ ಸಂಬಂಧಿಸಿದ ಅವರ ಸಂಶೋಧನೆಗಳಿಗಾಗಿ ಈ ಗೌರವ ನೀಡಲಾಗಿದೆ.

Nobel Prize 2023: ಕ್ಯಾಟಲಿನ್ ಕ್ಯಾರಿಕೊ, ಡ್ರೂ ವೈಸ್‌ಮನ್​​ಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿ
ಕ್ಯಾಟಲಿನ್ ಕ್ಯಾರಿಕೊ, ಡ್ರೂ ವೈಸ್‌ಮನ್
Follow us
ಅಕ್ಷಯ್​ ಪಲ್ಲಮಜಲು​​
|

Updated on:Oct 02, 2023 | 4:11 PM

ಕಟಾಲಿನ್ ಕರಿಕೊ (Katalin Karikó) ಮತ್ತು ಡ್ರೂ ವೈಸ್‌ಮನ್‌ಗೆ ( Drew Weissman) ಜಂಟಿಯಾಗಿ ಇಂದು (ಅ.2) 2023ರ ಶರೀರಶಾಸ್ತ್ರ ಅಥವಾ ವೈದ್ಯಕೀಯ (Physiology or Medicine) ನೊಬೆಲ್ ಪ್ರಶಸ್ತಿಯನ್ನು (Nobel Prize)ನೀಡಲಾಗಿದೆ. ನ್ಯೂಕ್ಲಿಯೊಸೈಡ್ ಬೇಸ್ ಮಾರ್ಪಾಡುಗಳಿಗೆ ಸಂಬಂಧಿಸಿದ ಅವರ ಸಂಶೋಧನೆಗಳಿಗಾಗಿ ಈ ಗೌರವ ನೀಡಲಾಗಿದೆ. ಈ ಆವಿಷ್ಕಾರವು ಕರೋನವೈರಸ್ ವಿರುದ್ಧ ಪರಿಣಾಮಕಾರಿ MRNA ಲಸಿಕೆಗಳನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡಿತು. ನೊಬೆಲ್ ಸಮಿತಿಯ ಕಾರ್ಯದರ್ಶಿ ಥಾಮಸ್ ಪರ್ಲ್‌ಮನ್ ಕೊರೊಲಿನ್ಸ್ಕಾ ಅವರು ಈ ಪ್ರಶಸ್ತಿಯನ್ನು ನೀಡಿದರು.

2022 ರಲ್ಲಿ ಸ್ವೀಡನ್‌ನ ಸ್ವಾಂಟೆ ಪಾಬೊ ಅವರಿಗೆ ಈ ಕ್ಷೇತ್ರದಲ್ಲಿ ನೊಬೆಲ್​​ ಪ್ರಶಸ್ತಿಯನ್ನಯನ್ನು ನೀಡಲಾಗಿತ್ತು. ಕಟಾಲಿನ್ ಕರಿಕೊ ಅವರು 2022 ರವರೆಗೆ ಬಯೋಎನ್‌ಟೆಕ್‌ನಲ್ಲಿ ಹಿರಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸದ್ದರು. ಆರ್‌ಎನ್‌ಎ ಪ್ರೋಟೀನ್ ಮುಖ್ಯಸ್ಥರಾಗಿದ್ದರು. ನಂತರ ಒಂದು ಸಂಶೋಧನ ಕಂಪನಿಯ ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಅವರು ಹಂಗೇರಿಯ ಸ್ಜೆಡ್ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಇದರ ಜತೆಗೆ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಪೆರೆಲ್‌ಮನ್ ಸ್ಕೂಲ್ ಆಫ್ ಮೆಡಿಸಿನ್‌ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ.

ಇದನ್ನೂ ಓದಿ:  ಬೆನ್ ಬರ್ನಾಂಕೆ, ಡೌಗ್ಲಾಸ್ ಡೈಮಂಡ್ ಮತ್ತು ಫಿಲಿಪ್ ಡೈಬ್ವಿಗ್​ಗೆ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ

ಇನ್ನು ಕಟಾಲಿನ್ ಕರಿಕೊ ಅವರ ಜತೆಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿ ಪಡೆದವರು ಡ್ರೂ ವೈಸ್‌ಮನ್‌. ಇವರು ಪೆರೆಲ್‌ಮನ್ ಲಸಿಕೆ ಸಂಶೋಧನ ಕೇಂದ್ರದ ಪ್ರಾಧ್ಯಾಪಕರಾಗಿದ್ದಾರೆ. ಕಟಾಲಿನ್ ಕರಿಕೊ ಮತ್ತು ಡ್ರೂ ವೈಸ್‌ಮನ್‌ ವೈದ್ಯಕೀಯ ಕ್ಷೇತ್ರದಲ್ಲಿ ಮಾಡಿದ ಸಾಧನೆಗಳು ಅಭೂತಪೂರ್ವ. ಕೊರೊನಾ ಸಮಯದಲ್ಲಿ mRNA ಕೋವಿಡ್ -19 ಲಸಿಕೆಯು ಹೇಗೆ ಪ್ರತಿರಕ್ಷಣಾ ವ್ಯವಸ್ಥೆ ಉಂಟು ಮಾಡುತ್ತದೆ ಎಂಬುದನ್ನು ಸಂಶೋಧನೆ ನಡೆಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:43 pm, Mon, 2 October 23

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ