ಕಟಾಲಿನ್ ಕರಿಕೊ (Katalin Karikó) ಮತ್ತು ಡ್ರೂ ವೈಸ್‌ಮನ್‌ಗೆ ( Drew Weissman) ಜಂಟಿಯಾಗಿ ಇಂದು (ಅ.2) 2023ರ ಶರೀರಶಾಸ್ತ್ರ ಅಥವಾ ವೈದ್ಯಕೀಯ (Physiology or Medicine) ನೊಬೆಲ್ ಪ್ರಶಸ್ತಿಯನ್ನು (Nobel Prize)ನೀಡಲಾಗಿದೆ. ನ್ಯೂಕ್ಲಿಯೊಸೈಡ್ ಬೇಸ್ ಮಾರ್ಪಾಡುಗಳಿಗೆ ಸಂಬಂಧಿಸಿದ ಅವರ ಸಂಶೋಧನೆಗಳಿಗಾಗಿ ಈ ಗೌರವ ನೀಡಲಾಗಿದೆ. ಈ ಆವಿಷ್ಕಾರವು ಕರೋನವೈರಸ್ ವಿರುದ್ಧ ಪರಿಣಾಮಕಾರಿ MRNA ಲಸಿಕೆಗಳನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡಿತು. ನೊಬೆಲ್ ಸಮಿತಿಯ ಕಾರ್ಯದರ್ಶಿ ಥಾಮಸ್ ಪರ್ಲ್‌ಮನ್ ಕೊರೊಲಿನ್ಸ್ಕಾ ಅವರು ಈ ಪ್ರಶಸ್ತಿಯನ್ನು ನೀಡಿದರು.
2022 ರಲ್ಲಿ ಸ್ವೀಡನ್‌ನ ಸ್ವಾಂಟೆ ಪಾಬೊ ಅವರಿಗೆ ಈ ಕ್ಷೇತ್ರದಲ್ಲಿ ನೊಬೆಲ್ ಪ್ರಶಸ್ತಿಯನ್ನಯನ್ನು ನೀಡಲಾಗಿತ್ತು. ಕಟಾಲಿನ್ ಕರಿಕೊ ಅವರು 2022 ರವರೆಗೆ ಬಯೋಎನ್‌ಟೆಕ್‌ನಲ್ಲಿ ಹಿರಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸದ್ದರು. ಆರ್‌ಎನ್‌ಎ ಪ್ರೋಟೀನ್ ಮುಖ್ಯಸ್ಥರಾಗಿದ್ದರು. ನಂತರ ಒಂದು ಸಂಶೋಧನ ಕಂಪನಿಯ ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಅವರು ಹಂಗೇರಿಯ ಸ್ಜೆಡ್ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಇದರ ಜತೆಗೆ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಪೆರೆಲ್‌ಮನ್ ಸ್ಕೂಲ್ ಆಫ್ ಮೆಡಿಸಿನ್‌ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ.
BREAKING NEWS
The 2023 #NobelPrize in Physiology or Medicine has been awarded to Katalin Karikó and Drew Weissman for their discoveries concerning nucleoside base modifications that enabled the development of effective mRNA vaccines against COVID-19. pic.twitter.com/Y62uJDlNMj— The Nobel Prize (@NobelPrize) October 2, 2023
ಇದನ್ನೂ ಓದಿ: ಬೆನ್ ಬರ್ನಾಂಕೆ, ಡೌಗ್ಲಾಸ್ ಡೈಮಂಡ್ ಮತ್ತು ಫಿಲಿಪ್ ಡೈಬ್ವಿಗ್ಗೆ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ
ಇನ್ನು ಕಟಾಲಿನ್ ಕರಿಕೊ ಅವರ ಜತೆಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿ ಪಡೆದವರು ಡ್ರೂ ವೈಸ್‌ಮನ್. ಇವರು ಪೆರೆಲ್‌ಮನ್ ಲಸಿಕೆ ಸಂಶೋಧನ ಕೇಂದ್ರದ ಪ್ರಾಧ್ಯಾಪಕರಾಗಿದ್ದಾರೆ. ಕಟಾಲಿನ್ ಕರಿಕೊ ಮತ್ತು ಡ್ರೂ ವೈಸ್‌ಮನ್ ವೈದ್ಯಕೀಯ ಕ್ಷೇತ್ರದಲ್ಲಿ ಮಾಡಿದ ಸಾಧನೆಗಳು ಅಭೂತಪೂರ್ವ. ಕೊರೊನಾ ಸಮಯದಲ್ಲಿ mRNA ಕೋವಿಡ್ -19 ಲಸಿಕೆಯು ಹೇಗೆ ಪ್ರತಿರಕ್ಷಣಾ ವ್ಯವಸ್ಥೆ ಉಂಟು ಮಾಡುತ್ತದೆ ಎಂಬುದನ್ನು ಸಂಶೋಧನೆ ನಡೆಸಿದ್ದಾರೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:43 pm, Mon, 2 October 23