Nobel Prize in Chemistry 2021: ಬೆಂಜಮಿನ್ ಲಿಸ್ಟ್, ಡೇವಿಡ್ ಮ್ಯಾಕ್ಮಿಲನ್ಗೆ ರಸಾಯನಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿ
Nobel Prize 2021: ಜರ್ಮನಿಯ ಬೆಂಜಮಿನ್ ಲಿಸ್ಟ್ ಹಾಗೂ ಇಂಗ್ಲೆಂಡ್ನ ಡೇವಿಡ್ ಡಬ್ಲುಸಿ ಮ್ಯಾಕ್‌ಮಿಲನ್ ಕೆಮಿಸ್ಟ್ರಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ನೊಬೆಲ್ ಪ್ರಶಸ್ತಿ ನೀಡಲಾಗಿದೆ.
ರಸಾಯನ ಶಾಸ್ತ್ರ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಘೋಷಿಸಲಾಗಿದ್ದು, ಜರ್ಮನಿಯ ಬೆಂಜಮಿನ್ ಲಿಸ್ಟ್ ಹಾಗೂ ಇಂಗ್ಲೆಂಡ್ನ ಡೇವಿಡ್ ಡಬ್ಲುಸಿ ಮ್ಯಾಕ್‌ಮಿಲನ್ ಕೆಮಿಸ್ಟ್ರಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ನೊಬೆಲ್ ಪ್ರಶಸ್ತಿ ನೀಡಲಾಗಿದೆ. ಅಸಿಮ್ಮೆಟ್ರಿಕ್ ಆರ್ಗನೊಕಟಲಿಸಿಸ್ ಅಭಿವೃದ್ಧಿ ಪಡಿಸಿದ್ದಕ್ಕಾಗಿ ಈ ಇಬ್ಬರಿಗೆ ಈ ಬಾರಿಯ ನೊಬೆಲ್ ಪ್ರಶಸ್ತಿ ಘೋಷಿಸಲಾಗಿದೆ.
ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಇಂದು ರಸಾಯನ ಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಘೋಷಿಸಿದೆ. ಜರ್ಮನಿಯ ಬೆಂಜಮಿನ್ ಲಿಸ್ಟ್ ಮತ್ತು ಯುಕೆಯ ಡೇವಿಡ್ ಮ್ಯಾಕ್‌ಮಿಲನ್ 2000ರಲ್ಲಿ ಸ್ವತಂತ್ರವಾಗಿ ಕ್ಯಾಟಲಿಸಿಸ್ನ ಹೊಸ ಮಾರ್ಗವನ್ನು ಅಭಿವೃದ್ಧಿಪಡಿಸಿದ್ದರು.
ಸಂಶೋಧಕರು ಈಗ ಹೊಸ ಔಷಧಿಗಳಿಂದ ಹಿಡಿದು ಸೌರ ಕೋಶಗಳಲ್ಲಿ ಬೆಳಕನ್ನು ಸೆರೆ ಹಿಡಿಯಬಲ್ಲ ಅಣುಗಳವರೆಗೆ ಏನು ಬೇಕಾದರೂ ಮಾಡಬಹುದು ಎಂಬುದನ್ನು ತೋರಿಸಿಕೊಡುತ್ತಿದ್ದಾರೆ. ಈ ರೀತಿಯಾಗಿ, ಆರ್ಗನೊಕಟಲಿಸ್ಟ್ಗಳು ಮನುಷ್ಯಕುಲಕ್ಕೆ ಅನುಕೂವಾಗುವಂತಹ ಸಂಶೋಧನೆಗಳನ್ನು ಮಾಡುತ್ತಿದ್ದಾರೆ ಎಂದು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಮೆಚ್ಚುಗೆ ವ್ಯಕ್ತಪಡಿಸಿದೆ.
BREAKING NEWS: The 2021 #NobelPrize in Chemistry has been awarded to Benjamin List and David W.C. MacMillan “for the development of asymmetric organocatalysis.” pic.twitter.com/SzTJ2Chtge
— The Nobel Prize (@NobelPrize) October 6, 2021
ನಿನ್ನೆಯಷ್ಟೇ 2021ನೇ ಸಾಲಿನ ಭೌತಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿಯನ್ನು ಸೈಕುರೊ ಮನಾಬೆ, ಕ್ಲಾಸ್ ಹ್ಯಾಸೆಲ್ಮನ್, ಪ್ಯಾರಿಸಿಗೆ ಘೋಷಿಸಲಾಗಿತ್ತು. ಜಪಾನ್, ಜರ್ಮನಿ ಮತ್ತು ಇಟಲಿಯ ಈ ಮೂವರು ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ ಘೋಷಿಸಲಾಗಿತ್ತು. ಇದೀಗ ರಸಾಯನ ಶಾಸ್ತ್ರ ವಿಭಾಗದಲ್ಲೂ ಜರ್ಮನಿಯ ವಿಜ್ಞಾನಿಗೆ ನೊಬೆಲ್ ಪ್ರಶಸ್ತಿ ಬಂದಿದೆ.
ಇದನ್ನೂ ಓದಿ: Nobel Prize 2021: ಪ್ರಸಕ್ತ ವರ್ಷದ ಭೌತಶಾಸ್ತ್ರ ಕ್ಷೇತ್ರದ ನೊಬೆಲ್ ಪ್ರಶಸ್ತಿ ಈ ಮೂವರು ವಿಜ್ಞಾನಿಗಳಿಗೆ
Nobel Prize 2021 ಅಮೆರಿಕದ ಡೇವಿಡ್ ಜೂಲಿಯಸ್ ಮತ್ತು ಆರ್ಡೆಮ್ ಪಟಪೌಟಿಯನ್ಗೆ 2021ರ ವೈದ್ಯಕೀಯ ನೊಬೆಲ್ ಪ್ರಶಸ್ತಿ
Published On - 5:21 pm, Wed, 6 October 21