AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷದ ನೊಬೆಲ್​ ಪ್ರಶಸ್ತಿ ಬಹುಮಾನದ ಮೊತ್ತ ಹೆಚ್ಚಳ, ಎಷ್ಟು?

ಭೌತಶಾಸ್ತ್ರ, ರಸಾಯನ ಶಾಸ್ತ್ರ, ಅರ್ಥಶಾಸ್ತ್ರ, ಸಾಹಿತ್ಯ, ಶಾಂತಿ ಮತ್ತು ವೈದ್ಯಶಾಸ್ತ್ರದ ಕ್ಷೇತ್ರಗಳಲ್ಲಿ ಅತ್ಯುತ್ತಮ ಕೊಡುಗೆ ನೀಡಿದವರಿಗೆ ಇಡೀ ವಿಶ್ವದಲ್ಲಿ ಸಿಗುವ ಸರ್ವೋತ್ತಮ ಪ್ರಶಸ್ತಿಯೆಂದರೆ ಅದು ನೊಬೆಲ್​ ಪ್ರಶಸ್ತಿ ಎಂದರೆ ತಪ್ಪಾಗಲಾರದು. ಸರ್​ ಸಿವಿ ರಾಮನ್, ರವೀಂದ್ರನಾಥ​ ಠಾಗೋರ್​ರಿಂದ ಹಿಡಿದು ಅಭಿಜಿತ್​ ಬ್ಯಾನರ್ಜಿರಂಥ ದೈತ್ಯ ಭಾರತೀಯ ಪ್ರತಿಭೆಗಳೂ ಈ ಪ್ರಶಸ್ತಿಯಿಂದ ಪುರಸ್ಕೃತರಾಗಿದ್ದಾರೆ. ನೊಬೆಲ್ ಪ್ರಶಸ್ತಿ ಪುರಸ್ಕೃತರಿಗೆ ಪದಕದ ಜೊತೆಗೆ ತಮ್ಮ ಸಂಶೋಧನೆಯನ್ನು ಮುಂದುವರಿಸಲು ಸೂಕ್ತ ನಗದು ಬಹುಮಾನ ಸಹ ನೀಡಲಾಗುತ್ತದೆ. ಅಂತೆಯೇ, ಈ ಬಾರಿಯ ವಿಜೇತರಿಗೂ ನಗದು ಬಹುಮಾನ […]

ಈ ವರ್ಷದ ನೊಬೆಲ್​ ಪ್ರಶಸ್ತಿ ಬಹುಮಾನದ ಮೊತ್ತ ಹೆಚ್ಚಳ, ಎಷ್ಟು?
ನೊಬೆಲ್ ಪುರಸ್ಕಾರ
KUSHAL V
| Edited By: ಸಾಧು ಶ್ರೀನಾಥ್​|

Updated on:Sep 25, 2020 | 11:53 AM

Share

ಭೌತಶಾಸ್ತ್ರ, ರಸಾಯನ ಶಾಸ್ತ್ರ, ಅರ್ಥಶಾಸ್ತ್ರ, ಸಾಹಿತ್ಯ, ಶಾಂತಿ ಮತ್ತು ವೈದ್ಯಶಾಸ್ತ್ರದ ಕ್ಷೇತ್ರಗಳಲ್ಲಿ ಅತ್ಯುತ್ತಮ ಕೊಡುಗೆ ನೀಡಿದವರಿಗೆ ಇಡೀ ವಿಶ್ವದಲ್ಲಿ ಸಿಗುವ ಸರ್ವೋತ್ತಮ ಪ್ರಶಸ್ತಿಯೆಂದರೆ ಅದು ನೊಬೆಲ್​ ಪ್ರಶಸ್ತಿ ಎಂದರೆ ತಪ್ಪಾಗಲಾರದು. ಸರ್​ ಸಿವಿ ರಾಮನ್, ರವೀಂದ್ರನಾಥ​ ಠಾಗೋರ್​ರಿಂದ ಹಿಡಿದು ಅಭಿಜಿತ್​ ಬ್ಯಾನರ್ಜಿರಂಥ ದೈತ್ಯ ಭಾರತೀಯ ಪ್ರತಿಭೆಗಳೂ ಈ ಪ್ರಶಸ್ತಿಯಿಂದ ಪುರಸ್ಕೃತರಾಗಿದ್ದಾರೆ.

ನೊಬೆಲ್ ಪ್ರಶಸ್ತಿ ಪುರಸ್ಕೃತರಿಗೆ ಪದಕದ ಜೊತೆಗೆ ತಮ್ಮ ಸಂಶೋಧನೆಯನ್ನು ಮುಂದುವರಿಸಲು ಸೂಕ್ತ ನಗದು ಬಹುಮಾನ ಸಹ ನೀಡಲಾಗುತ್ತದೆ. ಅಂತೆಯೇ, ಈ ಬಾರಿಯ ವಿಜೇತರಿಗೂ ನಗದು ಬಹುಮಾನ ನೀಡಲಾಗುವುದು. ಅದರೆ, ಈ ಬಾರಿಯ ವಿಶೇಷವೆಂದರೆ, ಪ್ರಶಸ್ತಿ ಪುರಸ್ಕೃತರಿಗೆ ನೀಡುವ ನಗದು ಬಹುಮಾನದ ಮೊತ್ತವನ್ನು ಹೆಚ್ಚಿಸಲಾಗಿದ್ದು ಈ ವರ್ಷದ ವಿಜೇತರಿಗೆ ಹಿಂದೆಂದಿಗಿಂತ ಹೆಚ್ಚಾಗಿ ಸುಮಾರು 8.14 ಕೋಟಿ ರೂಪಾಯಿ ಮೊತ್ತವನ್ನು ನೀಡಲಾಗುವುದು. ಈ ಮೊತ್ತ ಕಳೆದ ವರ್ಷಕ್ಕಿಂತ ಶೇಕಡಾ 11.11 ರಷ್ಟು ಹೆಚ್ಚಳವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ನೊಬೆಲ್​ ಪ್ರತಿಷ್ಠಾನವು ಕಳೆದ ವರ್ಷಗಳಿಗಿಂತ ಈ ಬಾರಿ ನಮ್ಮ ಖರ್ಚು ಮತ್ತು ಬಂಡವಾಳದ ಪರಿಸ್ಥಿತಿ ಸ್ಥಿರವಾಗಿದೆ. ಹಾಗಾಗಿ, ನಾವು ಬಹುಮಾನದ ಮೊತ್ತವನ್ನು ಹೆಚ್ಚಿಸಲು ನಿರ್ಧಾರ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.

Published On - 11:39 am, Fri, 25 September 20

Follow Us
KUSHAL V
KUSHAL V
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ