AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಗೆ ಗೊತ್ತೇ ಇಲ್ಲ; ಭಾರತದ ವಿರುದ್ಧ ಚೀನಾ ಯುದ್ಧ ವಿಮಾನ ಬಳಸಿದ್ದೇವೆಂಬ ಪಾಕ್ ಹೇಳಿಕೆಗೆ ಬೀಜಿಂಗ್ ಪ್ರತಿಕ್ರಿಯೆ

ಭಾರತದ ವಿರುದ್ಧ ಚೀನಾದ ಜೆಟ್‌ಗಳನ್ನು ಬಳಸಲಾಗುತ್ತಿದೆ ಎಂಬ ಪಾಕಿಸ್ತಾನದ ಹೇಳಿಕೆಗೆ ಚೀನಾ ಪ್ರತಿಕ್ರಿಯಿಸಿದೆ. 'ಈ ವಿಷಯದ ಬಗ್ಗೆ ತಿಳಿದಿಲ್ಲ' ಎಂದು ಚೀನಾ ಹೇಳಿದೆ. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ನಡೆಸಿದ ದಾಳಿಗೆ ಪ್ರತಿಯಾಗಿ ಚೀನಾದ ಜೆಟ್‌ಗಳನ್ನು ಬಳಸಲಾಗಿದೆ ಎಂದು ಪಾಕಿಸ್ತಾನ ಹೇಳಿಕೊಂಡಿತ್ತು. ಈ ವಿಷಯದ ಬಗ್ಗೆ ಚೀನಾ ವಿದೇಶಾಂಗ ಕಾರ್ಯದರ್ಶಿ ಈ ವಿಷಯದ ಬಗ್ಗೆ ಮಾತನಾಡುತ್ತಾ, ಈ ವಿಷಯದ ಬಗ್ಗೆ ತಮಗೇನೂ ತಿಳಿದಿಲ್ಲ ಎಂದು ಹೇಳಿದ್ದಾರೆ.

ನಮಗೆ ಗೊತ್ತೇ ಇಲ್ಲ; ಭಾರತದ ವಿರುದ್ಧ ಚೀನಾ ಯುದ್ಧ ವಿಮಾನ ಬಳಸಿದ್ದೇವೆಂಬ ಪಾಕ್ ಹೇಳಿಕೆಗೆ ಬೀಜಿಂಗ್ ಪ್ರತಿಕ್ರಿಯೆ
Lin Jian
ಸುಷ್ಮಾ ಚಕ್ರೆ
|

Updated on: May 08, 2025 | 10:16 PM

Share

ಬೀಜಿಂಗ್, ಮೇ 8: ಭಾರತದ ಮೇಲೆ ದಾಳಿ ನಡೆಸಲು ಪಾಕಿಸ್ತಾನವು ಚೀನಾ ನಿರ್ಮಿತ ಜೆ-10ಸಿ ಫೈಟರ್ ಜೆಟ್‌ಗಳನ್ನು ಬಳಸಿದೆ ಎಂಬ ಪಾಕಿಸ್ತಾನದ (Pakistan) ಹೇಳಿಕೆಗೆ ಪ್ರತಿಕ್ರಿಯಿಸಿರುವ ಚೀನಾದ ವಿದೇಶಾಂಗ ಸಚಿವಾಲಯ ಈ ಬಗ್ಗೆ ನಮಗೇನೂ ಗೊತ್ತೇ ಇಲ್ಲ ಎಂದು ಹೇಳಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಭಾರತೀಯ ಯುದ್ಧವಿಮಾನಗಳನ್ನು ಹೊಡೆದುರುಳಿಸಲು ಜೆ-10ಸಿ ಜೆಟ್‌ಗಳನ್ನು ಬಳಸಿದ್ದೇವೆ ಎಂದು ಹೇಳಿಕೊಂಡ ನಂತರ ಚೀನಾ ಈ ಪ್ರತಿಕ್ರಿಯೆ ನೀಡಿದೆ. ಈ ಮೂಲಕ ಪಾಕಿಸ್ತಾನದ ಹೇಳಿಕೆಯಿಂದ ಚೀನಾ ಅಂತರ ಕಾಯ್ದುಕೊಂಡಿದೆ.

ಈ ಬಗ್ಗೆ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಲಿನ್ ಜಿಯಾನ್ ಬೀಜಿಂಗ್‌ನಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ್ದು, “ಈ ವಿಷಯದ ಬಗ್ಗೆ ತಮಗೆ ಏನೂ ತಿಳಿದಿಲ್ಲ” ಎಂದು ಹೇಳಿದರು.

ಭಾರತದ ಮಿಲಿಟರಿ ದಾಳಿಗೆ ಪ್ರತೀಕಾರವಾಗಿ ಭಾರತದ ವಿರುದ್ಧ ಚೀನಾದ ಜೆಟ್‌ಗಳನ್ನು ಬಳಸಲಾಗುತ್ತಿದೆ ಎಂಬ ಪಾಕಿಸ್ತಾನದ ಹೇಳಿಕೆಗೆ ಚೀನಾ ಇಂದು ಪ್ರತಿಕ್ರಿಯಿಸಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ಮಾಡಿದೆ. ಆಪರೇಷನ್ ಸಿಂಧೂರ್ ಎಂದು ಹೆಸರಿಸಲಾದ ಈ ದಾಳಿಯು ಹಲವಾರು ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ಮಾಡಿದೆ. ಭಾರತದ ವಿರುದ್ಧದ ದಾಳಿಗಳಿಗೆ ಪ್ರತಿಕ್ರಿಯಿಸಲು ಚೀನಾದ ಜೆಟ್‌ಗಳನ್ನು ಬಳಸಲಾಗಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ.

ಇದನ್ನೂ ಓದಿ: ಪಾಕಿಸ್ತಾನ ದಾಳಿಯನ್ನು ನಿಲ್ಲಿಸದಿದ್ದರೆ ಭಾರತ ಉತ್ತರ ಕೊಡುತ್ತಲೇ ಇರುತ್ತದೆ; ವಿದೇಶಾಂಗ ಸಚಿವಾಲಯ

ಶಾಂತಿಗಾಗಿ ಚೀನಾ ಮನವಿ:

ಪಹಲ್ಗಾಮ್ ದಾಳಿಯ ನಂತರ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಚೀನಾ ಭಾರತ ಮತ್ತು ಪಾಕಿಸ್ತಾನ ಎರಡೂ ಶಾಂತಿಯಿಂದ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಒತ್ತಾಯಿಸಿತು. “ಶಾಂತಿ ಮತ್ತು ಸ್ಥಿರತೆಯ ವಿಶಾಲ ಹಿತಾಸಕ್ತಿಯಲ್ಲಿ ಕಾರ್ಯನಿರ್ವಹಿಸಲು, ವಿಶ್ವಸಂಸ್ಥೆಯ ಚಾರ್ಟರ್ ಸೇರಿದಂತೆ ಅಂತರರಾಷ್ಟ್ರೀಯ ಕಾನೂನನ್ನು ಪಾಲಿಸಲು, ಶಾಂತವಾಗಿರಲು, ಸಂಯಮವನ್ನು ಕಾಪಾಡಿಕೊಳ್ಳಲು ಮತ್ತು ಪರಿಸ್ಥಿತಿಯನ್ನು ಇನ್ನಷ್ಟು ಜಟಿಲಗೊಳಿಸುವ ಕ್ರಮಗಳನ್ನು ತೆಗೆದುಕೊಳ್ಳದಂತೆ ನಾವು ಎರಡೂ ದೇಶದವರನ್ನು ಒತ್ತಾಯಿಸುತ್ತೇವೆ” ಎಂದು ಲಿನ್ ಜಿಯಾನ್ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?
ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?