AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋಹನ್ ಭಾಗವತ್​ರ ನ್ಯೂಯಾರ್ಕ್ ಸಮಾವೇಶಕ್ಕೆ ಬೆಂಬಲವಿಲ್ಲ: ಮೇಯರ್ ಜೋಹ್ರಾನ್ ಮಮ್ದಾನಿ

ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿ ಅವರು ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ನಡೆಯಲಿರುವ ಮೋಹನ್ ಭಾಗವತ್ ಅವರ ಆರ್‌ಎಸ್‌ಎಸ್ ಸಮಾವೇಶಕ್ಕೆ ಬಹಿರಂಗ ಅಸಮ್ಮತಿ ವ್ಯಕ್ತಪಡಿಸಿದ್ದಾರೆ. ಹೊರಗಿಡುವ ಸಿದ್ಧಾಂತಗಳ ಕುರಿತು ಕಳವಳ ವ್ಯಕ್ತಪಡಿಸಿದ ಅವರು, ಖಾಸಗಿ ಕಾರ್ಯಕ್ರಮ ರದ್ದುಪಡಿಸುವ ಅಧಿಕಾರವಿಲ್ಲ ಎಂದಿದ್ದಾರೆ. ಈ ಸಮಾವೇಶವನ್ನು ಕೆಲವು ಮಾನವ ಹಕ್ಕುಗಳ ಸಂಸ್ಥೆಗಳು ವಿರೋಧಿಸಿದ್ದು, ಆರ್‌ಎಸ್‌ಎಸ್ ಇದನ್ನು ಭಾರತೀಯ ಸಂಸ್ಕೃತಿ ಬಲಪಡಿಸುವ ಕಾರ್ಯಕ್ರಮ ಎಂದಿದೆ.

ಮೋಹನ್ ಭಾಗವತ್​ರ ನ್ಯೂಯಾರ್ಕ್ ಸಮಾವೇಶಕ್ಕೆ ಬೆಂಬಲವಿಲ್ಲ: ಮೇಯರ್ ಜೋಹ್ರಾನ್ ಮಮ್ದಾನಿ
ಮೋಹನ್ ಭಾಗವತ್
ನಯನಾ ರಾಜೀವ್
|

Updated on: Aug 26, 2026 | 11:42 AM

Share

ನ್ಯೂಯಾರ್ಕ್, ಆಗಸ್ಟ್ 26: ಅಮೆರಿಕದ ಮ್ಯಾನ್‌ಹ್ಯಾಟನ್‌ನಲ್ಲಿರುವ ಪ್ರತಿಷ್ಠಿತ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಡಾ. ಮೋಹನ್ ಭಾಗವತ್(Mohan Bhagwat) ಅವರ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ನಗರದ ಮೊದಲ ಭಾರತೀಯ-ಅಮೆರಿಕನ್ ಮೇಯರ್ ಜೋಹ್ರಾನ್ ಮಮ್ದಾನಿ ಬಹಿರಂಗ ಅಸಮ್ಮತಿ ವ್ಯಕ್ತಪಡಿಸಿದ್ದಾರೆ.

ಸಂಘದ ಶತಮಾನೋತ್ಸವ ಜಾಗತಿಕ ಸಂಪರ್ಕ ಕಾರ್ಯಕ್ರಮದ ಭಾಗವಾಗಿ ಮೋಹನ್ ಭಾಗವತ್ ಅವರು ಅಮೆರಿಕ, ಕೆನಡಾ ಮತ್ತು ಬ್ರಿಟನ್ ಪ್ರವಾಸ ಕೈಗೊಂಡಿದ್ದು, ಆಗಸ್ಟ್ 29 ರ ಶನಿವಾರ ನ್ಯೂಯಾರ್ಕ್‌ನಲ್ಲಿ ಸುಮಾರು 5 ಸಾವಿರ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಬೆಂಬಲವಿಲ್ಲ, ಆದರೆ ರದ್ದುಪಡಿಸಲಾಗದು: ನಾನು ಈ ರ್ಯಾಲಿಯನ್ನು ಬೆಂಬಲಿಸುವುದಿಲ್ಲ. ಆದರೆ ಖಾಸಗಿಯಾಗಿ ಆಯೋಜಿಸಲಾದ ಕಾರ್ಯಕ್ರಮವನ್ನು ರದ್ದುಪಡಿಸುವ ಅಧಿಕಾರ ನಗರ ಆಡಳಿತಕ್ಕೆ ಇದೆಯೋ ಇಲ್ಲವೋ ಎಂಬುದು ನನಗೆ ಸ್ಪಷ್ಟವಿಲ್ಲ ಎಂದು ಮಾಧ್ಯಮಗೋಷ್ಟಿಯಲ್ಲಿ ಮಮ್ದಾನಿ ತಿಳಿಸಿದ್ದಾರೆ.

ನನ್ನ ಕುಟುಂಬ ನನಗೆ ಕಲಿಸಿದ ಭಾರತದ ಕಲ್ಪನೆಯು ಜಾತ್ಯತೀತ ಗಣರಾಜ್ಯ ಮತ್ತು ಪ್ರತಿಯೊಬ್ಬ ವ್ಯಕ್ತಿಯನ್ನೂ ಸಮಾನವಾಗಿ ಒಳಗೊಳ್ಳುವ ಬಹುತ್ವ ಸಮಾಜದ್ದಾಗಿತ್ತು. ಆದರೆ ಜನರನ್ನು ಹೊರಗಿಡುವ ಸಿದ್ಧಾಂತದ ಬೆಳವಣಿಗೆಯನ್ನು ನೋಡುವುದು ಅತ್ಯಂತ ಕಳವಳಕಾರಿ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮತ್ತಷ್ಟು ಓದಿ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೆನಡಾ ಭೇಟಿಗೆ ಬೆಂಬಲ; ಪ್ರವೇಶ ತಡೆಯುವ ಯತ್ನಕ್ಕೆ 100ಕ್ಕೂ ಹೆಚ್ಚು ಹಿಂದೂ ಸಂಘಟನೆಗಳ ವಿರೋಧ

ಈ ಸಮಾವೇಶವನ್ನು ‘ಅಮೆರಿಕನ್ ಹಿಂದೂಸ್ ಫಾರ್ ಎಂಗೇಜ್‌ಮೆಂಟ್ ಅಂಡ್ ಡೈಲಾಗ್’ ಆಯೋಜಿಸುತ್ತಿದ್ದು, ಇದು ಧರ್ಮ-ಜಾತಿಗಳ ಭೇದವಿಲ್ಲದೆ ಸಾರ್ವತ್ರಿಕ ಏಕತೆ, ಪರಸ್ಪರ ಗೌರವ ಮತ್ತು ‘ವಸುಧೈವ ಕುಟುಂಬಕಂ’ ಸಂದೇಶವನ್ನು ಉತ್ತೇಜಿಸುವ ಕಾರ್ಯಕ್ರಮವಾಗಿದೆ ಎಂದು ಆಯೋಜಕರು ಸ್ಪಷ್ಟಪಡಿಸಿದ್ದಾರೆ.

ಹಿಂದುಸ್ ಫಾರ್ ಹ್ಯೂಮನ್ ರೈಟ್ಸ್, ಇಂಡಿಯನ್ ಅಮೆರಿಕನ್ ಮುಸ್ಲಿಂ ಕೌನ್ಸಿಲ್ ಸೇರಿದಂತೆ ಕೆಲವು ಮಾನವ ಹಕ್ಕುಗಳ ಸಂಸ್ಥೆಗಳು ನ್ಯೂಯಾರ್ಕ್ ಸಿಟಿ ಹಾಲ್ ಎದುರು ಪ್ರತಿಭಟನೆ ನಡೆಸಿ, ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್ ಆಡಳಿತವು ಈ ಕಾರ್ಯಕ್ರಮವನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿವೆ.

ಆರ್‌ಎಸ್‌ಎಸ್‌ನ 100 ವರ್ಷಗಳ ಪಯಣದ ಅಂಗವಾಗಿ ವಿದೇಶಗಳಲ್ಲಿ ನೆಲೆಸಿರುವ ಭಾರತೀಯ ಸಮುದಾಯದೊಂದಿಗೆ ಸಾಂಸ್ಕೃತಿಕ ಬಾಂಧವ್ಯ ಗಟ್ಟಿಗೊಳಿಸಲು ಈ ಪ್ರವಾಸ ಆಯೋಜಿಸಲಾಗಿದೆ. ಆರ್‌ಎಸ್‌ಎಸ್ ಯಾವುದೇ ಸಮುದಾಯದ ವಿರೋಧಿಯಲ್ಲ,ಇದು ಭಾರತೀಯ ಸಂಸ್ಕೃತಿ ಮತ್ತು ರಾಷ್ಟ್ರೀಯ ಏಕತೆಯನ್ನು ಬಲಪಡಿಸುವ ಸಾಂಸ್ಕೃತಿಕ ಚಳವಳಿಯಾಗಿದೆ ಎಂದು ಸಂಘದ ಮುಖಂಡರು ತಮ್ಮ ಮೇಲಿನ ಟೀಕೆಗಳನ್ನು ತಳ್ಳಿಹಾಕಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ