Omicron: ಬ್ರಿಟನ್​ನಲ್ಲಿ ತೀವ್ರವಾಗಿ ಹರಡುತ್ತಿರುವ ಒಮಿಕ್ರಾನ್; 25,000 ತಲುಪಿದ ಸೋಂಕಿತರ ಸಂಖ್ಯೆ

Omicron raises in Britain: ಬ್ರಿಟನ್​ನಲ್ಲಿ ಒಮಿಕ್ರಾನ್ ಸೋಂಕು ತೀವ್ರಗತಿಯಲ್ಲಿ ಏರುತ್ತಿದ್ದು, ಆತಂಕ ಹೆಚ್ಚಿಸಿದೆ. ಕಳೆದ 24 ಗಂಟೆಯ ಅವಧಿಯಲ್ಲಿ 10,000ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ.

Omicron: ಬ್ರಿಟನ್​ನಲ್ಲಿ ತೀವ್ರವಾಗಿ ಹರಡುತ್ತಿರುವ ಒಮಿಕ್ರಾನ್; 25,000 ತಲುಪಿದ ಸೋಂಕಿತರ ಸಂಖ್ಯೆ
ಇಂಗ್ಲೆಂಡ್​ನಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು, ಜನರು ಖರೀದಿಗೆ ಮಾಸ್ಕ್ ಧರಿಸಿ ತೆರಳುತ್ತಿರುವ ದೃಶ್ಯ (Credits: AFP)
Follow us
TV9 Web
| Updated By: shivaprasad.hs

Updated on:Dec 19, 2021 | 10:12 AM

ಬ್ರಿಟನ್: ಕೊರೊನಾ ವೈರಸ್‌ನ ಒಮಿಕ್ರಾನ್ ರೂಪಾಂತರವು ಬ್ರಿಟನ್​ನಲ್ಲಿ (UK) ಅತ್ಯಂತ ವೇಗವಾಗಿ ಹರಡುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಬ್ರಿಟಿಷ್ ಸರ್ಕಾರದ ಅಂಕಿಅಂಶಗಳ ಪ್ರಕಾರ, ಕೇವಲ 24 ಗಂಟೆಗಳ ಅವಧಿಯಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಹೆಚ್ಚಾಗಿದೆ. ಇದಲ್ಲದೆ, ಲಂಡನ್‌ನ ಮೇಯರ್ ಸಾದಿಕ್ ಖಾನ್ ಅವರು ನಗರದ ಆಸ್ಪತ್ರೆಗಳಿಗೆ ಒಮಿಕ್ರಾನ್ ಸೋಂಕನ್ನು ನಿರ್ವಹಿಸಲು ಸಹಾಯವಾಗುವ ದೃಷ್ಟಿಯಿಂದ ಇದನ್ನು ಪ್ರಮುಖ ಘಟನೆ ಎಂದು ಎಚ್ಚರಿಕೆ ಘೋಷಿಸಿದ್ದಾರೆ. ಶುಕ್ರವಾರ ಸಂಜೆಯ ವೇಳೆಗೆ ಬ್ರಿಟನ್‌ನಾದ್ಯಂತ ದಾಖಲಾದ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಸುಮಾರು 25,000 ಕ್ಕೆ ತಲುಪಿದೆ ಎಂದು ಬ್ರಿಟನ್ ಆರೋಗ್ಯ ಭದ್ರತಾ ಸಂಸ್ಥೆ (ಯುಕೆಎಚ್‌ಎಸ್‌ಎ) ಹೇಳಿತ್ತು. ಕಳೆದ 24 ಗಂಟೆಗಳಲ್ಲಿ ಸುಮಾರು 10,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವುದಕ್ಕೆ ಸಾಕ್ಷಿಯಾಗಿದೆ.

ಒಮಿಕ್ರಾನ್​ ಸೋಂಕಿಗೆ ಒಳಗಾಗಿ ಸಾವನ್ನಪ್ಪಿದ್ದಾರೆ ಎನ್ನಲಾದ 7 ಜನರ ಮರಣ ಸರ್ಕಾರದ ಚಿಂತೆಯನ್ನು ಹೆಚ್ಚಿಸಿದೆ. ಅಲ್ಲದೇ ಆಸ್ಪತ್ರೆಗೆ ದಾಖಲಾಗುತ್ತಿರುವವರ ಪ್ರಮಾಣದಲ್ಲೂ ಏರಿಕೆಯಾಗಿದ್ದು, ಒಮಿಕ್ರಾನ್​ನಿಂದಾಗಿ ಇದುವರೆಗೆ 85 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮೊದಲು ಈ ಸಂಖ್ಯೆ 65ರಲ್ಲಿತ್ತು. ಒಟ್ಟಾರೆ ಆಸ್ಪತ್ರೆಗೆ ದಾಖಲಾಗುತ್ತಿರುವ ಪ್ರಮಾಣದಲ್ಲಿ ಶೇ.30 ರಷ್ಟು ಹೆಚ್ಚಾಗಿದೆ.

ಸೋಂಕು ಇಷ್ಟು ಪ್ರಮಾಣದಲ್ಲಿ ಅಧಿಕೃತವಾಗಿ ದಾಖಲಾಗುತ್ತಿದ್ದರೂ ಲೆಕ್ಕಕ್ಕೆ ಸಿಗದ ಸಂಖ್ಯೆ ಇನ್ನೂ ಹೆಚ್ಚಿದೆ ಎಂದು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಪ್ರತಿದಿನ ಬಹಳಷ್ಟು ಜನರು ಸೋಂಕಿಗೆ ಒಳಗಾಗುತ್ತಿದ್ದಾರೆ. ಆದರೆ ಅವು ಲೆಕ್ಕಕ್ಕೆ ಸಿಕ್ಕಿಲ್ಲ ಎಂದು ಬ್ರಿಟಿಷ್ ಸರ್ಕಾರದ ತುರ್ತುಸ್ಥಿತಿಗಳ ವೈಜ್ಞಾನಿಕ ಸಲಹಾ ಗುಂಪು (SAGE) ಹೇಳಿದೆ.

ಪ್ರಸ್ತುತ ಸೋಂಕು ಏರುತ್ತಿರುವ ಸ್ಥಿತಿ ಮುಂದುವರೆದರೆ ಮುಂದೆ ದಿನಕ್ಕೆ 3,000 ಜನ ಆಸ್ಪತ್ರೆಗೆ ದಾಖಲಾಗುವ ಸಂಭವನೀಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು SAGE ಹೇಳಿದೆ. ಜೊತೆಗೆ ದೇಶದಲ್ಲಿ ಕೊರೊನಾ ಕುರಿತ ನಿಯಮಾವಳಿಗಳನ್ನು ಕಠಿಣಗೊಳಿಸಲು ಅದು ಸಲಹೆ ನೀಡಿದೆ.

Omicron cases raises in Britain

ಪ್ರಾತಿನಿಧಿಕ ಚಿತ್ರ

ಬ್ರಿಟನ್​ ದೇಶದ ಪ್ರಯಾಣಕ್ಕೆ ಕಠಿಣ ನಿಯಮ ವಿಧಿಸಿದ ಜರ್ಮನಿ: ಜರ್ಮನಿಯು ಬ್ರಿಟನ್​ಅನ್ನು ಹೆಚ್ಚಿನ ಕೊವಿಡ್ ಅಪಾಯದ ದೇಶಗಳ ಪಟ್ಟಿಯಲ್ಲಿ ಇರಿಸಿದೆ. ಜರ್ಮನಿಯ ಆರೋಗ್ಯ ಪ್ರಾಧಿಕಾರವು ಶನಿವಾರ ತಡರಾತ್ರಿ ಬ್ರಿಟನ್ ಅನ್ನು ಕೊವಿಡ್ ಅಪಾಯದ ದೇಶಗಳ ಪಟ್ಟಿಗೆ ಸೇರಿಸಲಾಗಿದೆ ಎಂದು ಘೋಷಿಸಿದ್ದು, ಇದರಿಂದ ಪ್ರಯಾಣದ ನಿರ್ಬಂಧಗಳು ಹೆಚ್ಚಲಿವೆ. ಬ್ರಿಟನ್ ಮತ್ತು ಐರ್ಲೆಂಡ್ ದೇಶದಲ್ಲಿ ಕೊವಿಡ್ ಹೆಚ್ಚಾಗಿದ್ದು, ಅವುಗಳ ಮೇಲೆ ಹೆಚ್ಚಿನ ನಿರ್ಬಂಧ ವಿಧಿಸಲಾಗಿದೆ.

ನಿರ್ಬಂಧಗಳ ಅನ್ವಯ ಈ ದೇಶಗಳಿಂದ ಬರುವವರು ಲಸಿಕೆ ಪಡೆದಿದ್ದರೂ ಕೂಡ ಎರಡು ವಾರಗಳ ಕ್ವಾರಂಟೈನ್ ಪೂರ್ತಿಗೊಳಿಸಬೇಕು. ಜರ್ಮನಿಗೆ ಆಗಮಿಸಲು ಒಂದೋ ಜರ್ಮನ್ ಪ್ರಜೆಯಾಗಿರಬೇಕು, ಇಲ್ಲವೇ ಜರ್ಮನ್​ನಲ್ಲಿ ನೆಲೆಸಿರುವ ಬ್ರಿಟನ್ ಪ್ರಜೆಯಾಗಿರಬೇಕು ಎಂದು ತಿಳಿಸಲಾಗಿದೆ. ಅನಿವಾರ್ಯವಿದ್ದರೆ ಮಾತ್ರ ಪ್ರಯಾಣಿಸುವಂತೆ ಬ್ರಿಟನ್​​ನಲ್ಲೂ ತಿಳಿಸಲಾಗಿದೆ.

ಇದನ್ನೂ ಓದಿ:

Golden Temple: ಅಮೃತಸರದ ಸ್ವರ್ಣ ಮಂದಿರ ಅಪವಿತ್ರಗೊಳಿಸಲು ಯತ್ನ; ಯುವಕನನ್ನು ಥಳಿಸಿ ಕೊಂದ ಗುಂಪು!

ನಾಯಿಗಳ ಮೇಲೆ ಕೋತಿಗಳ ಸೇಡು: ಒಂದೇ ತಿಂಗಳಿನಲ್ಲಿ 250 ನಾಯಿಗಳನ್ನು ಹತ್ಯೆಗೈದ ಕೋತಿಗಳ ಹಿಂಡು

Published On - 9:58 am, Sun, 19 December 21

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ