AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Omicron: ಡೆಲ್ಟಾಗಿಂತ ಒಮಿಕ್ರಾನ್ ವೇಗವಾಗಿ ಹರಡುತ್ತದೆ, ಲಸಿಕೆ ಪಡೆದವರಿಗೂ ತಗಲುತ್ತದೆ; WHO ವಿಜ್ಞಾನಿ

Omicron Variant: ಒಮಿಕ್ರಾನ್ ವೈರಸ್ ಡೆಲ್ಟಾ ರೂಪಾಂತರಕ್ಕಿಂತ ಅತ್ಯಂತ ವೇಗವಾಗಿ ಹರಡುತ್ತಿದೆ ಎಂಬುದಕ್ಕೆ ಹಲವು ಸಾಕ್ಷಿಗಳಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

Omicron: ಡೆಲ್ಟಾಗಿಂತ ಒಮಿಕ್ರಾನ್ ವೇಗವಾಗಿ ಹರಡುತ್ತದೆ, ಲಸಿಕೆ ಪಡೆದವರಿಗೂ ತಗಲುತ್ತದೆ; WHO ವಿಜ್ಞಾನಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 21, 2021 | 1:34 PM

Share

ಜಿನೀವಾ: ಕಳೆದ ಒಂದೂವರೆ ವರ್ಷದಿಂದ ಇಡೀ ಜಗತ್ತನ್ನೇ ಕೊರೊನಾವೈರಸ್ (Coronavirus) ಎಂಬ ಮಾರಣಾಂತಿಕ ರೋಗ ಕಾಡುತ್ತಿದೆ. ಕೊವಿಡ್​ವೈರಸ್ (Covid-19) ರೂಪಾಂತರಿಯಾಗಿ ಪರಿವರ್ತನೆಗೊಂಡು ಇನ್ನಷ್ಟು ಅಪಾಯಕಾರಿಯಾಗುತ್ತಿದೆ. ಕೊವಿಡ್​ವೈರಸ್‌ನ ಒಮಿಕ್ರಾನ್ (Omicron) ರೂಪಾಂತರವು ಡೆಲ್ಟಾ ರೂಪಾಂತರಕ್ಕಿಂತ (Delta Variant) ವೇಗವಾಗಿ ಹರಡುತ್ತಿದೆ ಮತ್ತು ಈಗಾಗಲೇ ಲಸಿಕೆ ಹಾಕಿದ ಅಥವಾ ಕೊವಿಡ್-19 ಕಾಯಿಲೆಯಿಂದ ಚೇತರಿಸಿಕೊಂಡ ಜನರಲ್ಲಿ ಕೂಡ ಒಮಿಕ್ರಾನ್ ಸೋಂಕು ಕಾಣಿಸಿಕೊಳ್ಳುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ (WHO) ಮುಖ್ಯಸ್ಥರು ಹೇಳಿದ್ದಾರೆ.

ಒಮಿಕ್ರಾನ್ ವೈರಸ್ ಡೆಲ್ಟಾ ರೂಪಾಂತರಕ್ಕಿಂತ ಅತ್ಯಂತ ವೇಗವಾಗಿ ಹರಡುತ್ತಿದೆ ಎಂಬುದಕ್ಕೆ ಹಲವು ಸಾಕ್ಷಿಗಳಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಲಸಿಕೆ ಹಾಕಿದ ಅಥವಾ COVID-19 ನಿಂದ ಚೇತರಿಸಿಕೊಂಡ ಜನರು ಕೂಡ ಒಮಿಕ್ರಾನ್ ಸೋಂಕಿಗೆ ಒಳಗಾಗಬಹುದು ಅಥವಾ ಮರು-ಸೋಂಕಿಗೆ ಒಳಗಾಗಬಹುದು ಎಂದು ಟೆಡ್ರೊಸ್ ಹೇಳಿದ್ದಾರೆ.

WHO ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಕೂಡ ಈ ಬಗ್ಗೆ ಮಾಹಿತಿ ನೀಡಿದ್ದು, ಕೆಲವು ಕೊವಿಡ್ ಲಸಿಕೆಗಳಿಂದ ಉತ್ಪತ್ತಿಯಾಗುವ ಪ್ರತಿಕಾಯಗಳನ್ನು ತಪ್ಪಿಸುವಲ್ಲಿ ಒಮಿಕ್ರಾನ್ ಉತ್ತಮವಾಗಿದೆ. ಆದರೆ ಸೋಂಕು ಮತ್ತು ರೋಗವನ್ನು ತಡೆಯುವ ಇತರ ರೀತಿಯ ರೋಗನಿರೋಧಕ ಶಕ್ತಿಗಳಿವೆ. ರೋಗನಿರೋಧಕ ಶಕ್ತಿ ಹೆಚ್ಚಾಗಿ ಇಲ್ಲದ ವ್ಯಕ್ತಿಗಳನ್ನೇ ಈ ಒಮಿಕ್ರಾನ್ ವೈರಸ್ ಗುರಿಯಾಗಿಸಿಕೊಳ್ಳುತ್ತಿದೆ. ಆದರೆ, ಒಮಿಕ್ರಾನ್ ವಿರುದ್ಧ ಯಾವ ಕೊವಿಡ್ ಲಸಿಕೆಗಳೂ ಪರಿಣಾಮಕಾರಿಯಾಗುವುದಿಲ್ಲ ಎಂದು ನಮಗೆ ಅನಿಸುವುದಿಲ್ಲ. ಕೆಲವು ಲಸಿಕೆಗಳಿಂದ ಒಮಿಕ್ರಾನ್ ಪರಿಣಾಮ ಅಥವಾ ಒಮಿಕ್ರಾನ್ ತಗುಲುವ ಸಾಧ್ಯತೆ ಕಡಿಮೆಯಾಗಬಹುದು ಎಂದು ಹೇಳಿದ್ದಾರೆ.

ಆದರೆ, ಡೆಲ್ಟಾಗಿಂತ ಒಮಿಕ್ರಾನ್ ಹೆಚ್ಚು ಅಪಾಯಕಾರಿಯಲ್ಲ ಎಂದು ಈ ಹಿಂದೆ ವಿಶ್ವ ಆರೋಗ್ಯ ಸಂಸ್ಥೆ ವಿಜ್ಞಾನಿಗಳು ಹೇಳಿದ್ದರು. ಅಲ್ಲದೆ, ಈಗಾಗಲೇ ಕೊವಿಡ್​ಗೆ ನೀಡಲಾಗುತ್ತಿರುವ ಲಸಿಕೆಯೇ ಒಮಿಕ್ರಾನ್​ ಸೋಂಕಿಗೂ ಸಾಕಾಗುತ್ತದೆ ಎಂದಿದ್ದರು. ಪ್ರಾಥಮಿಕ ಮಾಹಿತಿಯು ಡೆಲ್ಟಾ ಮತ್ತು ಇತರ ತಳಿಗಳಂತೆ ಇದು ಜನರನ್ನು ಅನಾರೋಗ್ಯಕ್ಕೆ ಒಳಪಡಿಸುವುದಿಲ್ಲ ಎಂದು ಸೂಚಿಸುತ್ತದೆ. ಪ್ರಾಥಮಿಕ ದತ್ತಾಂಶವು ಇದು ಹೆಚ್ಚು ತೀವ್ರವಾಗಿದೆ ಎಂದು ಸೂಚಿಸುವುದಿಲ್ಲ. ವಾಸ್ತವವಾಗಿ ಏನಾದರೂ ಇದ್ದರೆ ನಿರ್ದೇಶನವು ಕಡಿಮೆ ತೀವ್ರತೆಯ ಕಡೆಗೆ ಇರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತುರ್ತು ನಿರ್ದೇಶಕ ಮೈಕೆಲ್ ರಯಾನ್ ಸಂದರ್ಶನವೊಂದರಲ್ಲಿ ಹೇಳಿದ್ದರು.

ಇದನ್ನೂ ಓದಿ: ಒಬ್ಬ ವ್ಯಕ್ತಿಗೆ ಏಕಕಾಲಕ್ಕೆ ಡೆಲ್ಟಾ ಮತ್ತು ಒಮಿಕ್ರಾನ್​ ಸೋಂಕು ತಗುಲಿದರೆ ಏನಾಗುತ್ತದೆ? ಆರೋಗ್ಯ ತಜ್ಞರು ನೀಡಿದ ಉತ್ತರ ಭಯಹುಟ್ಟಿಸುವಂತಿದೆ !

Omicron: ಲಸಿಕೆಯ ದಕ್ಷತೆಯನ್ನು ಕುಗ್ಗಿಸಲಿದೆ ಒಮಿಕ್ರಾನ್​, ಪ್ರಸರಣದ ವೇಗ ಡೆಲ್ಟಾಕ್ಕಿಂತಲೂ ಹೆಚ್ಚು: ಡಬ್ಲ್ಯೂಎಚ್​ಒ

Published On - 1:06 pm, Tue, 21 December 21

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್