AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Omicron Variant: ಹೊಸ ಕೊವಿಡ್ ಪ್ರಕರಣಗಳ ಸುನಾಮಿ ಜಾಗತಿಕ ಆರೋಗ್ಯ ವ್ಯವಸ್ಥೆಗೆ ಅಡ್ಡಿಯಾಗಿದೆ; WHO ಕಳವಳ

2021ರ ಡಿಸೆಂಬರ್ 27 ಮತ್ತು 2022ರ ಜನವರಿ 2ರ ನಡುವೆ ಜಾಗತಿಕವಾಗಿ 9.5 ಮಿಲಿಯನ್ ಹೊಸ ಕೊವಿಡ್-19 ಪ್ರಕರಣಗಳು ವರದಿಯಾಗಿವೆ. ಹಿಂದಿನ ವಾರಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ ಶೇ. 71ರಷ್ಟು ತೀವ್ರವಾಗಿ ಕೊವಿಡ್ ಕೇಸುಗಳು ಹೆಚ್ಚಾಗಿವೆ.

Omicron Variant: ಹೊಸ ಕೊವಿಡ್ ಪ್ರಕರಣಗಳ ಸುನಾಮಿ ಜಾಗತಿಕ ಆರೋಗ್ಯ ವ್ಯವಸ್ಥೆಗೆ ಅಡ್ಡಿಯಾಗಿದೆ; WHO ಕಳವಳ
ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್
TV9 Web
| Updated By: ಸುಷ್ಮಾ ಚಕ್ರೆ|

Updated on: Jan 07, 2022 | 1:18 PM

Share

ನವದೆಹಲಿ: ಜಗತ್ತಿನಾದ್ಯಂತ ಕೊರೊನಾವೈರಸ್ ರೋಗ (ಕೋವಿಡ್ -19) ಪ್ರಕರಣಗಳ ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಪ್ರಪಂಚದಲ್ಲಿ ಸುನಾಮಿ ರೀತಿಯಲ್ಲಿ ಒಮಿಕ್ರಾನ್ ರೂಪಾಂತರಿ ಹಾಗೂ ಕೊವಿಡ್ ಅಪ್ಪಳಿಸುತ್ತಿದೆ. ಇದರಿಂದ ಜಗತ್ತಿನಾದ್ಯಂತ ಆರೋಗ್ಯ ವ್ಯವಸ್ಥೆ ತೀವ್ರವಾಗಿ ಹದಗೆಟ್ಟಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಆತಂಕ ವ್ಯಕ್ತಪಡಿಸಿದ್ದಾರೆ. ಇತ್ತ ಭಾರತದಲ್ಲೂ ಒಮಿಕ್ರಾನ್ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಡಬ್ಲುಎಚ್​ಓ ಮುಖ್ಯಸ್ಥರ ಈ ಹೇಳಿಕೆ ಎಚ್ಚರಿಕೆಯ ಗಂಟೆಯಾಗಿದೆ.

2021ರ ಡಿಸೆಂಬರ್ 27 ಮತ್ತು 2022ರ ಜನವರಿ 2ರ ನಡುವೆ ಜಾಗತಿಕವಾಗಿ 9.5 ಮಿಲಿಯನ್ ಹೊಸ ಕೊವಿಡ್-19 ಪ್ರಕರಣಗಳು ವರದಿಯಾಗಿವೆ. WHO ಬಿಡುಗಡೆ ಮಾಡಿದ ವಾರದ ಕೊವಿಡ್ ಸೋಂಕಿತರ ಅಪ್‌ಡೇಟ್ ಜಾಗತಿಕವಾಗಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಗಣನೀಯವಾಗಿ ಏರಿಕೆಯಾಗುತ್ತಿರುವುದನ್ನು ತೋರಿಸಿದೆ. ಹಿಂದಿನ ವಾರಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ ಶೇ. 71ರಷ್ಟು ತೀವ್ರವಾಗಿ ಕೊವಿಡ್ ಕೇಸುಗಳು ಹೆಚ್ಚಾಗಿವೆ.

ಈ ಅವಧಿಯಲ್ಲಿ ಕೊರೊನಾದಿಂದಾಗಿ ಹೊಸ ಸಾವಿನ ಸಂಖ್ಯೆಯು ಶೇ. 10ರಷ್ಟು ಹೆಚ್ಚಳವಾಗಿದೆ. ಕಳೆದ ವಾರದಲ್ಲಿ 41,000ಕ್ಕೂ ಹೆಚ್ಚು ಹೊಸ ಸಾವುಗಳು ವರದಿಯಾಗಿವೆ. ಜಾಗತಿಕ ಕೋವಿಡ್-19 ಪ್ರಕರಣಗಳಲ್ಲಿ ಹಠಾತ್ ಏರಿಕೆಯಾಗಿರುವುದನ್ನು ಪ್ರಸ್ತಾಪಿಸಿರುವ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಘೆಬ್ರೆಯೆಸಸ್, ಕಳೆದ ವಾರ ಇದುವರೆಗೆ ಅತಿ ಹೆಚ್ಚು ಕೋವಿಡ್ -19 ಪ್ರಕರಣಗಳು ವರದಿಯಾಗಿವೆ. ಅಲ್ಲದೆ, ಇನ್ನೂ ಅದೆಷ್ಟೋ ಕೊರೊನಾ ಕೇಸುಗಳು ದಾಖಲೆಯೇ ಆಗಿಲ್ಲ. ದಾಖಲಾದ ಪ್ರಕರಣಗಳ ಮೊತ್ತವೇ ಇಷ್ಟಿದೆ ಎಂದಮೇಲೆ ನಾವು ಎಚ್ಚೆತ್ತುಕೊಳ್ಳಬೇಕಿದೆ. ನೋಂದಾವಣೆಯಾಗದ ಕೊರೊನಾ ಪಾಸಿಟಿವ್ ಪ್ರಮಾಣ ಇನ್ನೂ ಹೆಚ್ಚಿದೆ ಎಂದು ಹೇಳಿದ್ದಾರೆ.

ಹಿಂದಿನ ರೂಪಾಂತರಿಗಳಂತೆಯೇ ಒಮಿಕ್ರಾನ್​ನಿಂದ ಜನರು ಸಾಯುತ್ತಿದ್ದಾರೆ, ಲಕ್ಷಾಂತರ ಜನರು ಆಸ್ಪತ್ರೆ ಸೇರುತ್ತಿದ್ದಾರೆ. ವಾಸ್ತವವಾಗಿ ಕೊವಿಡ್ ಪ್ರಕರಣಗಳ ಸುನಾಮಿ ತುಂಬಾ ದೊಡ್ಡದಾಗಿದೆ ಮತ್ತು ಇದು ಬಹಳ ವೇಗವಾಗಿ ಹರಡುತ್ತಿದೆ. ಇದರಿಂದ ಜಗತ್ತಿನಾದ್ಯಂತ ಮತ್ತೊಮ್ಮೆ ಆರೋಗ್ಯ ತುರ್ತು ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯೂ ಇದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಜನರು ಕೊರೊನಾದಿಂದ ತಮ್ಮನ್ನು ತಕ್ಕಮಟ್ಟಿಗೆ ರಕ್ಷಿಸಿಕೊಳ್ಳಲು ಕೊವಿಡ್ ಲಸಿಕೆ ಹಾಕಿಸಿಕೊಳ್ಳಬೇಕು, ಸಾರ್ವಜನಿಕ ಸ್ಥಳದಲ್ಲಿ ಹೆಚ್ಚಾಗಿ ಗುಂಪುಗೂಡಬಾರದು, ಸಮರ್ಪಕವಾಗಿರುವ ಮಾಸ್ಕ್​ಗಳನ್ನು ಧರಿಸಬೇಕು, ಜನಸಂದಣಿಯನ್ನು ತಪ್ಪಿಸಬೇಕು, ಉತ್ತಮ ಗಾಳಿಯನ್ನು ಉಸಿರಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಕೊವಿಡ್ ಸೋಂಕಿತರಿಂದ ದುಪ್ಪಟ್ಟು ಶುಲ್ಕ ವಸೂಲಿ; ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ವಿರುದ್ಧ ಆರೋಪ

PM Modi: ದೇಶದಲ್ಲಿ ತೀವ್ರ ಗತಿಯಲ್ಲಿ ಕೊವಿಡ್ ಹೆಚ್ಚಳ; ಎಲ್ಲಾ ರಾಜ್ಯಗಳ ಸಿಎಂ ಜತೆ ಇಂದು ಪ್ರಧಾನಿ ಸಭೆ ಸಾಧ್ಯತೆ

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ