AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ: ಕಿರುಕುಳ ವಿರೋಧಿಸಿದ ಮಹಿಳೆಯರಿಗೆ ಥಳಿಸಿದ ಪುರುಷರ ಗುಂಪು; ಹಲ್ಲೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ಮೂವರು ಮಹಿಳೆಯರು ರೆಸ್ಟೊರೆಂಟ್​​ನಲ್ಲಿ ಜತೆಗೆ ಕುಳಿತು ಊಟ ಮಾಡುತ್ತಿರುವಾಗ ಅಲ್ಲಿಗೆ ಬಂದ ವ್ಯಕ್ತಿಯೊಬ್ಬ ಮಹಿಳೆಯ ಬೆನ್ನಿನ ಮೇಲೆ ಕೈ ಹಾಕುತ್ತಿರುವುದು ವಿಡಿಯೊ ದೃಶ್ಯದಲ್ಲಿದೆ. ಮಹಿಳೆ ಅವನನ್ನು ದೂರ ತಳ್ಳಿದಾಗ ಅವನು...

ಚೀನಾ: ಕಿರುಕುಳ ವಿರೋಧಿಸಿದ ಮಹಿಳೆಯರಿಗೆ ಥಳಿಸಿದ ಪುರುಷರ ಗುಂಪು; ಹಲ್ಲೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ
ಚೀನಾದ ರೆಸ್ಟೊರೆಂಟ್​​ನಲ್ಲಿ ಮಹಿಳೆಯರ ಮೇಲೆ ಹಲ್ಲೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jun 15, 2022 | 2:12 PM

Share

ಬೀಜಿಂಗ್: ಚೀನಾದ (China) ರೆಸ್ಟೊರೆಂಟ್‌ವೊಂದರಲ್ಲಿ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಮಹಿಳೆಯರ ಮೇಲೆ ಹಲ್ಲೆ ನಡೆಸಿರುವ ಈ ಪ್ರಕರಣಕ್ಕೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು ಇದು ಉತ್ತರ ಚೀನಾದ ಹೆಬೈ ಪ್ರಾಂತ್ಯದ  (Hebei province) ಬಾರ್ಬೆಕ್ಯೂ ರೆಸ್ಟೊರೆಂಟ್‌ನಲ್ಲಿ (barbecue restaurant) ನಡೆದ ಘಟನೆ ಆಗಿದೆ. ಮೂವರು ಮಹಿಳೆಯರು ರೆಸ್ಟೊರೆಂಟ್​​ನಲ್ಲಿ ಜತೆಗೆ ಕುಳಿತು ಊಟ ಮಾಡುತ್ತಿರುವಾಗ ಅಲ್ಲಿಗೆ ಬಂದ ವ್ಯಕ್ತಿಯೊಬ್ಬ ಮಹಿಳೆಯ ಬೆನ್ನಿನ ಮೇಲೆ ಕೈ ಹಾಕುತ್ತಿರುವುದು ವಿಡಿಯೊ ದೃಶ್ಯದಲ್ಲಿದೆ. ಮಹಿಳೆ ಅವನನ್ನು ದೂರ ತಳ್ಳಿದಾಗ ಅವನು ಆಕೆಯ ಮೇಲೆ ಹಲ್ಲೆ ಮಾಡುತ್ತಾನೆ. ಅಲ್ಲಿದ್ದ ಮತ್ತೊಬ್ಬ ಮಹಿಳೆ ಆಕೆಯ ರಕ್ಷಣೆಗೆ ಬಂದಾಗ ಆತ ಆಕೆಯ ಮೇಲೂ ಹಲ್ಲೆ ನಡೆಸುತ್ತಾನೆ. ಮಹಿಳೆ ನೆಲದ ಮೇಲೆ ಬಿದ್ದಾಗಲೂ ಆಕೆಯ ಮೇಲೆ ಹಲ್ಲೆ ನಡೆಸುತ್ತಿರುವುದು ಕಾಣಿಸುತ್ತದೆ. ಮಹಿಳೆಯನ್ನು ರೆಸ್ಟೊರೆಂಟ್​ನ ಹೊರಗೆಳೆದುಕೊಂಡು ಬಂದು ಹಲ್ಲೆ ನಡೆಸುತ್ತಿರುವುದು ವಿಡಿಯೊದಲ್ಲಿದೆ. ವಿಡಿಯೊ ವೈರಲ್ ಆಗುತ್ತಿದ್ದಂತೆ ಚೀನಾದಲ್ಲಿ ಲೈಂಗಿಕ ಕಿರುಕುಳ ಮತ್ತು ಲಿಂಗ ಆಧಾರಿತ ಹಿಂಸಾಚಾರದ ಬಗ್ಗೆ ಚರ್ಚೆಗಳು ಶುರುವಾಗಿದೆ. ಅಲ್ಲಿ ಇತ್ತೀಚಿನ ವರ್ಷಗಳಲ್ಲಿ ಪಿತೃಪ್ರಭುತ್ವದ ಸಮಾಜ, ಇಂಟರ್ನೆಟ್ ಸೆನ್ಸಾರ್‌ಶಿಪ್ ಮತ್ತು ಕಾನೂನು ಬೆಂಬಲದ ಹೊರತಾಗಿಯೂ ಮಹಿಳೆಯರ ಹಕ್ಕುಗಳ ಬಗ್ಗೆ ಜನ ಮಾತನಾಡಲು ತೊಡಗಿದ್ದಾರೆ.ಪ್ರಮುಖ ಸ್ತ್ರೀವಾದಿಗಳು ಸಹ ನಿಯಮಿತ ಪೋಲೀಸ್ ಕಿರುಕುಳ ಮತ್ತು ಬಂಧನವನ್ನು ಎದುರಿಸುತ್ತಿರುವಾಗ ಕೌಟುಂಬಿಕ ದೌರ್ಜನ್ಯ ವ್ಯಾಪಕವಾಗಿದ್ದರೂ ಈ ಬಗ್ಗೆ ವರದಿ ಆಗಿದ್ದು ಕಡಿಮೆ ಎಂದು ಕಾರ್ಯಕರ್ತರು ಹೇಳಿದ್ದಾರೆ.

2018 ರಲ್ಲಿ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರ ಮೇಲೆ ಲೈಂಗಿಕ ಕಿರುಕುಳದ ಆರೋಪ ಬಗ್ಗೆ #MeToo ಚಳುವಳಿಗೆ ಲಿಂಕ್ ಮಾಡಲಾದ ಕೀವರ್ಡ್‌ಗಳನ್ನು ವೆಬ್ ಸೆನ್ಸಾರ್‌ಗಳು ನಿರ್ಬಂಧಿಸಿವೆ. ಹಿಂಸಾತ್ಮಕ ದಾಳಿ ಮತ್ತು “ತೊಂದರೆ ಉಂಟುಮಾಡುವ” ಶಂಕೆಯ ಮೇಲೆ ಎಂಟು ಜನರನ್ನು ಬಂಧಿಸಿರುವುದಾಗಿ ಶನಿವಾರದಂದು ಟಾಂಗ್ಶಾನ್ ನಗರದಲ್ಲಿ ಪೊಲೀಸರು ತಿಳಿಸಿದ್ದಾರೆ. ಇನ್ನೊಬ್ಬ ಶಂಕಿತನ ಹುಡುಕಾಟ ನಡೆಯುತ್ತಿದೆ.

ಇದನ್ನೂ ಓದಿ
Image
ಭಾರತೀಯರಿಗೆ 2 ವರ್ಷಗಳ ಕೊವಿಡ್ ವೀಸಾ ನಿಷೇಧವನ್ನು ತೆಗೆದು ಹಾಕಿದ ಚೀನಾ: ವರದಿ
Image
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ತಮಿಳುನಾಡಿನ ಖಾಸಗಿ ಕಾಲೇಜಿನ ಅಧ್ಯಕ್ಷ ಬಂಧನ
Image
ನಮ್ಮಿಂದ ಆತಂಕ ಇದೆ ಎಂದುಕೊಳ್ಳುವುದು ಐತಿಹಾಸಿಕ ಪ್ರಮಾದ: ಅಮೆರಿಕಕ್ಕೆ ಚೀನಾ ಎಚ್ಚರಿಕೆ

ಘಟನೆಯ ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಇಬ್ಬರು ಮಹಿಳೆಯರು ಸ್ಥಿತಿ ಸ್ಥಿರವಾಗಿದೆ. ಆದರೆ ಇತರ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ವಿದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 1:58 pm, Wed, 15 June 22

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ