AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಶೇಕಡಾ 29 ಮಹಿಳೆಯರು ಮಾತ್ರ ಬ್ಯಾಂಕ್ ಅಕೌಂಟ್ ಹೊಂದಿದ್ದಾರೆ!

ಭಾರತದ ಶೇಕಡಾ 77ರಷ್ಟು ಮಹಿಳೆಯರು ಸ್ವಂತ ಬ್ಯಾಂಕ್ ಖಾತೆ ಹೊಂದಿದ್ದಾರೆ. 

ಪಾಕಿಸ್ತಾನದ ಶೇಕಡಾ 29 ಮಹಿಳೆಯರು ಮಾತ್ರ ಬ್ಯಾಂಕ್ ಅಕೌಂಟ್ ಹೊಂದಿದ್ದಾರೆ!
ಸಾಂಕೇತಿಕ ಚಿತ್ರ
TV9 Web
| Edited By: |

Updated on:Sep 10, 2021 | 4:23 PM

Share

ಕರಾಚಿ: 2021ರ ಮಾರ್ಚ್​ ತಿಂಗಳವರೆಗಿನ ಅಂಕಿಸಂಖ್ಯೆಗಳ ಪ್ರಕಾರ ಪಾಕಿಸ್ತಾನದ ಶೇಕಡಾ 29ರಷ್ಟು ಮಹಿಳೆಯರು ಮಾತ್ರ ಬ್ಯಾಂಕ್ ಖಾತೆ ಹೊಂದಿದ್ದಾರೆ. ಇದು ಜಗತ್ತಿನಲ್ಲೇ ಮಹಿಳೆಯರು ಬ್ಯಾಂಕ್ ಅಕೌಂಟ್ ಹೊಂದಿರುವ ದೇಶಗಳ ಪೈಕಿ ಅತ್ಯಂತ ಕಡಿಮೆ ಪ್ರಮಾಣದ್ದಾಗಿದೆ. ಮಹಿಳೆಯರು ಸ್ವಂತ ಬ್ಯಾಂಕ್ ಅಕೌಂಟ್ ಹೊಂದಲು ಎಲ್ಲ ರೀತಿಯಲ್ಲಿ ನಾವು ಶ್ರಮಿಸುತ್ತಿದ್ದೇವೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನದ ಗವರ್ನರ್ ಡಾ.ರೇಝಾ ಬಕೀರ್ ಈಗಾಗಲೇ ತಿಳಿಸಿದ್ದಾರೆ.   ಸುಮ್ಮನೆ ಹೋಲಿಸುವುದಿದ್ದರೆ ಭಾರತದ ಶೇಕಡಾ 77ರಷ್ಟು ಮಹಿಳೆಯರು ಸ್ವಂತ ಬ್ಯಾಂಕ್ ಖಾತೆ ಹೊಂದಿದ್ದಾರೆ. 

ಮಹಿಳೆಯರಿಗೆ ಸಮಾಜದ ಎಲ್ಲ ರಂಗಗಳಲ್ಲಿಯೂ ಪುರುಷರಷ್ಟೇ ಸಮಾನ ಸ್ಥಾನಮಾನ ದೊರೆಯಬೇಕು. ದೇಶವೊಂದರ ಅಭಿವೃದ್ಧಿ ಮತ್ತು ಸಾಮಾಜಿಕ ಔನ್ನತ್ಯದಲ್ಲಿ ಮಹಿಳೆಯರ ಕೊಡುಗೆಯನ್ನು ಕಡೆಗಣಿಸಲಾಗದು. ಏಕೆಂದರೆ ಅವರು ಪುರುಷರಷ್ಟೇ ಸಮಾನ. ಆರ್ಥಿಕ ಮತ್ತು ಹಣಕಾಸಿನ ವಿಷಯಗಳಲ್ಲಿ ಮಹಿಳೆಯರು ಮುನ್ನೆಲೆಗೆ ಬಂದಷ್ಟೂ ನೈಜ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಸಮಾಜದ ಎಲ್ಲ ರಂಗಗಳಲ್ಲಿಯೂ ಲಿಂಗ ತಾರತಮ್ಯ ಕಡಿಮೆಗೊಳಿಸುವತ್ತ ಪಾಕಿಸ್ತಾನ ಹೆಜ್ಜೆ ಹಾಕಲಿದೆ ಎಂದು ಸಹ ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನದ ಗವರ್ನರ್ ಡಾ.ರೇಝಾ ಬಕೀರ್ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನ ತಿಳಿಸಿದ್ದರು.

ಮಿಲಿಟರಿಯು ಆಡಳಿತದ ಮೇಲೆ ಹತೋಟಿ ಸಾಧಿಸಲು ಅವಕಾಶ ಮಾಡಿಕೊಡುವ ಪ್ರಜಾಪ್ರಭುತ್ವ ವ್ಯವಸ್ಥೆ  ಹೊಂದಿರುವ ನಮ್ಮ ನೆರೆಯ ದೇಶ ಪಾಕಿಸ್ತಾನದಲ್ಲಿಯೂ ಮಹಿಳೆಯರ ಮೇಲಿನ ಹಿಂಸಾಚಾರ ಕಡಿಮೆಯಿಲ್ಲ. ಪುರುಷರು ತಮ್ಮ ಧಾರ್ಮಿಕ ಮೂಲಭೂತವಾದಿ ಧೋರಣೆಯಿಂದ ಉಗ್ರ ಕೃತ್ಯಗಳತ್ತ ಆಸಕ್ತರಾದರೆ ಮಹಿಳೆಯರೇ ಶೋಷಣೆಗೆ ಒಳಗಾಗುವ ಸ್ಥಿತಿ ಇಲ್ಲಿಯದು. ಪಾಕಿಸ್ತಾನದಲ್ಲಿ ದೈಹಿಕ ದೌರ್ಜನ್ಯದಿಂದಾಗಿ ಪ್ರತಿ ವರ್ಷ ಸುಮಾರು 5 ಸಾವಿರ ಮಹಿಳೆಯರು ಮೃತಪಡುತ್ತಾರೆ. ಇಸ್ಲಾಮೇತರ ಧರ್ಮದ ಮಹಿಳೆಯರು ಅಪಹರಣಕ್ಕೊಳಗಾದ ಸುದ್ದಿಗಳು ಈಗಲೂ ಕೇಳಿಬರುತ್ತವೆ. 2017ರಲ್ಲಿ 746 ಮಹಿಳೆಯರು ಕುಟುಂಬದ ಮಾನ ರಕ್ಷಣೆಯ ಹೆಸರಲ್ಲಿ ಕೊಲೆಗೊಳಗಾಗಿದ್ದಾರೆ.

ಇದನ್ನೂ ಓದಿ: 

ಮಹಿಳೆಯರು ವಾಸಿಸಲು ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳಿವು

ಅಫ್ಘಾನಿಸ್ತಾನದಲ್ಲಿ ಮಹಿಳೆಯರು ಮಂತ್ರಿಗಳಾಗುವಂತಿಲ್ಲ; ಮಕ್ಕಳು ಹೆರುವುದಷ್ಟೇ ಅವರ ಕೆಲಸ: ತಾಲಿಬಾನ್

(Only 29 percent women have bank accounts in Pakistan)

Published On - 4:18 pm, Fri, 10 September 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ