ಭಾರತದಿಂದ ದಾಳಿಯ ಭಯ; ಆಹಾರ ಸಂಗ್ರಹಿಸಿಟ್ಟುಕೊಳ್ಳಲು ಗಡಿ ಭಾಗದ ಜನರಿಗೆ ಪಾಕಿಸ್ತಾನ ಸೂಚನೆ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮೇಲೆ ಭಾರತ ದಾಳಿ ನಡೆಸುವ ಭೀತಿಯಲ್ಲಿದೆ. ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಆಹಾರ ವಸ್ತು ಸಂಗ್ರಹಿಟ್ಟುಕೊಳ್ಳುವಂತೆ ಪಾಕಿಸ್ತಾನ ಗಡಿ ಭಾಗದ ಜನತೆಗೆ ಸೂಚನೆ ನೀಡಲಾಗಿದೆ. ಈ ಮೂಲಕ ಪಾಕಿಸ್ತಾನ ಯುದ್ಧಕ್ಕೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. 10 ದಿನಗಳ ಕಾಲ ಮದರಸಾ ತೆರೆಯುವಂತಿಲ್ಲ ಎಂದು ನೀಲಂ ಕಣಿವೆಗೆ ತೆರಳದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ.

ಭಾರತದಿಂದ ದಾಳಿಯ ಭಯ; ಆಹಾರ ಸಂಗ್ರಹಿಸಿಟ್ಟುಕೊಳ್ಳಲು ಗಡಿ ಭಾಗದ ಜನರಿಗೆ ಪಾಕಿಸ್ತಾನ ಸೂಚನೆ
Pakistan Border

Updated on: May 02, 2025 | 8:21 PM

ಇಸ್ಲಮಾಬಾದ್, ಮೇ 2: ಪಾಕಿಸ್ತಾನದ (Pakistan) ಮೇಲೆ ಭಾರತ ದಾಳಿ ನಡೆಸುವ ಭೀತಿ ಉಂಟಾಗಿದೆ. ಇದರಿಂದ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ (PoK) ಆತಂಕದ ವಾತಾವರಣ ನಿರ್ಮಾಣವಾಗಿದೆ. ಆಹಾರ ವಸ್ತು ಸಂಗ್ರಹಿಟ್ಟುಕೊಳ್ಳುವಂತೆ ಗಡಿ ಭಾಗದ ಜನತೆಗೆ ಸೂಚನೆ ನೀಡಲಾಗಿದೆ. ನೀಲಂ ಕಣಿವೆಗೆ ತೆರಳದಂತೆ ಪ್ರವಾಸಿಗರಿಗೆ ನಿರ್ದೇಶನ ನೀಡಲಾಗಿದೆ. ಕರಾಚಿ, ಲಾಹೋರ್ ವಾಯುನೆಲೆಗಳು ದಿನದ 8 ತಾಸು ಬಂದ್ ಆಗಲಿದೆ. ಪಹಲ್ಗಾಮ್ ದಾಳಿಯ (Pahalgam Attack) ನಂತರ ಭಾರತದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಆಹಾರವನ್ನು ಸಂಗ್ರಹಿಸಲು ಪಾಕ್ ನಾಗರಿಕರ ಬಳಿ ಮನವಿ ಮಾಡಿದೆ. ಪಿಒಕೆಯಲ್ಲಿರುವ ನಾಗರಿಕರಿಗೆ ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಲು ಸೂಚನೆಗಳನ್ನು ನೀಡಲಾಗಿದೆ ಎಂದು ಪಾಕ್ ಸರ್ಕಾರ ಹೇಳಿದೆ. ಮಿಲಿಟರಿ ಉಲ್ಬಣಗೊಳ್ಳುವ ಭೀತಿಯ ನಡುವೆ, ಪಾಕ್ ಆಕ್ರಮಿತ ಕಾಶ್ಮೀರದ ಅಧಿಕಾರಿಗಳು 1,000ಕ್ಕೂ ಹೆಚ್ಚು ಧಾರ್ಮಿಕ ಶಾಲೆಗಳನ್ನು 10 ದಿನಗಳವರೆಗೆ ಮುಚ್ಚಲು ಆದೇಶಿಸಿದ್ದಾರೆ.

ಪಹಲ್ಗಾಮ್ ದಾಳಿಯ ನಂತರ ಭಾರತದೊಂದಿಗೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ, ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಇಂದು ನಾಗರಿಕರನ್ನು ಆಹಾರವನ್ನು ಸಂಗ್ರಹಿಸಲು ಒತ್ತಾಯಿಸಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಪಿಒಕೆ ಪ್ರಧಾನಿ ಚೌಧರಿ ಅನ್ವರ್ ಉಲ್ ಹಕ್ ಸ್ಥಳೀಯ ವಿಧಾನಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಇರುವ 13 ಕ್ಷೇತ್ರಗಳಲ್ಲಿ ಎರಡು ತಿಂಗಳ ಕಾಲ ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಲು ಪಿಒಕೆ ನಾಗರಿಕರಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಭಾರತದಿಂದ ವೈಮಾನಿಕ ದಾಳಿ ಭೀತಿ; ಪಾಕಿಸ್ತಾನದಿಂದ ಗಡಿಯಲ್ಲಿ ತುರ್ತು ಸೈರನ್ ಅಳವಡಿಕೆ

ಇದನ್ನೂ ಓದಿ
ರಾಜ್ಯಸಭೆಯಲ್ಲಿ ಅಸಂಸದೀಯ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆ
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ಇದಕ್ಕೂ ಮೊದಲು, ಪಾಕಿಸ್ತಾನದ ರಾಷ್ಟ್ರೀಯ ವಿಮಾನಯಾನ ಸಂಸ್ಥೆ ಬುಧವಾರ ಭದ್ರತಾ ಕಾರಣಗಳಿಂದಾಗಿ ಗಿಲ್ಗಿಟ್, ಸ್ಕಾರ್ಡು ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಇತರ ಉತ್ತರ ಪ್ರದೇಶಗಳಿಗೆ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿದೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.

ಪಾಕಿಸ್ತಾನದ ವಿವಿಧ ವರದಿಗಳು ಪಾಕಿಸ್ತಾನ ಈಗಾಗಲೇ ತನ್ನ ಸೈನ್ಯ ಮತ್ತು ವಾಯುಪಡೆಯನ್ನು ಭಾರತೀಯ ಗಡಿಯ ಕಡೆಗೆ ಸಜ್ಜುಗೊಳಿಸಿದೆ ಎಂದು ಹೇಳಿವೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಗಡಿ ಪ್ರದೇಶಗಳ ನಿವಾಸಿಗಳಿಗೆ 2 ತಿಂಗಳ ಕಾಲ ಆಹಾರವನ್ನು ಸಂಗ್ರಹಿಸಲು ಕೇಳಿಕೊಂಡಿದೆ. ಎರಡು ಪರಮಾಣು ಶಸ್ತ್ರಸಜ್ಜಿತ ದೇಶಗಳು ಮಿಲಿಟರಿ ನಿಯಂತ್ರಣ ರೇಖೆಯ ಉದ್ದಕ್ಕೂ ಸತತ 8 ರಾತ್ರಿಗಳ ಕಾಲ ಗುಂಡಿನ ಚಕಮಕಿ ನಡೆಸಿವೆ. ಇದು ವಿವಾದಿತ ಕಾಶ್ಮೀರ ಪ್ರದೇಶವನ್ನು ಬೇರ್ಪಡಿಸುವ ವಾಸ್ತವಿಕ ಗಡಿಯಾಗಿದೆ. ನಿಯಂತ್ರಣ ರೇಖೆಯ (LoC) ಉದ್ದಕ್ಕೂ ಇರುವ 13 ಕ್ಷೇತ್ರಗಳಲ್ಲಿ 2 ತಿಂಗಳ ಕಾಲ ಆಹಾರ ಸಾಮಗ್ರಿಗಳನ್ನು ದಾಸ್ತಾನು ಮಾಡಲು ಸೂಚನೆ ನೀಡಲಾಗಿದೆ ಎಂದು ಪಾಕ್ ಆಕ್ರಮಿತ ಕಾಶ್ಮೀರದ ಪ್ರಧಾನಿ ಚೌಧರಿ ಅನ್ವರ್ ಉಲ್ ಹಕ್ ಹೇಳಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಇದನ್ನೂ ಓದಿ: ಗುಟ್ಟಾಗಿ ಉಳಿದಿಲ್ಲ; ಉಗ್ರರೊಂದಿಗಿನ ಪಾಕಿಸ್ತಾನದ ನಂಟು ಒಪ್ಪಿಕೊಂಡ ಬಿಲಾವಲ್ ಭುಟ್ಟೋ

ಭಾರತದ ಪ್ರಧಾನಿ ನರೇಂದ್ರ ಮೋದಿ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯಿಸಲು ಭದ್ರತಾ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆಯ ಸ್ವಾತಂತ್ರ್ಯವನ್ನು ನೀಡಿದ್ದಾರೆ. ಪಾಕಿಸ್ತಾನವು ಕಳೆದ ವಾರದಿಂದ ನಿಯಂತ್ರಣ ರೇಖೆಯ ಉದ್ದಕ್ಕೂ ಕದನ ವಿರಾಮವನ್ನು ಉಲ್ಲಂಘಿಸುತ್ತಿದೆ. ಭಾರತೀಯ ಸೇನೆಯು ಈಗಾಗಲೇ ಅಪ್ರಚೋದಿತ ಗುಂಡಿನ ದಾಳಿಯ ಘಟನೆಗಳ ಬಗ್ಗೆ ಅವರಿಗೆ ಎಚ್ಚರಿಕೆ ನೀಡಿದೆ. ಕುಪ್ವಾರಾ, ಬಾರಾಮುಲ್ಲಾ ಮತ್ತು ಪೂಂಚ್ ಜಿಲ್ಲೆಗಳ ಎದುರಿನ ಪ್ರದೇಶಗಳಲ್ಲಿ ಹಾಗೂ ಜಮ್ಮು ಮತ್ತು ಕಾಶ್ಮೀರದ ನೌಶೇರಾ ಮತ್ತು ಅಖ್ನೂರ್ ವಲಯಗಳಲ್ಲಿ ಮೇ 1-2ರ ರಾತ್ರಿ ಪಾಕಿಸ್ತಾನ ಸೇನೆಯ ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿಗೆ ಭಾರತೀಯ ಸೇನೆಯು ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ