AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ ನೀರಿಗಾಗಿ ಅಲ್ಲ, ಔಷಧಿಗಾಗಿಯೂ ಹಾತೊರೆಯಲಿದೆ ಪಾಕಿಸ್ತಾನ

ಭಾರತವು ಸಿಂಧೂ ನದಿ ನೀರು ಒಪ್ಪಂದ ಸ್ಥಗಿತಗೊಳಿಸಿದ್ದಕ್ಕೆ ಕೋಪದಲ್ಲಿ ನವದೆಹಲಿಯೊಂದಿಗಿನ ಎಲ್ಲಾ ವ್ಯಾಪಾರ ಸಂಬಂಧವನ್ನೂ ಇಸ್ಲಾಮಾಬಾದ್​ ಕಡಿತಗೊಳಿಸಿದ್ದು, ತಮ್ಮ ತಲೆಯ ಮೇಲೆ ತಾವೇ ಚಪ್ಪಡಿ ಎಳೆದುಕೊಡಿದೆ. ಪಾಕಿಸ್ತಾನ ತಾವಾಗಿಯೇ ತೆಗೆದುಕೊಂಡ ನಿರ್ಧಾರ ತಮಗೇ ಉಲ್ಟಾ ಹೊಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಕೋಪದಲ್ಲಿ ಕೊಯ್ದುಕೊಂಡ ಮೂಗು ಮತ್ತೆ ಬಾರದು ಎನ್ನುವ ಗಾದೆ ಇವರಿಗೆ ಹೇಳಿ ಮಾಡಿಸಿದಂತಿದೆ. ಪಾಕಿಸ್ತಾನ ಕೇವಲ ನೀರಿಗಾಗಿ ಅಲ್ಲ, ಔಷಧಿಗಾಗಿಯೈ ಹಾತೊರೆಯುವ ಸಾಧ್ಯತೆ ಹೆಚ್ಚಿದೆ.

ಕೇವಲ ನೀರಿಗಾಗಿ ಅಲ್ಲ, ಔಷಧಿಗಾಗಿಯೂ ಹಾತೊರೆಯಲಿದೆ ಪಾಕಿಸ್ತಾನ
ಔಷಧಿಗಳುImage Credit source: Sciencepharma
ನಯನಾ ರಾಜೀವ್
|

Updated on:Apr 27, 2025 | 8:46 AM

Share

ಇಸ್ಲಾಮಾಬಾದ್, ಏಪ್ರಿಲ್ 27: ಪಾಕಿಸ್ತಾನ(Pakistan) ತಾವಾಗಿಯೇ ತೆಗೆದುಕೊಂಡ ನಿರ್ಧಾರ ತಮಗೇ ಉಲ್ಟಾ ಹೊಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಕೋಪದಲ್ಲಿ ಕೊಯ್ದುಕೊಂಡ ಮೂಗು ಮತ್ತೆ ಬಾರದು ಎನ್ನುವ ಗಾದೆ ಇವರಿಗೆ ಹೇಳಿ ಮಾಡಿಸಿದಂತಿದೆ. ಪಾಕಿಸ್ತಾನ ಕೇವಲ ನೀರಿಗಾಗಿ ಅಲ್ಲ, ಔಷಧಿಗಾಗಿಯೂ ಹಾತೊರೆಯುವ ಸಾಧ್ಯತೆ ಹೆಚ್ಚಿದೆ.

ಒಂದೆಡೆ ಪಹಲ್ಗಾಮ್ ಭಯೋತ್ಪಾದನಾ ದಾಳಿ ಬಳಿಕ ಪಾಕಿಸ್ತಾನದ ಮೇಲೆ ರಾಜತಾಂತ್ರಿಕ ಒತ್ತಡ ಹೆಚ್ಚಿಸುತ್ತಿರುವ ಕೇಂದ್ರ ಸರ್ಕಾರ, ಭಾರತದಿಂದ ನೆರೆಯ ರಾಷ್ಟ್ರಕ್ಕೆ ಒಂದು ಹನಿ ನೀರನ್ನೂ ಹರಿಸದಿರಲು ಪ್ರತಿಜ್ಞೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನವೂ ಭಾರತೊಂದಿಗಿನ ಎಲ್ಲಾ ವ್ಯಾಪಾರ ಸಂಬಂಧವನ್ನು ಕಡಿತಗೊಳಿಸಿದೆ.

ಆದರೆ ಅವರ ನಿರ್ಧಾರ ಅವರಿಗೇ ಮುಳುವಾಗುವಂತಾ ಲಕ್ಷಣಗಳು ಗೋಚರಿಸುತ್ತಿವೆ. ಪಾಕಿಸ್ತಾನದ ಔಷಧ ನಿಯಂತ್ರಣ ಪ್ರಾಧಿಕಾರ (DRAP) ಔಷಧ ಕ್ಷೇತ್ರದ ಮೇಲಿನ ನಿರ್ಬಂಧಗಳ ಪರಿಣಾಮದ ಕುರಿತು ಯಾವುದೇ ಔಪಚಾರಿಕ ಅಧಿಸೂಚನೆಯನ್ನು ಹೊರಡಿಸಿಲ್ಲ. ಆದರೆ ಔಷಧಿಗಳ ಕೊರತೆ ಉಂಟಾಗದಂತೆ ತುರ್ತು ಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ. ನಮ್ಮ ಔಷಧ ಅಗತ್ಯಗಳನ್ನು ಪೂರೈಸಲು ನಾವು ಪರ್ಯಾಯ ಮಾರ್ಗಗಳನ್ನು ನೋಡುತ್ತಿದ್ದೇವೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ
Image
ಕಾಶ್ಮೀರದಲ್ಲಿ ರಕ್ತದೋಕುಳಿ; ಇಂದು ಉಗ್ರರ ದಾಳಿ ವೇಳೆ ಆಗಿದ್ದೇನು?
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ಮತ್ತಷ್ಟು ಓದಿ: Indus Waters Treaty: ಭಾರತದಿಂದ ಸಿಂಧೂ ನದಿ ನೀರು ಒಪ್ಪಂದ ಸ್ಥಗಿತ, ಪಾಕಿಸ್ತಾನಕ್ಕಾಗುವ ನಷ್ಟವೇನು?

ಪಾಕಿಸ್ತಾನ DRAP ಚೀನಾ, ರಷ್ಯಾ ಮತ್ತು ಹಲವಾರು ಯುರೋಪಿಯನ್ ದೇಶಗಳಿಂದ ಪರ್ಯಾಯ ಮೂಲಗಳನ್ನು ಹುಡುಕುತ್ತಿದೆ. ರೇಬೀಸ್ ವಿರೋಧಿ ಲಸಿಕೆ, ಹಾವಿನ ವಿಷ ವಿರೋಧಿ, ಕ್ಯಾನ್ಸರ್ ಔಷಧಿಗಳು ಇತ್ಯಾದಿಗಳ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಇದು ಹೊಂದಿದೆ.

ವ್ಯವಹಾರ ಸ್ಥಗಿತಗೊಳಿಸುವಿಕೆಯ ಪರಿಣಾಮಗಳನ್ನು ಎದುರಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, ದೊಡ್ಡ ಸಮಸ್ಯೆ ಉದ್ಭವಿಸಬಹುದು ಎಂದು ಉದ್ಯಮ ಮೂಲಗಳು ಮತ್ತು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.

ಔಷಧಿಗಳ ಕಾಳಸಂತೆ ಹೆಚ್ಚಳವಾಗುವ ಭಯವೂ ಇದೆ. ಪೂರೈಕೆ ಸರಪಳಿಯಲ್ಲಿನ ಅಡಚಣೆಯಿಂದಾಗಿ  ತೀವ್ರ ಕೊರತೆ ಉಂಟಾಗಬಹುದು ಎಂದು ಔಷಧ ವಲಯವು ಭಯಪಡುತ್ತಿದೆ. ಅಲ್ಲಿ ಔಷಧಿಗಳಿಗೆ ಬೇಕಾಗುವ ಕಚ್ಚಾ ವಸ್ತುಗಳ ಶೇಕಡಾ 30 ರಿಂದ 40 ರಷ್ಟು ಭಾರತದಿಂದ ಬರುತ್ತವೆ.

ಪಹಲ್ಗಾಮ್ ದಾಳಿಯ ನಂತರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ನಿರ್ಧಾರಕ್ಕೆ ಪ್ರತಿಕ್ರಿಯೆಯಾಗಿ ಇಸ್ಲಾಮಾಬಾದ್ ಗುರುವಾರ ನವದೆಹಲಿಯೊಂದಿಗಿನ ಎಲ್ಲಾ ವ್ಯಾಪಾರವನ್ನು ಸ್ಥಗಿತಗೊಳಿಸಿದೆ ಮತ್ತು ಇತರ ಕ್ರಮಗಳು ಸೇರಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:46 am, Sun, 27 April 25

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್