AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಸಿದ್ಧತೆ ನೋಡಿಯೇ ಬೆವರಿದ ಪಾಕಿಸ್ತಾನ, ಯುದ್ಧ ಭೀತಿ ಇದೆ ಎಂದ ಪಾಕ್ ರಕ್ಷಣಾ ಸಚಿವ

ಭಾರತದ ಸಿದ್ಧತೆಯನ್ನು ನೋಡಿಯೇ ಪಾಕಿಸ್ತಾನಕ್ಕೆ ಬೆವರಿಳಿದಿದೆ, ಎಲ್​ಒಸಿಯಲ್ಲಿ ಭಾರತ ಯಾವುದೇ ಸಮಯದಲ್ಲಿ ಬೇಕಾದರೂ ದಾಳಿ ನಡೆಸಬಹುದು ಎಂದು ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಹೇಳಿದ್ದಾರೆ. ಎಲ್‌ಒಸಿಯಲ್ಲಿ ಭಾರತ ಯಾವುದೇ ಸ್ಥಳದ ಮೇಲೆ ದಾಳಿ ಮಾಡಬಹುದು ಎಂಬ ವರದಿಗಳಿವೆ. ಸೂಕ್ತ ಪ್ರತ್ಯುತ್ತರ ನೀಡಲಾಗುವುದು, ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದ ಅವರು, ರಾಜಕೀಯ ಲಾಭಕ್ಕಾಗಿ ಈ ಪ್ರದೇಶವನ್ನು ಯುದ್ಧದ ಅಂಚಿಗೆ ತಳ್ಳುತ್ತಿದ್ದಾರೆ ಎಂದು ಹೇಳಿದರು.

ಭಾರತದ ಸಿದ್ಧತೆ ನೋಡಿಯೇ ಬೆವರಿದ ಪಾಕಿಸ್ತಾನ, ಯುದ್ಧ ಭೀತಿ ಇದೆ ಎಂದ ಪಾಕ್ ರಕ್ಷಣಾ ಸಚಿವ
ಪಹಲ್ಗಾಮ್​ನಲ್ಲಿ ಉಗ್ರರ ದಾಳಿ ನಂತರ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪಾಕಿಸ್ತಾನದ ರಕ್ಷಣಾ ಸಚಿವರಿಂದ ಮತ್ತೆ ಹುಚ್ಚುತನದ ಹೇಳಿಕೆ ಹೊರಬಿದ್ದಿದೆ. ಭಾರತ ನಮ್ಮ ತಂಟೆಗೆ ಬಂದ್ರೆ ಮರೆಯಲಾಗದ ಉತ್ತರ ನೀಡ್ತೇವೆ. ಇದುವರೆಗೆ ಯಾರೂ ನೀಡದಂತಹ, ಜೀವನ ಪರ್ಯಂತ ನೆನಪಿಟ್ಟುಕೊಳ್ಳುವಂತೆ ಉತ್ತರ ನೀಡ್ತೇವೆ. ನಮ್ಮ ಮೇಲೆ ಇಸ್ರೇಲ್ ರೀತಿ ದಾಳಿಗೆ ಭಾರತ ಪ್ಲ್ಯಾನ್ ಮಾಡಿದೆ. ನೆತನ್ಯಾಹು ಮಾಡಿದಂತೆ ದಾಳಿ ಮಾಡಲು ಯತ್ನಿಸುತ್ತಿದ್ದಾರೆ. ಆದರೆ ನಮ್ಮ ಅಸ್ತಿತ್ವಕ್ಕೆ ಧಕ್ಕೆ ಬಂದ್ರೆ ಸರ್ವನಾಶ ಮಾಡ್ತೀವಿ. ನಮ್ಮ ಜೊತೆ ಯಾರನ್ನೂ ಕೂಡ ಉಳಿಸೋದಿಲ್ಲ. ಇಡೀ ವಿಶ್ವವನ್ನೇ ನಾಶ ಮಾಡುವುದಾಗಿ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಹೇಳಿಕೆ ನೀಡಿದ್ದಾರೆ. Image Credit source: HW News
ನಯನಾ ರಾಜೀವ್
|

Updated on: May 06, 2025 | 7:49 AM

Share

ಇಸ್ಲಾಮಾಬಾದ್, ಮೇ 06: ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಭಾರತ ಯಾವುದೇ ಸಮಯದಲ್ಲಿ ಬೇಕಾದರೂ ದಾಳಿ ನಡೆಸಬಹುದು ಎಂದು ಪಾಕಿಸ್ತಾನ(Pakistan) ರಕ್ಷಣಾ ಸಚಿವ ಖ್ವಾಜಾ ಆಸಿಫ್​ ಹೇಳಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಎರಡು ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರಗಳ ನಡುವಿನ ಪರಿಸ್ಥಿತಿ ಅತ್ಯಂತ ಸೂಕ್ಷ್ಮವಾಗಿರುವ ಸಮಯದಲ್ಲಿ ಈ ಹೇಳಿಕೆ ನೀಡಿದ್ದಾರೆ.

ಎಲ್‌ಒಸಿಯಲ್ಲಿ ಭಾರತ ಯಾವುದೇ ಸ್ಥಳದ ಮೇಲೆ ದಾಳಿ ಮಾಡಬಹುದು ಎಂಬ ವರದಿಗಳಿವೆ. ಸೂಕ್ತ ಪ್ರತ್ಯುತ್ತರ ನೀಡಲಾಗುವುದು, ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದ ಅವರು, ರಾಜಕೀಯ ಲಾಭಕ್ಕಾಗಿ ಈ ಪ್ರದೇಶವನ್ನು ಯುದ್ಧದ ಅಂಚಿಗೆ ತಳ್ಳುತ್ತಿದ್ದಾರೆ ಎಂದು ಹೇಳಿದರು.

ಪಹಲ್ಗಾಮ್ ದಾಳಿಯ ಬಗ್ಗೆ ಅಂತರರಾಷ್ಟ್ರೀಯ ತನಿಖೆಗೆ ಪಾಕ್ ಪ್ರಧಾನಿ ಶಹಬಾಜ್ ಷರೀಫ್ ಒತ್ತಾಯಿಸಿದ್ದಾರೆ ಎಂದು ಹೇಳಿರುವ ಆಸಿಫ್, ಇಂತಹ ತನಿಖೆಯಿಂದ ಭಾರತವೇ ಈ ದಾಳಿಯಲ್ಲಿ ಭಾಗಿಯಾಗಿದೆಯೇ ಅಥವಾ ಯಾವುದಾದರೂ ಆಂತರಿಕ ಗುಂಪು ಭಾಗಿಯಾಗಿದೆಯೇ ಎಂಬುದು ಸ್ಪಷ್ಟವಾಗುತ್ತದೆ , ಆಧಾರರಹಿತ ಆರೋಪಗಳ ಹಿಂದಿನ ಸತ್ಯವನ್ನು ಬಹಿರಂಗಪಡಿಸುತ್ತದೆ ಎಂದರು.

ಇದನ್ನೂ ಓದಿ
Image
ನಾವು 3 ದಶಕಗಳಿಂದ ಈ ನೀಚ ಕೆಲಸ ಮಾಡ್ತಿದ್ದೀವಿ: ಪಾಕ್ ರಕ್ಷಣಾ ಸಚಿವ ಖ್ವಾಜಾ
Image
ಪಹಲ್ಗಾಮ್ ಉಗ್ರ ದಾಳಿ, ಎಕೆ-47 ಹಿಡಿದ ಶಂಕಿತ ಉಗ್ರನ ಫೋಟೋ ಬಹಿರಂಗ
Image
ಪ್ಯಾಂಟ್​ ಬಿಚ್ಚಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಗುರಿಯಾಗಿಸಿ ಉಗ್ರರ ದಾಳಿ
Image
ಪಹಲ್ಗಾಮ್ ಉಗ್ರ ದಾಳಿಯ ಮಾಸ್ಟರ್​ಮೈಂಡ್ ಸೈಫುಲ್ಲಾ ಖಾಲಿದ್ ಯಾರು?

ಕಳೆದ ವಾರ, ಪಾಕಿಸ್ತಾನದ ಮಾಹಿತಿ ಸಚಿವ ಅಟ್ಟಾ ತರಾರ್ ಅವರು ಮುಂದಿನ 24 ರಿಂದ 36 ಗಂಟೆಗಳು ಬಹಳ ನಿರ್ಣಾಯಕ ಎಂದು ಹೇಳಿದ್ದರು. ಭಾರತದಿಂದ ದಾಳಿಯ ಸಾಧ್ಯತೆಯನ್ನು ವ್ಯಕ್ತಪಡಿಸಿದ್ದರು. ಆದರೆ ಈ ಸಮಯ ಕಳೆದಿದೆ ಮತ್ತು ಭಾರತ ಯಾವುದೇ ಕ್ರಮ ಕೈಗೊಂಡಿಲ್ಲ.

ಮತ್ತಷ್ಟು ಓದಿ: Khawaja Asif: ಭಾರತದಲ್ಲಿ ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸಿಫ್ ‘ಎಕ್ಸ್​’ ಖಾತೆ ನಿರ್ಬಂಧ

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದರು, ಅದರಲ್ಲಿ ಹೆಚ್ಚಿನವರು ಪ್ರವಾಸಿಗರಾಗಿದ್ದರು. ದಕ್ಕೆ ಪ್ರತಿಕ್ರಿಯೆಯಾಗಿ, ಭಾರತವು ಸಿಂಧೂ ನದಿ ಜಲ ಒಪ್ಪಂದವನ್ನು ಅಮಾನತುಗೊಳಿಸುವುದು, ಅಟ್ಟಾರಿಯಲ್ಲಿ ಗಡಿಯನ್ನು ಮುಚ್ಚುವುದು ಮತ್ತು ರಾಜತಾಂತ್ರಿಕ ಸಂಬಂಧಗಳನ್ನು ಕೆಳಮಟ್ಟಕ್ಕಿಳಿಸುವುದು ಸೇರಿದಂತೆ ಪಾಕಿಸ್ತಾನದ ವಿರುದ್ಧ ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ.

ರಾಜ್ಯಗಳು ನಾಗರಿಕ ರಕ್ಷಣೆಗೆ ಸಿದ್ಧರಾಗಲು ಮತ್ತು ವಾಯುದಾಳಿ ಎಚ್ಚರಿಕೆ ಸೈರನ್‌ಗಳನ್ನು ಬಳಸಲು ಕೇಳಿಕೊಳ್ಳಲಾಗಿದೆ. ನಾವು 2016 ಮತ್ತು 2017 ರಲ್ಲಿ ವಿಶ್ವಸಂಸ್ಥೆಗೆ ಭಾರತ ಭಯೋತ್ಪಾದನೆಗೆ ಹಣಕಾಸು ಒದಗಿಸುತ್ತಿರುವ ವೀಡಿಯೊಗಳನ್ನು ಒಳಗೊಂಡಂತೆ ಪುರಾವೆಗಳನ್ನು ಒದಗಿಸಿದ್ದೇವೆ ಎಂದು ಹೇಳಿದ್ದಾರೆ.

ಎರಡೂ ಪ್ರಾಂತ್ಯಗಳಲ್ಲಿ ಇತ್ತೀಚೆಗೆ ಸಂಭವಿಸಿದ ಭಯೋತ್ಪಾದನೆಯ ಅಲೆಯನ್ನು ಭಾರತದ ಬೆಂಬಲಿತ ಗುಂಪುಗಳು ಎಂದು ಹೇಳಲಾಗುತ್ತಿದ್ದು, ಅಫ್ಘಾನಿಸ್ತಾನದಿಂದ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ