ಬಲೂಚಿಸ್ತಾನ: ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಕಂದಕಕ್ಕೆ ಬಿದ್ದು, 17 ಮಂದಿ ಸಾವು, 30 ಜನರಿಗೆ ಗಾಯ
ಬಲೂಚಿಸ್ತಾನದ ಹಬ್ ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಆಳವಾದ ಕಂದಕಕ್ಕೆ ಬಿದ್ದು 17 ಮಂದಿ ಮೃತಪಟ್ಟು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ದಾರುಣ ಘಟನೆ ಗುರುವಾರ ನಡೆದಿದೆ. ಯಾತ್ರಿಕರು ಬಲೂಚಿಸ್ತಾನದ ಖುಜ್ದಾರ್ ಜಿಲ್ಲೆಯ ದೂರದ ಮುಸ್ಲಿಂ ಸೂಫಿ ದರ್ಗಾ ಶಾ ನೂರಾನಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಬಲೂಚಿಸ್ತಾನದ ಹಬ್ ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಆಳವಾದ ಕಂದಕಕ್ಕೆ ಬಿದ್ದು 17 ಮಂದಿ ಮೃತಪಟ್ಟು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ದಾರುಣ ಘಟನೆ ಗುರುವಾರ ನಡೆದಿದೆ. ಯಾತ್ರಿಕರು ಬಲೂಚಿಸ್ತಾನದ ಖುಜ್ದಾರ್ ಜಿಲ್ಲೆಯ ದೂರದ ಮುಸ್ಲಿಂ ಸೂಫಿ ದರ್ಗಾ ಶಾ ನೂರಾನಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಚಾಲನೆಯ ಸಮಯದಲ್ಲಿ ತೀಕ್ಷ್ಣವಾದ ತಿರುವುದಿಂದಾಗಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ . ಘಟನೆಯಲ್ಲಿ ಗಾಯಗೊಂಡಿರುವ ಟ್ರಕ್‌ನ ಚಾಲಕ ಕರೀಂ ಬಕ್ಷ್‌ನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಮಕ್ಲಿಯ ಖಾಸಿಮ್ ಜೋಖಿಯೋ ಗ್ರಾಮದಿಂದ 70 ಕ್ಕೂ ಹೆಚ್ಚು ಜನರು ಯಾತ್ರೆಗೆ ತೆರಳಿದ್ದರು.
ಅಪಘಾತದಲ್ಲಿ ಒಟ್ಟು 17 ಮಂದಿ ಸಾವನ್ನಪ್ಪಿದ್ದು, ಅವರಲ್ಲಿ 15 ಮಂದಿಯನ್ನು ಗುರುತಿಸಲಾಗಿದ್ದು, 38 ಮಂದಿ ಗಾಯಗೊಂಡಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ಮತ್ತಷ್ಟು ಓದಿ: ಹರ್ಯಾಣ: 40 ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಪಲ್ಟಿ, ಆರು ಮಕ್ಕಳು ಸಾವು
ರಕ್ಷಣಾ ಕಾರ್ಯಾಚರಣೆಯು ಸುಮಾರು ಎರಡು ಗಂಟೆಗಳನ್ನು ತೆಗೆದುಕೊಂಡಿತು ಮತ್ತು 17 ಮೃತ ದೇಹಗಳನ್ನು ಮೊದಲು ಹಬ್ ಜಿಲ್ಲೆಯ ಸಿವಿಲ್ ಆಸ್ಪತ್ರೆಯ ಶವಾಗಾರದಲ್ಲಿರಸಲಾಗಿದೆ. ಬಲೂಚಿಸ್ತಾನ ಮುಖ್ಯಮಂತ್ರಿ ಸರ್ಫ್ರಾಜ್ ಬುಗ್ತಿ ಕೂಡ ಘಟನೆಯ ಬಗ್ಗೆ ಗಮನ ಹರಿಸಿದ್ದು, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗಳಿಗೆ ವರ್ಗಾಯಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
ಪಾಕಿಸ್ತಾನದಲ್ಲಿ ರಸ್ತೆ ಅಪಘಾತಗಳು ಸಾಮಾನ್ಯವಾಗಿದೆ ಮತ್ತು ಪ್ರತಿದಿನ ಹಲವಾರು ಜೀವಗಳನ್ನು ಬಲಿ ತೆಗೆದುಕೊಳ್ಳುತ್ತದೆ . ಕಳಪೆ ರಸ್ತೆಗಳು, ಸಂಚಾರ ನಿಯಮಗಳನ್ನು ನಿರ್ಲಕ್ಷಿಸುವುದರಿಂದ ಪಾಕಿಸ್ತಾನದಲ್ಲಿ ಆಗಾಗ್ಗೆ ಮಾರಣಾಂತಿಕ ಅಪಘಾತಗಳು ಸಂಭವಿಸುತ್ತವೆ.
ಫೆಬ್ರವರಿಯಲ್ಲಿ, ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಅವರು ಪ್ರಯಾಣಿಸುತ್ತಿದ್ದ ಬಸ್ಸೊಂದು ಕಂದರಕ್ಕೆ ಬಿದ್ದಾಗ ಕನಿಷ್ಠ 10 ಜನರು ಸಾವನ್ನಪ್ಪಿದರು ಮತ್ತು 15 ಜನರು ಗಾಯಗೊಂಡಿದ್ದರು.
ಕಳೆದ ವರ್ಷದ ಡಿಸೆಂಬರ್‌ನಲ್ಲಿ ಬಲೂಚಿಸ್ತಾನದ ಖುಜ್ದಾರ್‌ನಲ್ಲಿರುವ ಶಾಹ್ ನೂರಾನಿ ದರ್ಗಾದಿಂದ ಕರಾಚಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಪ್ರಯಾಣಿಕರು ಮೃತಪಟ್ಟಿದ್ದರು.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ